bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
2 Chronicles 11
2 Chronicles 11
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 12 →
1
ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು, ಯೆಹೂದ ಮತ್ತು ಬೆನ್ಯಾಮೀನವರ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.
2
ಆದರೆ ಯೆಹೋವ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,
3
“ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನರಲ್ಲಿರುವ ಸಮಸ್ತ ಇಸ್ರಾಯೇಲರಿಗೂ ಹೇಳಬೇಕಾದದ್ದೇನೆಂದರೆ,
4
‘ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ. ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯಾರೊಬ್ಬಾಮನ ಮೇಲೆ ಹೋಗದೆ ಹಿಂದಿರುಗಿ ಹೋದರು.
5
ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ, ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳನ್ನು ಕಟ್ಟಿಸಿದನು.
6
ಅವನು ಬೇತ್ಲೆಹೇಮನ್ನೂ, ಏಟಾಮನ್ನೂ, ತೆಕೋವನ್ನೂ,
7
ಬೇತ್ ಚೂರ್ ಪಟ್ಯಣವನ್ನೂ, ಸೋಕೋನನ್ನೂ, ಅದುಲ್ಲಾಮನ್ನೂ,
8
ಗತ್ ಊರನ್ನೂ ಮಾರೇಷಾವನ್ನೂ ಜೀಫನ್ನೂ,
9
ಅದೋರೈಮನ್ನೂ, ಲಾಕೀಷನ್ನೂ, ಅಜೇಕವನ್ನೂ,
10
ಚೊರ್ಗವನ್ನೂ, ಅಯ್ಯಾಲೋನನ್ನೂ, ಹೆಬ್ರೋನನ್ನೂ ಕಟ್ಟಿಸಿದನು. ಇವು ಯೆಹೂದದಲ್ಲಿಯೂ, ಬೆನ್ಯಾಮೀನರಲ್ಲಿಯೂ ಕೋಟೆಯುಳ್ಳ ಪಟ್ಟಣಗಳಾಗಿವೆ.
11
ಇದಲ್ಲದೆ ಅವನು ಕೋಟೆಗಳನ್ನು ಬಲಪಡಿಸಿ, ಅವುಗಳಲ್ಲಿ ನಾಯಕರನ್ನೂ, ಆಹಾರ, ಎಣ್ಣೆ, ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.
12
ಪ್ರತಿ ಪಟ್ಟಣದಲ್ಲಿ ಖೇಡ್ಯಗಳನ್ನೂ, ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾಮೀನವರು ಅವನ ಕಡೆ ಇದ್ದುದರಿಂದ, ಅವುಗಳನ್ನು ಭದ್ರಪಡಿಸಿದನು.
13
ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜಕರೂ, ಲೇವಿಯರೂ ತಮ್ಮ ಸಮಸ್ತ ಪ್ರಾಂತಗಳಿಂದ ಅವನ ಬಳಿಗೆ ಪುನಃ ಬಂದರು.
14
ಲೇವಿಯರು ತಮ್ಮ ಹುಲ್ಲುಗಾವಲು ಮತ್ತು ಆಸ್ತಿಯನ್ನು ತ್ಯಜಿಸಿ ಯೆಹೂದ ಮತ್ತು ಯೆರೂಸಲೇಮಿಗೆ ಬಂದರು, ಏಕೆಂದರೆ ಯಾರೊಬ್ಬಾಮನೂ ಅವನ ಮಕ್ಕಳು ಯೆಹೋವ ದೇವರಿಗೆ ಯಾಜಕ ಸೇವೆ ಮಾಡದ ಹಾಗೆ ತಿರಸ್ಕರಿಸಿದನು.
15
ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ, ಯಾರೊಬ್ಬಾಮನು ಮಾಡಿದ ಕರುಗಳ ಮೂರ್ತಿಪೂಜೆಗಾಗಿ ತಾನೇ ಯಾಜಕರನ್ನು ನೇಮಿಸಿದ್ದರಿಂದ,
16
ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.
17
ಹೀಗೆ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ, ಸೊಲೊಮೋನನ ಮಗ ರೆಹಬ್ಬಾಮನನ್ನು ಮೂರು ವರ್ಷಗಳವರೆಗೂ ಬಲಪಡಿಸಿದರು. ಅವರು ಮೂರು ವರ್ಷಗಳವರೆಗೂ ದಾವೀದನ, ಸೊಲೊಮೋನನ ಮಾರ್ಗದಲ್ಲಿ ನಡೆದರು.
18
ರೆಹಬ್ಬಾಮನು ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು. ಈ ಮಹಲತ್ ದಾವೀದನ ಮಗ ಯೆರೀಮೋತ್ ಹಾಗು ಅಬೀಹೈಲರ ಮಗಳು. ಈ ಅಬೀಹೈಲಳು ಇಷಯನ ಮೊಮ್ಮಗಳೂ, ಎಲೀಯಾಬನ ಮಗಳೂ ಆಗಿದ್ದಳು.
19
ಅಬೀಹಾಯಿಲಳು ಯೆಗೂಷ್, ಶೆಮರ್ಯ, ಜಹಾಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.
20
ಇವಳ ತರುವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಮದುವೆಮಾಡಿಕೊಂಡನು. ಇವಳು ಅವನಿಗೆ ಅಬೀಯನನ್ನೂ, ಅತ್ತೈಯನ್ನೂ, ಜೀಜನನ್ನೂ, ಶೆಲೋಮೀತನನ್ನೂ ಹೆತ್ತಳು.
21
ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ, ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನು ಇಪ್ಪತ್ತೆಂಟು ಮಂದಿ ಪುತ್ರರನ್ನೂ, ಅರವತ್ತು ಮಂದಿ ಪುತ್ರಿಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿಯರಿಗಿಂತಲೂ, ಉಪಪತ್ನಿಯರಿಗಿಂತಲೂ ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಹೆಚ್ಚಾಗಿ ಪ್ರೀತಿಮಾಡಿದನು.
22
ರೆಹಬ್ಬಾಮನು ಮಾಕ ಎಂಬವಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ಯುವರಾಜನನ್ನಾಗಿ ಮಾಡಿದನು. ಏಕೆಂದರೆ ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.
23
ಇದಲ್ಲದೆ ಅವನು ವಿವೇಕವಾಗಿ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾಮೀನಿನ ದೇಶಗಳಲ್ಲಿ ಇರುವ ಎಲ್ಲಾ ಬಲವಾದ ಪಟ್ಟಣಗಳಲ್ಲಿ ಚದರಿಸಿ, ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಅವರಿಗೆ ಅನೇಕ ಹೆಂಡತಿಯರನ್ನು ಕೊಟ್ಟನು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 12 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36