bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
1 Chronicles 11
1 Chronicles 11
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 12 →
1
ಇಸ್ರಾಯೇಲರೆಲ್ಲರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ಇಗೋ, ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ.
2
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ, ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ನಿನ್ನ ದೇವರಾದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ,” ಎಂದು ಹೇಳಿ ವಂದಿಸಿದರು.
3
ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಯೆಹೋವ ದೇವರು ಸಮುಯೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
4
ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಹೋದರು.
5
ಆ ದೇಶದ ಮೂಲನಿವಾಸಿಗಳಾದ ಯೆಬೂಸಿಯರು ದಾವೀದನಿಗೆ, “ನೀನು ಇದರೊಳಗೆ ಬರಲು ಸಾಧ್ಯವಿಲ್ಲ,” ಎಂದರು. ಆದರೂ ದಾವೀದನು, ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.
6
“ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ, ಅವನು ನನ್ನ ದಳಪತಿಯಾಗುವನು,” ಎಂದು ದಾವೀದ ಪ್ರಕಟಿಸಿದ್ದನು. ಹಾಗೆಯೇ ಚೆರೂಯಳ ಮಗ ಯೋವಾಬನು ಮೊದಲು ಹೋಗಿ ದಳಪತಿಯಾದನು.
7
ದಾವೀದನು ಕೋಟೆಯಲ್ಲಿ ವಾಸಮಾಡಿದನು. ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟರು.
8
ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಪಟ್ಟಣವನ್ನು ಪುನಃ ಕಟ್ಟಿದನು. ಆದರೆ ಪಟ್ಟಣದ ಉಳಿದ ಭಾಗವನ್ನು ಯೋವಾಬನು ಭದ್ರಮಾಡಿಸಿದನು.
9
ಹೀಗೆಯೇ ಸೇನಾಧೀಶ್ವರ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.
10
ದಾವೀದನ ಬಳಿಯಲ್ಲಿದ್ದ ಮುಖ್ಯಸ್ಥರಾದ ಪರಾಕ್ರಮಶಾಲಿಗಳು ಇವರೇ. ಇಸ್ರಾಯೇಲನ್ನು ಕುರಿತು ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರ, ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮ ಸಂಪೂರ್ಣ ಸಹಾಯ ನೀಡಿದರು.
11
ದಾವೀದನ ಪರಾಕ್ರಮಶಾಲಿಗಳ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು. ಇವನು ತನ್ನ ಈಟಿಯಿಂದ ಮುನ್ನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು.
12
ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು, ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.
13
ಪಸ್ ದಮ್ಮೀಮ್ ಎಂಬಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕಾಗಿ ಸೇರಿದಾಗ ಇವನು ದಾವೀದನ ಸಂಗಡ ಇದ್ದನು. ಅಲ್ಲಿ ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು.
14
ಆಗ ಇವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು. ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.
15
ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಗುಡ್ಡಕ್ಕೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.
16
ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
17
ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.
18
ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದು,
19
“ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗಿ ಮಾಡಲಿ. ನಾನು ಈ ಮನುಷ್ಯರ ಪ್ರಾಣದ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣದಾಶೆ ತೊರೆದು ಈ ನೀರನ್ನು ತಂದರಲ್ಲಾ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
20
ಇದಲ್ಲದೆ ಯೋವಾಬನ ಸಹೋದರನಾದ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.
21
ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು; ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ.
22
ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು; ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
23
ಅವನು ಏಳುವರೆ ಅಡಿ ಎತ್ತರವಾಗಿದ್ದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು; ಆ ಈಜಿಪ್ಟಿನವನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಷ್ಟು ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ, ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.
24
ಇವುಗಳನ್ನು ಯೆಹೋಯಾದಾವನ ಮಗ ಬೆನಾಯನು ಮಾಡಿದ್ದರಿಂದ, ಮೂರು ಮಂದಿ ಪರಾಕ್ರಮಶಾಲಿಗಳಂತೆಯೇ ಹೆಸರುಗೊಂಡನು.
25
ಅವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು.
26
ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿಗಳು ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು; ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು;
27
ಹರೋರಿಯನಾದ ಶಮ್ಮೋತನು; ಪೆಲೋನ್ಯನಾದ ಹೆಲೆಚನು;
28
ತೆಕೋವದ ಇಕ್ಕೇಷನ ಮಗನಾದ ಈರನು; ಅನಾತೋತಿನವನಾದ ಅಬೀಯೆಜೆರನು;
29
ಹುಷಾ ಊರಿನವನಾದ ಸಿಬ್ಬೆಕೈ; ಅಹೋಹ್ಯನಾದ ಈಲೈ;
30
ನೆಟೋಫದವನಾದ ಮಹರೈ; ನೆಟೋಫದವನಾದ ಬಾಣನ ಮಗ ಹೆಲೇದ್;
31
ಬೆನ್ಯಾಮೀನ್ಯರಿಗೆ ಸೇರಿದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ, ಪಿರಾತೋನ್ಯನಾದ ಬೆನಾಯನು;
32
ಹೊಳೆಗಳುಳ್ಳ ಗಾಷ್ ಊರಿನವನಾದ ಹೂರೈ; ಅರಾಬಾ ತಗ್ಗಿನವನಾದ ಅಬೀಯೇಲನು;
33
ಬಹರೂಮ್ಯನಾದ ಅಜ್ಮಾವೆತನು; ಶಾಲ್ಬೋನ್ಯನಾದ ಎಲೆಯಖ್ಬಾನು;
34
ಗೀಜೋನ್ಯನಾದ ಹಾಷೇಮನ ಪುತ್ರರು; ಹರಾರ್ಯನಾದ ಶಾಗೇಯ ಮಗ ಯೋನಾತಾನನು;
35
ಹರಾರ್ಯನಾದ ಶಾಕಾರನ ಮಗನಾದ ಅಹೀಯಾಮನು; ಊರನ ಮಗನಾದ ಎಲಿಫಾಲನು;
36
ಮೆಕೆರಾತಿಯನಾದ ಹೇಫೆರನು; ಪೆಲೋನ್ಯನಾದ ಅಹೀಯನು;
37
ಕರ್ಮೇಲ್ಯನಾದ ಹೆಚ್ರೋ; ಎಜ್ಬೈನ ಮಗನಾದ ನಾರಾಯಿ;
38
ನಾತಾನನ ಸಹೋದರನಾದ ಯೋಯೇಲನು; ಹಗ್ರೀಯನ ಮಗನಾದ ಮಿಬ್ಹಾರನು;
39
ಅಮ್ಮೋನಿಯನಾದ ಚೆಲೆಕನು; ಚೆರೂಯಳ ಮಗನಾದ ಯೋವಾಬನ ಆಯುಧವಾಹಕನು ಆಗಿದ್ದ ಬೇರೋತ್ಯನಾದ ನಹರೈ;
40
ಯೆತೆರಿಯನಾದ ಈರನು; ಯೆತೆರಿಯನಾದ ಗಾರೇಬನು;
41
ಹಿತ್ತಿಯನಾದ ಊರೀಯನು; ಅಹ್ಲಾಯಿಯ ಮಗನಾದ ಜಾಬಾದನು;
42
ರೂಬೇನ್ಯನಾದ ಶೀಜನ ಮಗನಾದ ಅದೀನನು; ಇವನು ರೂಬೇನ್ಯರಲ್ಲಿ ಅಧಿಪತಿಯಾಗಿದ್ದನು; ಮೂವತ್ತು ಮಂದಿ ಅವನ ಸಂಗಡ ಇದ್ದರು.
43
ಮಾಕನ ಮಗನಾದ ಹಾನಾನನು; ಮೆತೆನದವನಾದ ಯೋಷಾಫಾಟ್;
44
ಅಷ್ಟೆರಾತ್ಯನಾದ ಉಜ್ಜೀಯ; ಅರೋಯೇರಿನಾದ ಹೋತಾಮನ ಮಕ್ಕಳಾಗಿರುವ ಶಾಮಾ, ಯೆಹೀಯೇಲ್;
45
ಶಿಮ್ರಿಯ ಮಗನಾದ ಎದೀಗಯೇಲ್; ಅವನ ಸಹೋದರನಾದ, ತೀಚೀಯನಾದ ಯೋಹ;
46
ಮಹಾವಿಯನಾದ ಎಲೀಯೇಲ್; ಎಲ್ನಾಮನ ಮಕ್ಕಳಾದ ಯೆರೀಬೈ ಮತ್ತು ಯೋಷವ್ಯ; ಮೋವಾಬ್ಯನಾದ ಇತ್ಮ;
47
ಎಲೀಯೇಲ್; ಓಬೇದ್; ಮೆಚೊಬಾಯದವನಾದ ಯಾಸೀಯೇಲ್.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 12 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29