bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
2 Samuel 10
2 Samuel 10
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 11 →
1
ಇದರ ತರುವಾಯ, ಅಮ್ಮೋನಿಯರ ಅರಸನು ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗ ಹಾನೂನನು ಅರಸನಾದನು.
2
ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.
3
ಆಗ ಅಮ್ಮೋನಿಯರ ಪ್ರಧಾನರು ತಮ್ಮ ಯಜಮಾನನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ದಾವೀದನು ತನ್ನ ಸೇವಕರನ್ನು ಈ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಕಳುಹಿಸಿದ್ದಾನಲ್ಲವೇ,” ಎಂದರು.
4
ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು, ಅವರ ಅರ್ಧ ಗಡ್ಡವನ್ನು ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.
5
ಅವರು ಈ ವಿಷಯದ ಕುರಿತು ದಾವೀದನಿಗೆ ಹೇಳಿ ಕಳುಹಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ” ಎಂದು ಹೇಳಿಸಿದನು.
6
ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
7
ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.
8
ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.
9
ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.
10
ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,
11
ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.
12
ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.
13
ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.
14
ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರು ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು, ಯೆರೂಸಲೇಮಿಗೆ ತಿರುಗಿಹೋದನು.
15
ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರೆಲ್ಲರು ಒಟ್ಟಾಗಿ ಕೂಡಿಬಂದರು.
16
ಹದದೆಜೆರನು ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡದ್ದರಿಂದ ಅವರು ಹೆಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.
17
ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ ಹೆಲಾಮಿಗೆ ಬಂದನು. ಅರಾಮ್ಯರು ದಾವೀದನಿಗೆದುರಾಗಿ ವ್ಯೂಹ ಕಟ್ಟಿ ಯುದ್ಧಮಾಡಿದರು.
18
ಆಗ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ ಕೊಂದು, ಅವರ ಸೇನಾಧಿಪತಿಯಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಮರಣಹೊಂದಿದನು.
19
ಹದದೆಜೆರನ ಸೇವಕರಾದ ಸಮಸ್ತ ಅರಸರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ಇಸ್ರಾಯೇಲರ ಸಂಗಡ ಸಂಧಾನ ಮಾಡಿಕೊಂಡು ಅವರಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಭಯಪಟ್ಟರು.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24