bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Genesis 42
Genesis 42
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 41
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 43 →
1
ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ಯಾಕೋಬನು ತಿಳಿದಾಗ, ಅವನು ತನ್ನ ಪುತ್ರರಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡು ಸುಮ್ಮನಿರುವುದೇನು?” ಎಂದನು.
2
ಅವನು ಮುಂದುವರಿಸಿ, “ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ, ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡುಕೊಳ್ಳಿರಿ,” ಎಂದನು.
3
ಆಗ ಯೋಸೇಫನ ಹತ್ತು ಮಂದಿ ಸಹೋದರರು ಈಜಿಪ್ಟಿನಲ್ಲಿ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಹೋದರು.
4
ಆದರೆ ಯೋಸೇಫನ ಸಹೋದರನಾದ ಬೆನ್ಯಾಮೀನನನ್ನು ಕಳುಹಿಸಲಿಲ್ಲ. ಏಕೆಂದರೆ ಅವನಿಗೆ ಕೇಡು ಬಂದೀತೆಂದು ಹೇಳಿ, ಯಾಕೋಬನು ಅವನನ್ನು ಅವನ ಸಹೋದರರ ಸಂಗಡ ಕಳುಹಿಸಲಿಲ್ಲ.
5
ಕಾನಾನ್ ದೇಶದಲ್ಲಿ ಬರವಿದ್ದುದರಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಬರುವವರೊಂದಿಗೆ ಇಸ್ರಾಯೇಲನ ಪುತ್ರರೂ ಬಂದರು.
6
ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
7
ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ, ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ, ಅವರಿಗೆ, “ಎಲ್ಲಿಂದ ಬಂದಿರಿ?” ಎಂದನು. ಅದಕ್ಕೆ ಅವರು, “ಆಹಾರ ಕೊಂಡುಕೊಳ್ಳುವುದಕ್ಕೆ ಕಾನಾನ್ ದೇಶದಿಂದ ಬಂದೆವು,” ಎಂದರು.
8
ಯೋಸೇಫನು ತನ್ನ ಸಹೋದರರನ್ನು ಗುರುತಿಸಿದರೂ, ಅವರು ಅವನನ್ನು ಗುರುತಿಸಲಿಲ್ಲ.
9
ಆಗ ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವರಿಗೆ, “ನೀವು ಗೂಢಚಾರರು, ದೇಶದ ಒಳಗುಟ್ಟನ್ನು ನೋಡುವುದಕ್ಕೆ ಬಂದಿದ್ದೀರಿ,” ಎಂದನು.
10
ಅದಕ್ಕವರು, “ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ.
11
ನಾವೆಲ್ಲರೂ ಒಬ್ಬ ಮನುಷ್ಯನ ಪುತ್ರರಾಗಿದ್ದು ಸತ್ಯವಂತರಾಗಿದ್ದೇವೆ. ಆದ್ದರಿಂದ ನಿನ್ನ ದಾಸರು ಗೂಢಚಾರರಲ್ಲ,” ಎಂದರು.
12
ಆದರೆ ಅವನು ಅವರಿಗೆ, “ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳಿದುಕೊಳ್ಳುವುದಕ್ಕೋಸ್ಕರವೇ ಬಂದಿದ್ದೀರಿ,” ಎಂದನು.
13
ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.
14
ಆಗ ಯೋಸೇಫನು ಅವರಿಗೆ, “ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ!
15
ಈಗ ನಿಮ್ಮನ್ನು ನಾನು ಪರೀಕ್ಷಿಸುತ್ತೇನೆ. ಹೇಗೆಂದರೆ, ನಿಮ್ಮ ಚಿಕ್ಕ ಸಹೋದರನು ಇಲ್ಲಿಗೆ ಬಂದ ಹೊರತು, ಫರೋಹನ ಜೀವದಾಣೆ ನೀವು ಇಲ್ಲಿಂದ ಹೋಗಬಾರದು.
16
ನಿಮ್ಮಲ್ಲಿಂದ ಒಬ್ಬನನ್ನು ಕಳುಹಿಸಿರಿ, ಅವನು ನಿಮ್ಮ ಸಹೋದರನನ್ನು ಕರೆದುಕೊಂಡು ಬರಲಿ. ಆದರೆ ನೀವು ಸೆರೆಮನೆಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ, ಇಲ್ಲವೋ ಎಂದು ನಿಮ್ಮ ಮಾತುಗಳನ್ನು ಪರೀಕ್ಷಿಸುತ್ತೇನೆ. ಇಲ್ಲದಿದ್ದರೆ, ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು,” ಎಂದು ಹೇಳಿದನು.
17
ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.
18
ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.
19
ನೀವು ಸತ್ಯವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿತನಾಗಿರಲಿ. ಆದರೆ ನೀವು ಎಲ್ಲರೂ ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ.
20
ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ಕರೆತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು. ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಿದರು.
21
ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು.
22
ಆಗ ರೂಬೇನನು ಅವರಿಗೆ ಉತ್ತರವಾಗಿ, “ಹುಡುಗನಿಗೆ ಏನೂ ಕೇಡು ಮಾಡಬೇಡಿರಿ, ಎಂದು ನಾನು ನಿಮಗೆ ಹೇಳಿದರೂ ನೀವು ಕೇಳಲಿಲ್ಲ. ಆದ್ದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ಈಗ ನಾವು ಲೆಕ್ಕ ಒಪ್ಪಿಸುತ್ತಿದ್ದೇವೆ,” ಎಂದನು.
23
ಆದರೆ ಯೋಸೇಫನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಿದ್ದನು ಎಂಬುದು ಅವರಿಗೆ ಗೊತ್ತಾಗಲಿಲ್ಲ. ಏಕೆಂದರೆ ಯೋಸೇಫನು ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದನು.
24
ಅನಂತರ ಯೋಸೇಫನು ಅವರ ಬಳಿಯಿಂದ ಹೊರಟುಹೋಗಿ ಅತ್ತನು. ಮತ್ತೆ ಅವರ ಬಳಿಗೆ ಬಂದು, ಅವರ ಸಂಗಡ ಮಾತನಾಡಿ ಅವರೊಂದಿಗೆ ಸಿಮೆಯೋನನನ್ನು ತಂದು, ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿದನು.
25
ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸಬೇಕೆಂದೂ, ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರುಗಿ ಇಡಬೇಕೆಂದೂ, ಪ್ರಯಾಣಕ್ಕಾಗಿ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು.
26
ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು, ಅಲ್ಲಿಂದ ಹೊರಟು ಹೋದರು.
27
ಆಗ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವುದಕ್ಕೆ ವಸತಿಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ, ಚೀಲದ ಬಾಯಲ್ಲಿಟ್ಟಿದ್ದ ತನ್ನ ಹಣವನ್ನು ಕಂಡನು.
28
ಅವನು ತನ್ನ ಸಹೋದರರಿಗೆ, “ನನ್ನ ಹಣವನ್ನು ಹಿಂದಕ್ಕೆ ಕೊಟ್ಟಿದ್ದಾರೆ, ಅದು ನನ್ನ ಚೀಲದಲ್ಲಿದೆ,” ಎಂದು ಹೇಳಿದ. ಅವರಿಗೆ ಹೃದಯ ಕಂಪನವಾದಂತಾಗಿ ಹೆದರಿ ಒಬ್ಬರಿಗೊಬ್ಬರು, “ದೇವರು ನಮಗೆ ಮಾಡಿದ್ದೇನು?” ಎಂದರು.
29
ಅವರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದಾಗ, ತಮಗೆ ಸಂಭವಿಸಿದ್ದೆಲ್ಲವನ್ನೂ ಅವನಿಗೆ ತಿಳಿಸಿದರು.
30
ದೇಶದ ಅಧಿಪತಿಯಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ, ದೇಶದ ಗೂಢಚಾರರನ್ನಾಗಿ ನಮ್ಮನ್ನು ಎಣಿಸಿದನು.
31
ನಾವು ಅವನಿಗೆ, “ನಾವು ಗೂಢಚಾರರಲ್ಲ, ಸತ್ಯವಂತರೇ.
32
ನಾವು ಹನ್ನೆರಡು ಮಂದಿ ಸಹೋದರರಾಗಿದ್ದು, ಒಂದೇ ತಂದೆಯ ಪುತ್ರರಾಗಿದ್ದೇವೆ, ಒಬ್ಬನು ಇಲ್ಲ, ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ,” ಎಂದೆವು.
33
“ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು, ‘ನೀವು ಯಥಾರ್ಥರೆಂದು ನಾನು ಇದರಲ್ಲಿ ತಿಳಿದುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು, ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತೆಗೆದುಕೊಂಡು ಹೋಗಿರಿ.
34
ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ. ಆಗ ನೀವು ಗೂಢಚಾರರಲ್ಲವೆಂದೂ, ಯಥಾರ್ಥರೆಂದೂ ತಿಳಿದುಕೊಂಡು, ನಿಮ್ಮ ಸಹೋದರರನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು,’ ಎಂದು ಹೇಳಿದನು,” ಎಂದರು.
35
ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ, ಅವನವನ ಹಣದ ಗಂಟು, ಅವನವನ ಚೀಲದಲ್ಲಿ ಇತ್ತು. ಅವರೂ, ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
36
ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.
37
ರೂಬೇನನು ತನ್ನ ತಂದೆಗೆ, “ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ನನ್ನ ಇಬ್ಬರು ಪುತ್ರರನ್ನು ಕೊಂದುಬಿಡು. ನೀನು ಬೆನ್ಯಾಮೀನನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರುಗಿ ತರುವೆನು,” ಎಂದನು.
38
ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.
← Chapter 41
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 43 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50