bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Genesis 41
Genesis 41
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 40
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 42 →
1
ಎರಡು ಪೂರ್ಣ ವರ್ಷಗಳು ಕಳೆದ ಮೇಲೆ ಫರೋಹನು ಒಂದು ಕನಸನ್ನು ಕಂಡನು. ಆ ಕನಸಿನಲ್ಲಿ ಅವನು ನೈಲ್ ನದಿಯ ಬಳಿಯಲ್ಲಿ ನಿಂತಿದ್ದನು.
2
ಲಕ್ಷಣವಾದ ಮತ್ತು ಕೊಬ್ಬಿದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
3
ಅವಲಕ್ಷಣವಾದ ಬೇರೆ ಏಳು ಬಡಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು, ಆ ಹಸುಗಳ ಹತ್ತಿರ ನೈಲ್ ನದಿ ತೀರದಲ್ಲಿ ನಿಂತಿದ್ದವು.
4
ಆ ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದುಬಿಟ್ಟವು. ಆಗ ಫರೋಹನು ಎಚ್ಚೆತ್ತನು.
5
ಅವನು ತಿರುಗಿ ನಿದ್ರೆ ಮಾಡಿದಾಗ, ಎರಡನೆಯ ಸಾರಿ ಕನಸನ್ನು ಕಂಡನು. ಒಂದೇ ದಂಟಿನಲ್ಲಿ ಏಳು ಒಳ್ಳೆಯ ಪುಷ್ಟಿಯಾದ ತೆನೆಗಳು ಎದ್ದವು.
6
ಅವುಗಳ ಹಿಂದೆಯೇ ಪೂರ್ವದಿಕ್ಕಿನ ಗಾಳಿಯಿಂದ ಬತ್ತಿ, ಒಣಗಿ ಹೋದ ಏಳು ತೆನೆಗಳು ಮೊಳೆತವು.
7
ಆ ಬತ್ತಿ ಹೋಗಿದ್ದ ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿ ಬಿಟ್ಟವು. ಫರೋಹನು ಎಚ್ಚೆತ್ತಾಗ ಅದು ಕನಸಾಗಿತ್ತು.
8
ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
9
ಆಗ ಪಾನದಾಯಕರ ಮುಖ್ಯಸ್ಥನು ಫರೋಹನಿಗೆ, “ಈ ಹೊತ್ತು ನನ್ನ ತಪ್ಪನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.
10
ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ, ನನ್ನನ್ನೂ, ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ದಳಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಿದ್ದೀರಿ.
11
ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
12
ಮೈಗಾವಲಿನ ದಳಪತಿಗೆ ಸೇವಕನಾಗಿದ್ದ ಹಿಬ್ರಿಯ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ, ಅವನು ನಮ್ಮ ನಮ್ಮ ಕನಸಿನ ಅರ್ಥವನ್ನು ಹೇಳಿದನು.
13
ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನಾನು ನನ್ನ ಸ್ಥಾನವನ್ನು ಪುನಃ ಪಡೆದುಕೊಂಡೆನು, ಇನ್ನೊಬ್ಬನನ್ನು ಗಲ್ಲಿಗೇರಿಸಲಾಯಿತು,” ಎಂದು ಹೇಳಿದನು.
14
ಆಗ ಫರೋಹನು ಯೋಸೇಫನನ್ನು ಕರೆತರುವಂತೆ ಸೇವಕರನ್ನು ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
15
ಆಗ ಫರೋಹನು ಯೋಸೇಫನಿಗೆ, “ನಾನು ಕನಸನ್ನು ಕಂಡಿದ್ದೇನೆ, ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ, ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ,” ಎಂದನು.
16
ಯೋಸೇಫನು ಫರೋಹನಿಗೆ ಉತ್ತರವಾಗಿ, “ಅದನ್ನು ನಾನು ಹೇಳಲಾರೆ, ಆದರೆ ದೇವರು ಫರೋಹನಿಗೆ ಮೆಚ್ಚಿಕೆಯಾದ ಉತ್ತರವನ್ನು ಕೊಡುವರು,” ಎಂದನು.
17
ಅದಕ್ಕೆ ಫರೋಹನು ಯೋಸೇಫನಿಗೆ, “ನನ್ನ ಕನಸಿನಲ್ಲಿ, ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
18
ಆಗ ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
19
ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬೇರೆ ಏಳು ಬಡಹಸುಗಳು ಏರಿ ಬಂದವು. ಅಂಥ ಬಡ ಹಸುಗಳನ್ನು, ನಾನು ಈಜಿಪ್ಟ್ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.
20
ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು.
21
ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಲಿಲ್ಲ. ಅವು ಮೊದಲಿನಂತೆ ಬಡಕಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.
22
“ನನಗೆ ಇನ್ನೊಂದು ಕನಸು ಬಂತು. ನಾನು ಆ ಕನಸಿನಲ್ಲಿ, ಒಂದೇ ದಂಟಿನಲ್ಲಿ ಪುಷ್ಟಿಯುಳ್ಳ ಏಳು ತೆನೆಗಳು ಇದ್ದವು.
23
ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.
24
ಆ ಒಣಗಿದ್ದ ಏಳು ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಸಿದಾಗ, ಅದರ ಅರ್ಥವನ್ನು ನನಗೆ ಯಾರೂ ಹೇಳಲಿಲ್ಲ,” ಎಂದನು.
25
ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ.
26
ಆ ಏಳು ಒಳ್ಳೆಯ ಹಸುಗಳು ಏಳು ವರ್ಷಗಳು; ಏಳು ಒಳ್ಳೆಯ ತೆನೆಗಳೂ, ಏಳು ವರ್ಷಗಳೇ. ಇವೆರಡು ಕನಸುಗಳ ಅರ್ಥ ಒಂದೇ.
27
ಅವುಗಳ ತರುವಾಯ ಏರಿ ಬಂದ ಬಡಕಲಾದ ಕೆಟ್ಟ ಏಳು ಹಸುಗಳು ಮತ್ತು ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು, ಬರಲಿರುವ ಏಳು ವರ್ಷಗಳು.
28
“ನಾನು ಫರೋಹನಿಗೆ ಹೇಳಿದ ಮಾತಿನಂತೆ ದೇವರು ಮಾಡಲಿರುವುದನ್ನು ಫರೋಹನಿಗೆ ತೋರಿಸಿದ್ದಾರೆ.
29
ಈಜಿಪ್ಟ್ ದೇಶದಲ್ಲೆಲ್ಲಾ ಬಹುಸಮೃದ್ಧಿಯ ಸುಭಿಕ್ಷ ವರ್ಷಗಳು ಬರುತ್ತವೆ.
30
ಆದರೆ ಅವುಗಳ ಹಿಂದೆ ಏಳು ವರ್ಷಗಳ ಬರಗಾಲ ಬರುತ್ತವೆ. ಆಗ ಈಜಿಪ್ಟಿನಲ್ಲಿದ್ದ ಸುಭಿಕ್ಷವು ಮರೆಯುವಂತಾಗುವುದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವುದು.
31
ತರುವಾಯ ಬರಗಾಲವು ಬಹಳ ಕಠಿಣವಾಗಿರುವುದರಿಂದ, ಸುಭಿಕ್ಷ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವುದು.
32
ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು.
33
“ಹೀಗಿರುವುದರಿಂದ ಈಗ ಫರೋಹನು ವಿವೇಕಿಯಾದ ಬುದ್ಧಿಯುಳ್ಳ ಒಬ್ಬನನ್ನು ನೋಡಿ, ಅವನನ್ನು ಈಜಿಪ್ಟ್ ದೇಶದ ಮೇಲೆ ನೇಮಿಸಲಿ.
34
ಫರೋಹನು ಅಧಿಕಾರಿಗಳನ್ನು ನೇಮಿಸಿ, ದೇಶದ ಮೇಲಿಟ್ಟು, ಸುಭಿಕ್ಷದ ಏಳು ವರ್ಷಗಳಲ್ಲಿ ಈಜಿಪ್ಟ್ ದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ಕಂದಾಯವಾಗಿ ತೆಗೆದುಕೊಳ್ಳಲಿ.
35
ಅಧಿಕಾರಿಗಳು ಮುಂಬರುವ ಈ ಒಳ್ಳೆಯ ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
36
ಈಜಿಪ್ಟಿನಲ್ಲಿ ಬರುವದಕ್ಕಿರುವ ಬರಗಾಲದ ಏಳು ವರ್ಷಗಳಲ್ಲಿ ದೇಶವು ಹಾಳಾಗದಂತೆ, ಆಹಾರವು ದೇಶಕ್ಕೆ ಸಂಗ್ರಹವಾಗಿರುವುದು,” ಎಂದನು.
37
ಈ ಮಾತುಗಳು ಫರೋಹನಿಗೂ, ಅವನ ಸೇವಕರಿಗೂ ಒಳ್ಳೆಯದೆಂದು ತೋರಿತು.
38
ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.
39
ಫರೋಹನು ಯೋಸೇಫನಿಗೆ, “ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
40
ನೀನೇ ನನ್ನ ಅರಮನೆಯ ಅಧಿಕಾರಿಯಾಗಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಅಧೀನವಾಗಿರಲಿ. ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದನು.
41
ಇದಲ್ಲದೆ ಫರೋಹನು ಯೋಸೇಫನಿಗೆ, “ನೋಡು, ನಾನು ನಿನ್ನನ್ನು ಈಜಿಪ್ಟ್ ದೇಶದ ಮೇಲೆಲ್ಲಾ ನೇಮಿಸಿದ್ದೇನೆ,” ಎಂದನು.
42
ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.
43
ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.
44
ಇದಲ್ಲದೆ ಫರೋಹನು ಯೋಸೇಫನಿಗೆ, “ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟ್ ದೇಶದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ, ಕಾಲನ್ನಾಗಲಿ ಎತ್ತಬಾರದು,” ಎಂದನು.
45
ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.
46
ಯೋಸೇಫನು ಈಜಿಪ್ಟಿನ ಅರಸನಾದ ಫರೋಹನ ಮುಂದೆ ನಿಂತಾಗ, ಮೂವತ್ತು ವರ್ಷದವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು, ಈಜಿಪ್ಟ್ ದೇಶದಲ್ಲೆಲ್ಲಾ ಸಂಚಾರಮಾಡಿದನು.
47
ಆ ದೇಶವು ಸುಭಿಕ್ಷದ ಏಳು ವರ್ಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.
48
ಹೀಗಿರಲಾಗಿ ಅವನು ಈಜಿಪ್ಟ್ ದೇಶದಲ್ಲಿದ್ದ ಆ ಏಳು ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಪಟ್ಟಣಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
49
ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕಮಾಡುವುದಕ್ಕೆ ಆಗದೆ ಹೋಯಿತು.
50
ಇದಲ್ಲದೆ ಬರಗಾಲದ ವರ್ಷಗಳು ಬರುವುದಕ್ಕೆ ಮುಂಚೆ, ಯೋಸೇಫನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್, ಅವಳನ್ನು ಯೋಸೇಫನಿಗೆ ಹೆತ್ತಳು.
51
ಜೇಷ್ಠಪುತ್ರನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಏಕೆಂದರೆ ಅವನು, “ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನು ಮರೆತುಬಿಡುವಂತೆ ಮಾಡಿದರು,” ಎಂದನು.
52
ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು.
53
ಈಜಿಪ್ಟ್ ದೇಶದಲ್ಲಿದ್ದ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ,
54
ಯೋಸೇಫನು ಹೇಳಿದಂತೆ ಬರುವುದಕ್ಕಿದ್ದ ಬರಗಾಲದ ಏಳು ವರ್ಷಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರಗಾಲವಿತ್ತು. ಆದರೆ ಈಜಿಪ್ಟ್ ದೇಶದಲ್ಲೆಲ್ಲಾ ಆಹಾರವಿತ್ತು.
55
ಈಜಿಪ್ಟ್ದವರೆಲ್ಲಾ ಹಸಿದು, ಜನರು ಆಹಾರಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ, ಫರೋಹನು ಎಲ್ಲಾ ಈಜಿಪ್ಟಿನವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ನಿಮಗೆ ಹೇಳುವುದನ್ನು ಮಾಡಿರಿ,” ಎಂದನು.
56
ಈಜಿಪ್ಟಿನಲ್ಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಈಜಿಪ್ಟಿನವರಿಗೆ ಮಾರಿದನು. ಆಗ ಬರವು ಈಜಿಪ್ಟ್ ದೇಶದಲ್ಲಿ ಕಠಿಣವಾಗಿತ್ತು.
57
ಇದಲ್ಲದೆ ಭೂಮಿಯ ಮೇಲೆಲ್ಲಾ ಬರಗಾಲವು ಕಠಿಣವಾಗಿದ್ದದರಿಂದ, ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಈಜಿಪ್ಟಿಗೆ ಬರುತ್ತಿದ್ದರು.
← Chapter 40
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 42 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
Recommended Reading
Commentary
Genesis Commentaries
→
Devotional
Genesis Devotional Guide
→
Get This Bible
Kannada KSB (ಕನ್ನಡ ಸಮಕಾಲಿಕ ಅನುವಾದ) Study Bible
→