bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Judges 11
Judges 11
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 12 →
1
ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿದ್ದನು. ಅವನು ಒಬ್ಬ ವೇಶ್ಯೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.
2
ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಪುತ್ರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ, “ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ. ಏಕೆಂದರೆ ನೀನು ಪರಸ್ತ್ರೀಯ ಮಗನು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
3
ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ, ಟೋಬ್ ದೇಶದಲ್ಲಿ ವಾಸವಾಗಿದ್ದನು. ಆ ಸ್ಥಳದ ಪುಂಡಪೋಕರಿಗಳು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನನ್ನು ಹಿಂಬಾಲಿಸುತ್ತಿದ್ದರು.
4
ಕೆಲವು ದಿವಸಗಳಾದ ಮೇಲೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಿದರು.
5
ಆದರೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ, ಗಿಲ್ಯಾದಿನ ಹಿರಿಯರು ಯೆಫ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರಲು ಹೋಗಿ,
6
ಯೆಫ್ತಾಹನಿಗೆ, “ನಾವು ಅಮ್ಮೋನಿಯರ ಸಂಗಡ ಯುದ್ಧಮಾಡುವಂತೆ, ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು,” ಎಂದರು.
7
ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ನೀವಲ್ಲವೇ ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಹೊರಡಿಸಿದವರು? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಏಕೆ ಬಂದಿರಿ?” ಎಂದನು.
8
ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನೀನು ನಮ್ಮೊಂದಿಗೆ ಬಂದು ಅಮ್ಮೋನ್ಯರಿಗೆ ವಿರೋಧವಾಗಿ ಯುದ್ಧಮಾಡಿ, ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ, ಈಗ ನಿನ್ನ ಬಳಿಗೆ ತಿರುಗಿ ಬಂದೆವು,” ಎಂದರು.
9
ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ನೀವು ತಿರುಗಿ ನನ್ನನ್ನು ಮನೆಗೆ ಕರೆತಂದರೆ ಮತ್ತು ಯೆಹೋವ ದೇವರು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ, ನಾನು ನಿಮಗೆ ತಲೆಯಾಗಿರುವೆನೋ?” ಎಂದನು.
10
ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಈ ನಿನ್ನ ಮಾತಿನ ಹಾಗೆ ಮಾಡದೆ ಹೋದರೆ, ಯೆಹೋವ ದೇವರು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದರು.
11
ಹಾಗೆಯೇ ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನನ್ನಾಗಿಯೂ, ಸೈನ್ಯಾಧಿಪತಿಯಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಹೇಳಿದನು.
12
ಯೆಫ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವುದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು?” ಎಂದು ಹೇಳಿ ಕಳುಹಿಸಿದನು.
13
ಅಮ್ಮೋನಿಯ ಅರಸನು ಯೆಫ್ತಾಹನ ದೂತರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ, ಅರ್ನೋನಿನಿಂದ ಯಬ್ಬೋಕಿನವರೆಗೂ ಮತ್ತು ಯೊರ್ದನಿನವರೆಗೂ ಇರುವ ನನ್ನ ದೇಶವನ್ನು ತೆಗೆದುಕೊಂಡರು. ಆದ್ದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರುಗಿಕೊಡು,” ಎಂದನು.
14
ಆದರೆ ಯೆಫ್ತಾಹನು ತಿರುಗಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ,
15
ಅವರಿಗೆ ಯೆಫ್ತಾಹನು ಹೇಳುವ ಮಾತೇನೆಂದರೆ: “ಇದೇ ಇಸ್ರಾಯೇಲರು ಮೋವಾಬಿನ ದೇಶವನ್ನಾದರೂ, ಅಮ್ಮೋನಿಯರ ದೇಶವನ್ನಾದರೂ ತೆಗೆದುಕೊಂಡಿಲ್ಲ.
16
ಆದರೆ ಇಸ್ರಾಯೇಲು ಈಜಿಪ್ಟಿನಿಂದ ಬರುವಾಗ, ಮರುಭೂಮಿಯಲ್ಲಿ ಕೆಂಪು ಸಮುದ್ರದವರೆಗೆ ನಡೆದು ಕಾದೇಶಿಗೆ ಬಂದು,
17
ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆ ಆಗಬೇಕು,’ ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದ್ದರಿಂದ ಇಸ್ರಾಯೇಲರು ಕಾದೇಶಿನಲ್ಲಿ ವಾಸಮಾಡಿದರು.
18
“ಮರುಭೂಮಿಯಲ್ಲಿ ನಡೆದು, ಎದೋಮ್ ದೇಶವನ್ನೂ, ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ, ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ, ಮೋವಾಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳಿದುಕೊಂಡರು.
19
“ಇಸ್ರಾಯೇಲರು ಹೆಷ್ಬೋನನ್ನು ಆಳಿದ ಅಮೋರಿಯರ ಅರಸನಾದಂಥ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಮ್ಮ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವುದಕ್ಕೆ ಅಪ್ಪಣೆ ಆಗಬೇಕು,’ ಎಂದರು.
20
ಆದರೆ ಸೀಹೋನನು ತನ್ನ ಮೇರೆಯನ್ನು ದಾಟುವುದಕ್ಕೆ ಇಸ್ರಾಯೇಲರನ್ನು ನಂಬದೆ, ತನ್ನ ಜನರನ್ನೆಲ್ಲಾ ಕೂಡಿಸಿ, ಯಹಚಿನಲ್ಲಿ ದಂಡಿಳಿದು, ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡಿದನು.
21
“ಆಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೀಹೋನನನ್ನೂ, ಅವನ ಸಕಲ ಜನರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಇಸ್ರಾಯೇಲರು ಸೀಹೋನನನ್ನೂ, ಅವನ ಸಕಲ ಜನರನ್ನೂ ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇಲರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
22
ಅರ್ನೋನಿನಿಂದ ಯಬ್ಬೋಕಿನವರೆಗೂ, ಮರುಭೂಮಿಯಿಂದ ಯೊರ್ದನಿನವರೆಗೂ ಇರುವ ಅಮೋರಿಯರ ಮೇರೆಯಾದ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
23
“ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಅಮೋರಿಯರನ್ನು ತಮ್ಮ ಜನರಾದ ಇಸ್ರಾಯೇಲಿನ ಮುಂದೆ ಹೊರಡಿಸಿರುವಾಗ, ನೀನು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿಯೋ?
24
ಆದರೆ ನಿನ್ನ ದೇವರಾದ ಕೆಮೋಷನು ನಿನ್ನ ಮುಂದೆ ಹೊರಡಿಸುವವರ ದೇಶವನ್ನು ನೀನು ಸ್ವಾಧೀನ ಮಾಡಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವ ದೇವರು ನಮ್ಮ ಮುಂದೆ ಹೊರಡಿಸುವವರ ದೇಶವನ್ನೆಲ್ಲಾ ನಾವು ಸ್ವಾಧೀನ ಮಾಡಿಕೊಳ್ಳುವೆವು.
25
ಈಗ ಚಿಪ್ಪೋರನ ಮಗ ಮೋವಾಬಿನ ಅರಸ ಬಾಲಾಕನಿಗಿಂತ ಯಾವುದರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿಗೆ ವಿರೋಧವಾಗಿ ಎಂದಾದರೂ ವಿವಾದ ಮಾಡಿದನೋ ಅಥವಾ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನೋ?
26
ಇಸ್ರಾಯೇಲು ಹೆಷ್ಬೋನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರೋಯೇರಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರ್ನೋನಿನ ತೀರವಾದ ಎಲ್ಲಾ ಪಟ್ಟಣಗಳಲ್ಲಿಯೂ, ಮುನ್ನೂರು ವರ್ಷಗಳಿಂದ ವಾಸಿಸಿರುವಾಗ, ಇಷ್ಟರವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?
27
ಆದ್ದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧ ಮಾಡುವುದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀಯೆ. ನ್ಯಾಯಾಧಿಪತಿಯಾದ ಯೆಹೋವ ದೇವರು ಈ ಹೊತ್ತು ಇಸ್ರಾಯೇಲರಿಗೂ, ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು.
28
ಹೇಗಿದ್ದರೂ ಅಮ್ಮೋನಿಯರ ಅರಸನು ಯೆಫ್ತಾಹನು ತನಗೆ ಹೇಳಿ ಕಳುಹಿಸಿದ ಮಾತನ್ನು ಕೇಳದೆ ಹೋದನು.
29
ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು.
30
ಯೆಫ್ತಾಹನು ಯೆಹೋವ ದೇವರಿಗೆ ಒಂದು ಪ್ರಮಾಣವನ್ನು ಮಾಡಿ, “ನೀನು ಅಮ್ಮೋನಿಯರನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ,
31
ನಾನು ಅಮ್ಮೋನಿಯರನ್ನು ಜಯಿಸಿ ಹಿಂತಿರುಗಿ ಬರುವಾಗ, ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥದ್ದು ಯೆಹೋವ ದೇವರದಾಗಿರುವುದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು,” ಎಂದನು.
32
ಹೀಗೆ ಯೆಫ್ತಾಹನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಅವರೆದುರಿಗೆ ಹೊರಟುಹೋದನು. ಯೆಹೋವ ದೇವರು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು.
33
ಯೆಫ್ತಾಹನು ಅವರನ್ನು ಅರೋಯೇರಿನಿಂದ ಮಿನ್ನೀಥಿನ ದಾರಿಯವರೆಗೆ ಮತ್ತು ಆಬೇಲ್ ಕೆರಾಮೀಮಗೆ ಹೋಗುವವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯಹೊಂದಿ, ಅಮ್ಮೋನಿಯರು ಇಸ್ರಾಯೇಲರಿಗೆ ಶರಣಾದರು.
34
ಯೆಫ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಹಿಂದಿರುಗಿ ಬರುವಾಗ, ಅವನ ಮಗಳು ದಮ್ಮಡಿಗಳಿಂದಲೂ, ನಾಟ್ಯದಿಂದಲೂ ಅವನನ್ನು ಎದುರುಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು. ಅವಳ ಹೊರತಾಗಿ ಅವನಿಗೆ ಮಗನಾಗಲಿ, ಮಗಳಾಗಲಿ ಇರಲಿಲ್ಲ.
35
ಅವನು ಅವಳನ್ನು ನೋಡಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದೆ. ನನ್ನನ್ನು ತೊಂದರೆ ಪಡಿಸುವವರಲ್ಲಿ ನೀನೂ ಒಬ್ಬಳಾದೆ. ಏಕೆಂದರೆ ನಾನು ಯೆಹೋವ ದೇವರಿಗೆ ನನ್ನ ಬಾಯಿತೆರೆದು, ಪ್ರಮಾಣಮಾಡಿದೆನು, ಹಿಂದೆಗೆಯಲಾರೆನು,” ಎಂದನು.
36
ಅವಳು ಅವನಿಗೆ, “ಅಪ್ಪಾ, ನೀನು ಯೆಹೋವ ದೇವರಿಗೆ ನಿನ್ನ ಬಾಯಿ ತೆರೆದೆಯಲ್ಲ. ಯೆಹೋವ ದೇವರು ಅಮ್ಮೋನಿಯರಾದ ನಿನ್ನ ಶತ್ರುಗಳಿಗೆ ನಿನ್ನಿಂದ ಮುಯ್ಯಿ ತೀರಿಸಿದ್ದರಿಂದ, ಅವರಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು,” ಎಂದಳು.
37
ಇದಲ್ಲದೆ ಅವಳು ತನ್ನ ತಂದೆಗೆ, “ಈ ಕಾರ್ಯವು ನನಗೆ ಆಗಲಿ. ಆದರೆ ನಾನೂ, ನನ್ನ ಗೆಳತಿಯರೂ ಕೂಡ ನನ್ನ ಕನ್ಯಾವಸ್ಥೆಗಾಗಿ ಬೆಟ್ಟಗಳ ಮೇಲೆ ಹೋಗಿ, ನನ್ನ ಗೆಳತಿಯರ ಸಂಗಡ ಅಳುವುದಕ್ಕೆ ನನಗೆ ಎರಡು ತಿಂಗಳು ಸಮಯವನ್ನು ಕೊಡು,” ಎಂದಳು.
38
ಆಗ ಅವನು, “ಎರಡು ತಿಂಗಳು ಹೋಗಿ ಬಾ,” ಎಂದು ಹೇಳಿ ಮಗಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿಯರ ಸಂಗಡ ಹೋಗಿ, ತನ್ನ ಕನ್ಯಾವಸ್ಥೆಗಾಗಿ ಬೆಟ್ಟದಲ್ಲಿ ಅತ್ತು,
39
ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ತೀರ್ಪನ್ನು ಈಡೇರಿಸಿದನು. ಅವಳು ಕನ್ಯೆಯಾಗಿಯೇ ಮರಣಹೊಂದಿದಳು.
40
ಹೀಗೆ ವರ್ಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಪುತ್ರಿಯರು ಹೋಗಿ, ಗಿಲ್ಯಾದ್ಯನಾದ ಯೆಫ್ತಾಹನ ಮಗಳಿಗಾಗಿ ಗೋಳಾಡುವುದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 12 →
All chapters:
1
2
3
4
5
6
7
8
9
10
11
12
13
14
15
16
17
18
19
20
21