bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
2 Kings 22
2 Kings 22
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 23 →
1
ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತಿನ ಅದಾಯನ ಮಗಳಾದ ಯೆದೀದಾ ಎಂಬವಳು.
2
ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.
3
ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅರಸನು ಕಾರ್ಯದರ್ಶಿಯಾದ ಮೆಷುಲ್ಲಾಮನ ಮಗ, ಅಚಲ್ಯನ ಮಗನಾದ ಶಾಫಾನನನ್ನು ಯೆಹೋವ ದೇವರ ಆಲಯಕ್ಕೆ ಕಳುಹಿಸಿ,
4
“ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ಅವನು ಯೆಹೋವ ದೇವರ ಆಲಯದ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
5
ಅವರು ಅದನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಲಿ.
6
ಆಲಯ ದುರಸ್ತಿ ಮಾಡುವಂತೆ ಯೆಹೋವ ದೇವರ ಆಲಯದಲ್ಲಿ ಕೆಲಸ ಮಾಡುವವರಾದ ಬಡಗಿಯರಿಗೂ, ಶಿಲ್ಪಿಗಾರರಿಗೂ, ಕಲ್ಲುಕೆಲಸದವರಿಗೂ ಕೊಟ್ಟು, ಆಲಯವನ್ನು ದುರಸ್ತಿ ಮಾಡಲು ಮರಗಳನ್ನೂ, ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವುದಕ್ಕೆ ಕೊಡಲಿ.
7
ಆದರೆ ಅವರು ನಂಬಿಗಸ್ತರಾಗಿ ಕೆಲಸ ಮಾಡಿದ್ದರಿಂದ, ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳುವ ಅವಶ್ಯಕತೆ ಇಲ್ಲ, ಎಂದು ಹೇಳು,” ಎಂದನು.
8
ಆಗ ಮಹಾಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ನನಗೆ ಯೆಹೋವ ದೇವರ ಆಲಯದಲ್ಲಿ ಮೋಶೆಯ ನಿಯಮದ ಗ್ರಂಥವು ಸಿಕ್ಕಿರುತ್ತದೆ,” ಎಂದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು. ಅವನು ಅದನ್ನು ಓದಿದನು.
9
ಕಾರ್ಯದರ್ಶಿಯಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆ, “ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ, ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಿದ್ದಾರೆ,” ಎಂದನು.
10
ಇದಲ್ಲದೆ, “ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆ,” ಎಂದು ತೋರಿಸಿ, ಶಾಫಾನನು ಅದನ್ನು ಅರಸನ ಮುಂದೆ ಓದಿದನು.
11
ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.
12
ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕಾಯನ ಮಗನಾದ ಅಕ್ಬೋರನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,
13
“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು.
14
ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.
15
ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:
16
‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಯೆಹೂದದ ಅರಸನು ಓದಿದ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದರಂತೆ ಕೇಡನ್ನು ಬರಮಾಡುವೆನು.
17
ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’
18
ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,
19
ಈ ಸ್ಥಳವೂ ಅದರ ನಿವಾಸಿಗಳೂ ನಾಶಕ್ಕೂ ಶಾಪಕ್ಕೂ ಗುರಿಯಾಗುವರೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ ನೀನು ನಿನ್ನನ್ನು ಯೆಹೋವ ದೇವರ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ ನಾನು ನಿನ್ನ ಮೊರೆಯನ್ನು ಕೇಳಿದೆನು.
20
ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25