bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
1 Chronicles 25
1 Chronicles 25
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 26 →
1
ಇದಲ್ಲದೆ ದಾವೀದನೂ, ಸೈನ್ಯಾಧಿಪತಿಗಳೂ ಆಸಾಫ್, ಹೇಮಾನ್, ಯೆದುತೂನ್; ಇವರ ಪುತ್ರರಲ್ಲಿ ಕಿನ್ನರಿಗಳಿಂದಲೂ, ವೀಣೆಗಳಿಂದಲೂ, ತಾಳಗಳಿಂದಲೂ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರವಾಗಿತ್ತು.
2
ಅವರು ಯಾರೆಂದರೆ: ಆಸಾಫನ ಪುತ್ರರಲ್ಲಿ ಜಕ್ಕೂರ್, ಯೋಸೇಫ, ನೆತನ್ಯ, ಅಶರೇಲ; ಇವರು ಆಸಾಫನ ಕೈಕೆಳಗೆ ಪ್ರವಾದಿಸಿದರು. ಇವರು ಅರಸನ ಮೇಲ್ವಿಚಾರಣೆಯಲ್ಲಿದ್ದರು.
3
ಯೆದುತೂನನ ಪುತ್ರರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಈ ಆರು ಮಂದಿಯು ಯೆದುತೂನನ ಪುತ್ರರು. ತಮ್ಮ ತಂದೆ ಯೆದುತೂನನ ಕೈಕೆಳಗೆ ಕಿನ್ನರಿಗಳನ್ನು ಬಾರಿಸಿ, ಯೆಹೋವ ದೇವರನ್ನು ಕೊಂಡಾಡಿ, ಸ್ತುತಿಸಿ ಪ್ರವಾದಿಸುತ್ತಿದ್ದರು.
4
ಹೇಮಾನನ ಪುತ್ರರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂಯೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ್, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್, ಮಹಜೀಯೋತ್.
5
ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೇಮಾನನ ಪುತ್ರರು. ದೇವರು ಹೇಮಾನನಿಗೆ ಹದಿನಾಲ್ಕು ಮಂದಿ ಪುತ್ರರನ್ನೂ, ಮೂರು ಮಂದಿ ಪುತ್ರಿಯರನ್ನೂ ಕೊಟ್ಟಿದ್ದರು.
6
ಯೆಹೋವ ದೇವರ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ, ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಹೀಗೆ ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.
7
ಹೀಗೆಯೇ ಅವರ ಲೆಕ್ಕವೂ, ಯೆಹೋವ ದೇವರ ಹಾಡುಗಳಲ್ಲಿ ತರಬೇತುಪಡೆದ ಸಮಸ್ತ ಪ್ರವೀಣರ ಲೆಕ್ಕ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಬತ್ತೆಂಟು ಮಂದಿಯಾಗಿದ್ದರು.
8
ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ, ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆ ಎದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
9
ಆಸಾಫನಿಗೋಸ್ಕರ ಮೊದಲನೆಯ ಚೀಟು ಯೋಸೇಫನಿಗೆ ಬಂತು. ಎರಡನೆಯದು ಗೆದಲ್ಯನಿಗೆ; ಅವನೂ, ಅವನ ಸಹೋದರರೂ, ಅವನ ಪುತ್ರರೂ ಹನ್ನೆರಡು ಮಂದಿ.
10
ಮೂರನೆಯದು ಜಕ್ಕೂರನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ;
11
ನಾಲ್ಕನೆಯದು ಇಚ್ರೀಗೆ; ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
12
ಐದನೆಯದು ನೆತನ್ಯನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
13
ಆರನೆಯದು ಬುಕ್ಕೀಯನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
14
ಏಳನೆಯದು ಯೆಸರೇಲನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
15
ಎಂಟನೆಯದು ಯೆಶಾಯನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
16
ಒಂಬತ್ತನೆಯವನು ಮತ್ತನ್ಯ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
17
ಹತ್ತನೆಯದು ಶಿಮ್ಮಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
18
ಹನ್ನೊಂದನೆಯದು ಅಜರಯೇಲನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
19
ಹನ್ನೆರಡನೆಯದು ಹಷಬ್ಯನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
20
ಹದಿಮೂರನೆಯದು ಶುಬಯೇಲನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
21
ಹದಿನಾಲ್ಕನೆಯವನು ಮತ್ತಿತ್ಯ; ಇವನೂ, ಇವನ ಸಹೋದರರೂ, ಮಕ್ಕಳೂ ಕೂಡಿ ಹನ್ನೆರಡು ಮಂದಿ.
22
ಹದಿನೈದನೆಯದು ಯೆರೆಮೋತನಿಗೆ; ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
23
ಹದಿನಾರನೆಯದು ಹನನ್ಯನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
24
ಹದಿನೇಳನೆಯದು ಯೊಷ್ಬೆಕಾಷನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
25
ಹದಿನೆಂಟನೆಯದು ಹನಾನೀಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
26
ಹತ್ತೊಂಬತ್ತನೆಯದು ಮಲ್ಲೋತಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
27
ಇಪ್ಪತ್ತನೆಯದು ಎಲಿಯಾತನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
28
ಇಪ್ಪತ್ತೊಂದನೆಯದು ಹೋತೀರನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
29
ಇಪ್ಪತ್ತೆರಡನೆಯದು ಗಿದ್ದಲ್ತಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
30
ಇಪ್ಪತ್ತಮೂರನೆಯದು ಮಹಜೀಯೋತನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
31
ಇಪ್ಪತ್ತನಾಲ್ಕನೆಯದು ರೋಮಮ್ತಿಯೆಜೆರನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 26 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29