bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Exodus 26
Exodus 26
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 27 →
1
“ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಮಾಡಿದ ಕೆರೂಬಿಗಳುಳ್ಳವುಗಳಾಗಿಯೂ ಇರಬೇಕು.
2
ಎಲ್ಲಾ ಪರದೆಗಳೂ ಒಂದೇ ಅಳತೆಯವುಗಳಾಗಿರಬೇಕು. ಪ್ರತಿಯೊಂದು ಪರದೆಯು ಸುಮಾರು ಹದಿಮೂರು ಮೀಟರ್ ಉದ್ದ ಮತ್ತು ಎರಡು ಮೀಟರ್ ಅಗಲವಿರಬೇಕು.
3
ಐದು ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು ಮತ್ತು ಇನ್ನುಳಿದ ಐದು ಪರದೆಗಳನ್ನೂ ಒಂದಕ್ಕೊಂದು ಜೋಡಿಸಬೇಕು.
4
ಕೊನೆಯ ಪರದೆಯ ಅಂಚಿನ ಒಂದು ಜೋಡಣೆಯ ಸ್ಥಳದಲ್ಲಿ ನೀಲಿ ದಾರಿನ ಕುಣಿಕೆಗಳನ್ನು ಮಾಡಿ, ಎರಡನೆಯ ಜೋಡಣೆಯ ಕಟ್ಟಕಡೆಯ ಪರದೆಯ ಅಂಚಿನಲ್ಲಿಯೂ ಅದೇ ಪ್ರಕಾರ ಮಾಡಬೇಕು.
5
ಒಂದು ಪರದೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ಪರದೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಎದುರುಬದುರಾಗಿ ಹಿಡಿದುಕೊಳ್ಳುವವುಗಳಾಗಿರಬೇಕು.
6
ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗಬೇಕು.
7
“ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಮೇಕೆಯ ಕೂದಲಿನಿಂದ ಹನ್ನೊಂದು ಪರದೆಗಳನ್ನು ಮಾಡಬೇಕು.
8
ಒಂದೊಂದು ಪರದೆಯು ಸುಮಾರು ಹದಿಮೂರುವರೆ ಮೀಟರ್ ಉದ್ದ ಮತ್ತು ಒಂದುವರೆ ಮೀಟರ್ ಅಗಲ ಇರಬೇಕು. ಹನ್ನೊಂದು ಪರದೆಗಳೂ ಒಂದೇ ಅಳತೆಯಾಗಿರಬೇಕು.
9
ಐದು ಪರದೆಗಳನ್ನು ಒಂದಾಗಿ ಜೋಡಿಸಿ ಇನ್ನುಳಿದ ಆರು ಪರದೆಗಳನ್ನು ಒಂದಾಗಿ ಜೋಡಿಸಿ, ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ತೂಗಾಡಬಿಡಬೇಕು.
10
ಜೋಡಿಸುವಾಗ ಕೊನೆಯ ಒಂದು ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು, ಜೋಡಣೆಯಲ್ಲಿರುವ ಕೊನೆಯ ಎರಡನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು.
11
ಇದಲ್ಲದೆ ಕಂಚಿನ ಐವತ್ತು ಕೊಂಡಿಗಳನ್ನು ಮಾಡಿ, ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ, ಒಂದೇ ಡೇರೆ ಆಗುವಂತೆ ಜೋಡಿಸಬೇಕು.
12
ಗುಡಾರದ ಪರದೆಗಳನ್ನು ಮಿಕ್ಕಿದ ತೂಗಾಡುವಂಥದ್ದು ಎಂದರೆ ಉಳಿದ ಅರ್ಧ ಪರದೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.
13
ಗುಡಾರದ ಪರದೆಗಳ ಉದ್ದದಲ್ಲಿ ಈಚೆ ಆಚೆ ಮಿಕ್ಕಿದ ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವುದಕ್ಕಾಗಿ ತೂಗಾಡಲಿ.
14
ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಬೇಕು, ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಬೇಕು.
15
“ಗುಡಾರಕ್ಕೆ ಜಾಲಿ ಮರದಿಂದ ಚೌಕಟ್ಟುಗಳನ್ನು ಮಾಡಬೇಕು.
16
ಒಂದೊಂದು ಚೌಕಟ್ಟಿನ ಉದ್ದವು ಸುಮಾರು ನಾಲ್ಕುವರೆ ಮೀಟರ್ ಮತ್ತು ಅಗಲ ಅರವತ್ತೆಂಟು ಸೆಂಟಿಮೀಟರ್ ಇರಬೇಕು.
17
ಒಂದು ಚೌಕಟ್ಟಿಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಬೇಕು. ಅದೇ ಪ್ರಕಾರ ಗುಡಾರದ ಎಲ್ಲಾ ಚೌಕಟ್ಟುಗಳಿಗೆ ಮಾಡಬೇಕು.
18
ಗುಡಾರದ ದಕ್ಷಿಣ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಬೇಕು.
19
ಇಪ್ಪತ್ತು ಚೌಕಟ್ಟುಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಬೇಕು ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಅದರ ಎರಡು ಪಟ್ಟಿಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
20
ಹಾಗೆಯೇ ಗುಡಾರದ ಉತ್ತರ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನೂ,
21
ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಗದ್ದಿಗೇ ಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನೂ,
22
ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದ ಕಡೆಗೆ ಆರು ಚೌಕಟ್ಟುಗಳನ್ನು ಮಾಡಬೇಕು.
23
ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಬೇಕು.
24
ಈ ಮೂಲೆಗಳನ್ನು ಅಡಿಯಲ್ಲಿ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಇದೇ ರೀತಿಯಲ್ಲಿ ಅವು ಎರಡು ಮೂಲೆಗಳಲ್ಲಿ ಎರಡಕ್ಕೂ ಇರಬೇಕು.
25
ಹೀಗೆ ಅವು ಎಂಟು ಚೌಕಟ್ಟುಗಳೂ ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಕೂರುಗದ್ದಿಗೇ ಕಲ್ಲುಗಳೂ ಇರುವುದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕೂರುಗದ್ದಿಗೇ ಕಲ್ಲುಗಳೂ ಇರಬೇಕು.
26
“ಜಾಲಿ ಮರದಿಂದ ಅಗುಳಿಗಳನ್ನು ಮಾಡಬೇಕು. ಗುಡಾರದ ಒಂದು ಕಡೆಯ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು,
27
ಗುಡಾರದ ಇನ್ನೊಂದು ಭಾಗದ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು, ಅದರ ಹಿಂದುಗಡೆಯ ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು ಮಾಡಬೇಕು.
28
ಮಧ್ಯದ ಅಗುಳಿಯು ಚೌಕಟ್ಟುಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಮುಟ್ಟಿರಬೇಕು.
29
ಆ ಚೌಕಟ್ಟುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು. ಅಗುಳಿಗಳನ್ನು ಬಂಗಾರದಿಂದ ಹೊದಿಸಬೇಕು.
30
“ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರವನ್ನು ನಿಲ್ಲಿಸಬೇಕು.
31
“ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಬೇಕು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
32
ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳ ಮೇಲೆ ಊರಿಕೊಂಡಿರುವ ಜಾಲಿ ಮರದ ಸ್ತಂಭಗಳಲ್ಲಿ ಅದನ್ನು ತೂಗು ಹಾಕಬೇಕು.
33
ಆ ಪರದೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ, ಪರದೆಯೊಳಗೆ ಒಡಂಬಡಿಕೆಯ ಮಂಜೂಷವನ್ನು ತರಬೇಕು. ಪರಿಶುದ್ಧ ಸ್ಥಳಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಮಧ್ಯದಲ್ಲಿ ಆ ಪರದೆಯನ್ನು ವಿಂಗಡಿಸಬೇಕು.
34
ಮಹಾಪರಿಶುದ್ಧ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮೇಲೆ ಕರುಣಾಸನವನ್ನು ಇಡಬೇಕು.
35
ಇದಲ್ಲದೆ ಗುಡಾರದ ಉತ್ತರ ಕಡೆಯಲ್ಲಿ ಪರದೆಯ ಹೊರಗೆ ಮೇಜನ್ನು ಇಡಬೇಕು ಮತ್ತು ದೀಪಸ್ತಂಭವನ್ನು ಅದರ ಎದುರಾಗಿ ದಕ್ಷಿಣದ ದಿಕ್ಕಿನಲ್ಲಿ ಇಡಬೇಕು.
36
“ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಬೇಕು.
37
ಆ ಪರದೆಗೆ ಜಾಲಿ ಮರದ ಐದು ಕಂಬಗಳನ್ನು ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಎರಕಹೊಯಿಸಬೇಕು.
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 27 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40