bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Amos 8
Amos 8
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 9 →
1
ಸಾರ್ವಭೌಮ ಯೆಹೋವ ದೇವರು ನನಗೆ ಮಾಗಿದ ಹಣ್ಣುಗಳುಳ್ಳ ಬುಟ್ಟಿ ತೋರಿಸಿದರು.
2
ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.
3
“ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”
4
ಬಡವರನ್ನು ನುಂಗುವವರೇ, ನಾಡಿನ ಬಡವರನ್ನು ಮುಗಿಸಿಬಿಡಬೇಕೆಂದಿರುವವರೇ, ಇದನ್ನು ಕೇಳಿರಿ.
5
ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,
6
ಬಡವರನ್ನು ಬೆಳ್ಳಿಗೂ ದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು, ಹೌದು ಗೋಧಿಯ ಕಸವನ್ನು ಸಹ ಮಾರೋಣ.”
7
ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.
8
“ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.
9
“ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.
10
ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.
11
ದಿನಗಳು ಬರುವುವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ. ಯೆಹೋವ ದೇವರ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮವನ್ನೇ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ.
12
ಆಗ ಅವರು ಸಮುದ್ರದಿಂದ ಸಮುದ್ರಕ್ಕೂ, ಉತ್ತರದಿಂದ ಪೂರ್ವಕ್ಕೂ ಅಲೆದು ಯೆಹೋವ ದೇವರ ವಾಕ್ಯವನ್ನು ಹುಡುಕುವುದಕ್ಕೆ ಅತ್ತಿತ್ತ ಓಡಾಡಿ, ಅದನ್ನು ಕಾಣದೆ ಹೋಗುವರು.
13
“ಆ ದಿನದಲ್ಲಿ, “ಸೌಂದರ್ಯವತಿಯರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹದಿಂದ ಕುಗ್ಗಿ ಹೋಗುವರು.
14
ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 9 →
All chapters:
1
2
3
4
5
6
7
8
9