bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
2 Chronicles 3
2 Chronicles 3
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 4 →
1
ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆ ದಾವೀದನಿಗೆ ಯೆಹೋವ ದೇವರು ಕಾಣಿಸಿಕೊಂಡ ಸ್ಥಳವಾದ ಮೊರೀಯಾ ಬೆಟ್ಟದ ಮೇಲೆ, ದಾವೀದನು ಸಿದ್ಧಮಾಡಿದ ಸ್ಥಳವಾದ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.
2
ತನ್ನ ಆಳಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿವಸದಲ್ಲಿ ಕಟ್ಟುವುದಕ್ಕೆ ಆರಂಭಿಸಿದನು.
3
ದೇವರ ಆಲಯವನ್ನು ಕಟ್ಟುವುದಕ್ಕೆ ಸೊಲೊಮೋನನು ಹಾಕಿಸಿದ ಅಸ್ತಿವಾರಗಳು ಏನೆಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಸುಮಾರು 27 ಮೀಟರ್ ಮತ್ತು ಅದರ ಅಗಲ 9 ಮೀಟರ್;
4
ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು; 54 ಮೀಟರ್ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಸಿದನು.
5
ಅವನು ದೊಡ್ಡ ತುರಾಯಿ ಮರಗಳಿಂದ ಮುಚ್ಚಿದ ಕೋಣೆಯನ್ನು ಶುದ್ಧ ಬಂಗಾರದಿಂದ ಹೊದಿಸಿ, ಅದರ ಮೇಲೆ ಖರ್ಜೂರದ ಗಿಡಗಳನ್ನೂ, ಸರಪಣಿಗಳನ್ನೂ ಕೆತ್ತಿಸಿದನು.
6
ಇದಲ್ಲದೆ ಸೌಂದರ್ಯದ ನಿಮಿತ್ತವಾಗಿ ಅಮೂಲ್ಯವಾದ ರತ್ನಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮ್ ದೇಶದ್ದು.
7
ಆಲಯದ ತೊಲೆಗಳನ್ನೂ, ಸ್ತಂಭಗಳನ್ನೂ, ಗೋಡೆಗಳನ್ನೂ, ಬಾಗಿಲುಗಳನ್ನೂ, ಅವನು ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳನ್ನೂ ಕೆತ್ತಿಸಿದನು.
8
ಅವನು ಮಹಾಪರಿಶುದ್ಧವಾದ ಸ್ಥಳವನ್ನು ಕಟ್ಟಿದನು. ಅದರ ಉದ್ದವು ಆಲಯದ ಅಗಲದ ಪ್ರಕಾರ 9 ಮೀಟರ್; ಅದರ ಅಗಲ 9 ಮೀಟರ್. ಅವನು ಅದನ್ನು 20,000 ಕಿಲೋಗ್ರಾಂ ಶುದ್ಧ ಬಂಗಾರದಿಂದ ಹೊದಿಸಿದನು.
9
ಅದರ ಮೊಳೆಗಳು ಐನೂರ ಎಪ್ಪತ್ತು ಕಿಲೋಗ್ರಾಂಗಳ ತೂಕ ಬಂಗಾರದ್ದಾಗಿತ್ತು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.
10
ಮಹಾಪರಿಶುದ್ಧವಾದ ಸ್ಥಳದಲ್ಲಿ ಎರಡು ಕೆರೂಬಿಗಳನ್ನು ಮಾಡಿಸಿ, ಬಂಗಾರದಿಂದ ಅವುಗಳನ್ನು ಹೊದಿಸಿದನು.
11
ಕೆರೂಬಿಗಳ ರೆಕ್ಕೆಗಳು 9 ಮೀಟರ್ ಉದ್ದವಾಗಿದ್ದವು. ಒಂದು ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಆಲಯದ ಗೋಡೆಯವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಎರಡೂವರೆ ಮೀಟರ್ ಉದ್ದವಾಗಿದ್ದು, ಇನ್ನೊಂದು ಕೆರೂಬಿಯ ರೆಕ್ಕೆಯವರೆಗೂ ಮುಟ್ಟಿತ್ತು.
12
ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಆಲಯದ ಗೋಡೆಯವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿಕೊಂಡಿತ್ತು.
13
ಈ ಕೆರೂಬಿಗಳ ರೆಕ್ಕೆಗಳು 9 ಮೀಟರ್ ಉದ್ದಕ್ಕೆ ಚಾಚಿಕೊಂಡವು. ಅವು ತಮ್ಮ ಕಾಲುಗಳ ಮೇಲೆ ನಿಂತವು. ಅವುಗಳ ಮುಖಗಳು ಒಳಗಡೆಯಾಗಿದ್ದವು.
14
ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ಹೊಸೆದ ನಾರಿನಿಂದ ಮಾಡಿಸಿ, ಅದರಲ್ಲಿ ಕೆರೂಬಿಗಳುಳ್ಳದ್ದನ್ನಾಗಿ ಮಾಡಿಸಿದನು.
15
ಇದಲ್ಲದೆ ಅವನು ಕಟ್ಟಡದ ಪ್ರವೇಶದ್ವಾರದಲ್ಲಿ ಎರಡು ಸ್ತಂಭಗಳನ್ನು ನಿರ್ಮಿಸಿದನು, ಪ್ರತಿಯೊಂದೂ ಹದಿನೈದು ಮೀಟರ್ ಎಪ್ಪತ್ತೈದು ಸೆಂಟಿಮೀಟರ್ ಎತ್ತರ, ಪ್ರತಿಯೊಂದರ ಮೇಲೆಯೂ ನಿರ್ಮಿಸಲಾದ ಪ್ರತಿಯೊಂದು ತಲೆಗಳು ಎರಡೂವರೆ ಮೀಟರ್ ಉದ್ದವಿತ್ತು.
16
ಗರ್ಭಗುಡಿಯಲ್ಲಿ ಸರಪಣಿಗಳಂತೆ ಮಾಡಿ, ಸ್ತಂಭಗಳ ತುದಿಗಳ ಮೇಲೆ ಇಟ್ಟು, ನೂರು ದಾಳಿಂಬೆ ಹಣ್ಣುಗಳನ್ನು ಮಾಡಿ, ಸರಪಣಿಗಳ ಮೇಲೆ ಇರಿಸಿದನು.
17
ಆ ಸ್ತಂಭಗಳನ್ನು ಮಂದಿರದ ಮುಂಭಾಗದಲ್ಲಿ ಒಂದನ್ನು ಬಲಗಡೆಯಲ್ಲಿಯೂ, ಇನ್ನೊಂದನ್ನು ಎಡಗಡೆಯಲ್ಲಿಯೂ ನಿಲ್ಲಿಸಿದನು. ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್ ಎಂದೂ ಹೆಸರಿಟ್ಟನು.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 4 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36