bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
2 Samuel 11
2 Samuel 11
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 12 →
1
ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.
2
ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.
3
ಆ ಸ್ತ್ರೀಯು ಬಹು ಸೌಂದರ್ಯವುಳ್ಳ ರೂಪವತಿಯಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವುದಕ್ಕೆ ಕಳುಹಿಸಿದಾಗ ಒಬ್ಬನು, “ಅವಳು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಬತ್ಷೆಬೆಳು,” ಎಂದನು.
4
ಆಗ ದಾವೀದನು ದೂತರನ್ನು ಕಳುಹಿಸಿ ಅವಳನ್ನು ಬರಮಾಡಿಕೊಂಡನು. ಅವಳು ಅವನ ಬಳಿಗೆ ಬಂದಾಗ, ಅವಳು ತನ್ನ ಮೈಲಿಗೆಯನ್ನು ಕಳೆದುಕೊಂಡು ಶುಚಿಯಾಗಿದ್ದದರಿಂದ, ದಾವೀದನು ಅವಳ ಸಂಗಡ ಮಲಗಿದನು.
5
ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ, “ತಾನು ಗರ್ಭವತಿ,” ಎಂಬ ವಿಷಯವನ್ನು ದಾವೀದನಿಗೆ ಹೇಳಿ ಕಳುಹಿಸಿದಳು.
6
ಆಗ ದಾವೀದನು, “ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸು,” ಎಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.
7
ಊರೀಯನು ದಾವೀದನ ಬಳಿಗೆ ಬಂದಾಗ, ದಾವೀದನು ಅವನನ್ನು, “ಯೋವಾಬನೂ ಸೈನ್ಯದವರೂ ಹೇಗಿದ್ದಾರೆ? ಮತ್ತು ಯುದ್ಧವು ಹೇಗಿದೆ?” ಎಂದು ವಿಚಾರಿಸಿದನು.
8
ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು.
9
ಆದರೆ ಊರೀಯನು ತನ್ನ ಮನೆಗೆ ಹೋಗದೆ, ಅರಮನೆಯ ಬಾಗಿಲ ಬಳಿಯಲ್ಲಿ ತನ್ನ ಅರಸನ ಸಮಸ್ತ ಸೇವಕರ ಸಂಗಡ ಮಲಗಿದ್ದನು.
10
ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ದಾವೀದನು ಊರೀಯನಿಗೆ, “ನೀನು ಪ್ರಯಾಣದಿಂದ ಬರಲಿಲ್ಲವೋ? ಏಕೆ ನಿನ್ನ ಮನೆಗೆ ಹೋಗಲಿಲ್ಲ?” ಎಂದನು.
11
ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು.
12
ಆಗ ದಾವೀದನು ಊರೀಯನಿಗೆ, “ಈ ಹೊತ್ತು ಇಲ್ಲಿರು. ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಊರೀಯನೂ ಆ ದಿನವೂ, ಮಾರನೆಯ ದಿವಸವೂ ಯೆರೂಸಲೇಮಿನಲ್ಲಿ ಇದ್ದನು.
13
ದಾವೀದನು ಅವನನ್ನು ಕರೆದಾಗ, ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ, ತನ್ನ ಯಜಮಾನನ ಸೇವಕರ ಸಂಗಡ ಮಲಗುವುದಕ್ಕೆ ಹೊರಟುಹೋದನು.
14
ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು, ಊರೀಯನ ಕೈಯಲ್ಲಿ ಕಳುಹಿಸಿದನು.
15
ಆ ಪತ್ರದಲ್ಲಿ, “ಊರೀಯನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂದೆ ನಿಲ್ಲಿಸಿ, ಅವನು ಗಾಯಗೊಂಡು ಸಾಯುವಂತೆ, ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿದುಕೊಳ್ಳಿರಿ,” ಎಂದು ಬರೆದಿದ್ದನು.
16
ಹಾಗೆಯೇ ಯೋವಾಬನು ಆ ಪಟ್ಟಣವನ್ನು ಮುತ್ತಿಗೆ ಹಾಕುವಾಗ, ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳಿದುಕೊಂಡು, ಅಲ್ಲಿ ಊರೀಯನನ್ನು ನಿಲ್ಲಿಸಿದನು.
17
ಪಟ್ಟಣದ ಮನುಷ್ಯರು ಹೊರಟು ಯೋವಾಬನ ಸಂಗಡ ಯುದ್ಧಮಾಡುವಾಗ, ದಾವೀದನ ಸೇವಕರಾದವರಲ್ಲಿ ಕೆಲವರು ಸತ್ತರು. ಇದಲ್ಲದೆ ಹಿತ್ತಿಯನಾದ ಊರೀಯನೂ ಸತ್ತನು.
18
ಆಗ ಯೋವಾಬನು ಯುದ್ಧದ ವರ್ತಮಾನಗಳನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನೆಂದರೆ:
19
“ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ,
20
ಅರಸನಿಗೆ ಕೋಪ ಉರಿದು, ‘ನೀವು ಯುದ್ಧಮಾಡುವುದಕ್ಕೆ ಪಟ್ಟಣಕ್ಕೆ ಇಷ್ಟು ಸಮೀಪವಾಗಿ ಸೇರಿದ್ದೇನು?
21
ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು.
22
ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ತನ್ನೊಂದಿಗೆ ಕಳುಹಿಸಿದ ವರ್ತಮಾನಗಳನ್ನೆಲ್ಲಾ ತಿಳಿಸಿದನು.
23
ಆ ದೂತನು ದಾವೀದನಿಗೆ, “ಆ ಮನುಷ್ಯರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬಯಲಿನಲ್ಲಿ ನಮ್ಮ ಮೇಲೆ ಹೊರಟುಬಂದಾಗ, ನಾವು ಪಟ್ಟಣದ ಬಾಗಿಲವರೆಗೆ ಅವರ ಮೇಲೆ ಬಂದೆವು.
24
ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದ ಕಾರಣ, ಅರಸನ ಸೇವಕರಲ್ಲಿ ಕೆಲವರು ಸತ್ತರು. ಇದಲ್ಲದೆ ನಿನ್ನ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನು,” ಎಂದನು.
25
ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು.
26
ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ, ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.
27
ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 12 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24