bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
2 Chronicles 9
2 Chronicles 9
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 10 →
1
ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ, ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
2
ಆಗ ಸೊಲೊಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು, ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದ್ದರಿಂದ ಎಲ್ಲವುಗಳಿಗೂ ಉತ್ತರಿಸಿದನು.
3
ಶೆಬದ ರಾಣಿಯು ಸೊಲೊಮೋನನ ಜ್ಞಾನವನ್ನೂ, ಅವನು ಕಟ್ಟಿಸಿದ ಅರಮನೆಯನ್ನೂ,
4
ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.
5
ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ.
6
ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ನಿನ್ನ ಮಹಾಜ್ಞಾನದಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.
7
ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.
8
ನಿನ್ನ ದೇವರಾದ ಯೆಹೋವ ದೇವರಿಗೋಸ್ಕರ ಅರಸನಾಗಿರುವಂತೆ ತಮ್ಮ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ಅವರನ್ನು ಯುಗಯುಗಕ್ಕೂ ಸ್ಥಿರಗೊಳಿಸಬೇಕೆಂದಿದ್ದಾರೆ. ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.
9
ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಗಂಧದ್ರವ್ಯಗಳಿಗೆ ಬೇರೆ ಯಾವುದು ಸಮನವಾದದ್ದು ಇರಲಿಲ್ಲ.
10
ಹೀರಾಮನ ಸೇವಕರೂ, ಸೊಲೊಮೋನನ ಸೇವಕರೂ ಓಫೀರಿನಿಂದ ಬಂಗಾರವನ್ನೂ, ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದರು.
11
ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ, ಅರಮನೆಗೋಸ್ಕರವೂ ಸೋಪಾನಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು. ಯೆಹೂದ ದೇಶದಲ್ಲಿ ಹಿಂದೆಂದೂ ಇಂಥವುಗಳನ್ನು ಕಂಡಿರಲಿಲ್ಲ.
12
ಅರಸನಾದ ಸೊಲೊಮೋನನು, ಶೆಬದ ರಾಣಿಯು ಅರಸನಿಗೆ ತಂದ ಕಾಣಿಕೆಗಳ ಪ್ರತಿಯಾಗಿ ಕೊಟ್ಟದ್ದಲ್ಲದೆ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.
13
ಸೊಲೊಮೋನನಿಗೆ ಪ್ರತಿ ವರುಷ ಸುಮಾರು ಇಪ್ಪತ್ತಮೂರು ಸಾವಿರ ಕಿಲ್ರೊಗ್ರಾಂ ಬಂಗಾರವು ದೊರಕುತ್ತಿತ್ತು.
14
ಇದಲ್ಲದೆ ಸೊಲೊಮೋನನಿಗೆ ವರ್ತಕರೂ ವ್ಯಾಪಾರಸ್ಥರೂ ಅರೇಬಿಯದ ಅರಸರೂ ದೇಶದ ಅಧಿಪತಿಗಳೂ ಸಹ ಬೆಳ್ಳಿಬಂಗಾರವನ್ನು ತರುತ್ತಿದ್ದರು.
15
ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿ ಸುಮಾರು ಏಳು ಕಿಲೋಗ್ರಾಂ ತೂಕದ ಬಂಗಾರವಿತ್ತು.
16
ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
17
ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು.
18
ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಸಿಂಹಾಸನಕ್ಕೆ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು, ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
19
ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.
20
ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಅರಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ.
21
ಅರಸನ ಹಡಗುಗಳು ಹೀರಾಮನ ಸೇವಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.
22
ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು.
23
ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತ ಅರಸರು ಅವನ ದರ್ಶನವನ್ನು ಬಯಸಿದರು.
24
ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.
25
ಸೊಲೊಮೋನನಿಗೆ ನಾಲ್ಕು ಸಾವಿರ ಕುದುರೆ ಲಾಯಗಳು ಮತ್ತು ರಥಗಳು ಇದ್ದವು. ಇದಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
26
ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಈಜಿಪ್ಟಿನ ಮೇರೆಯವರೆಗೆ ಇರುವ ಸಮಸ್ತ ಅರಸರ ಮೇಲೆ ಆಳುತ್ತಾ ಇದ್ದನು.
27
ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.
28
ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಸಮಸ್ತ ದೇಶಗಳಿಂದಲೂ ಕುದುರೆಗಳನ್ನು ತೆಗೆದುಕೊಂಡು ಬರುತ್ತಿದ್ದರು.
29
ಸೊಲೊಮೋನನ ಉಳಿದ ಕ್ರಿಯೆಗಳು, ಮೊದಲನೆಯವುಗಳೂ, ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ, ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ, ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಬರೆದಿರುತ್ತವೆ.
30
ಹೀಗೆ ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ನಾಲ್ವತ್ತು ವರ್ಷಗಳು ಆಳಿದನು.
31
ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 10 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36