bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
2 Kings 25
2 Kings 25
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
1
ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.
2
ಅರಸನಾದ ಚಿದ್ಕೀಯನ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆಹಾಕಿದನು.
3
ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
4
ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
5
ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
6
ಅವರು ಅರಸನನ್ನು ಹಿಡಿದುಕೊಂಡರು. ರಿಬ್ಲದಲ್ಲಿರುವ ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
7
ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
8
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಏಳನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,
9
ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.
10
ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.
11
ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.
12
ಆದರೆ ಕಾವಲಿನ ಅಧಿಪತಿಯು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
13
ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
14
ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.
15
ಕಾವಲುಗಾರರ ಅಧಿಪತಿಯು ಅಗ್ನಿ ಪಾತ್ರೆಗಳನ್ನೂ, ತಟ್ಟೆಗಳನ್ನೂ, ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.
16
ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಂಚಿನ ಸಮುದ್ರವೆಂಬ ಪಾತ್ರೆ, ಚಕ್ರದ ಬಂಡಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.
17
ಪ್ರತಿಯೊಂದು ಕಂಬ ಎಂಟು ಮೀಟರ್ ಎತ್ತರವಿತ್ತು. ಪ್ರತಿಯೊಂದರ ಮೇಲೆ ಸುಮಾರು ಒಂದೂವರೆ ಮೀಟರ್ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು.
18
ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.
19
ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಐದು ಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು.
20
ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.
21
ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
22
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ, ಶಾಫಾನನ ಮೊಮ್ಮಗನೂ, ಅಹೀಕಾಮನ ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.
23
ಆದರೆ ಬಾಬಿಲೋನಿನ ಅರಸನು ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಕೇಳಿದ ಮೇಲೆ, ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ, ನೆತನ್ಯನ ಮಗ ಇಷ್ಮಾಯೇಲನೂ, ಕಾರೇಹನ ಮಗ ಯೋಹಾನಾನ್, ನೆಟೋಫದವನಾದ ತನ್ಹುಮೆತನ ಮಗ ಸೆರಾಯ್, ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ, ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
24
ಆಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ಬಾಬಿಲೋನಿಯದ ಸೈನಿಕರಿಗೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,” ಎಂದನು.
25
ಆದರೆ ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಬಾಬಿಲೋನಿಯರನ್ನೂ ಕೊಂದುಹಾಕಿದರು.
26
ಆಗ ಹಿರಿಕಿರಿಯರಾದ ಸಮಸ್ತ ಜನರೂ, ದಂಡುಗಳ ಅಧಿಪತಿಗಳೂ ಬಾಬಿಲೋನಿಯದವರಿಗೆ ಹೆದರಿ ಎದ್ದು ಈಜಿಪ್ಟಿಗೆ ಹೋದರು.
27
ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.
28
ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
29
ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.
30
ಅವನು ಬದುಕಿರುವವರೆಗೂ ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25