bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Leviticus 15
Leviticus 15
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 16 →
1
ಯೆಹೋವ ದೇವರು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2
“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಒಬ್ಬ ಪುರುಷನ ಶರೀರದಿಂದ ಮೇಹಸ್ರಾವ ಹರಿಯುವುದಾಗಿದ್ದರೆ, ಆ ಸ್ರಾವದ ನಿಮಿತ್ತವಾಗಿ ಅವನು ಅಶುದ್ಧನಾಗಿರುವನು.
3
ಅವನ ಸ್ರಾವದಲ್ಲಿ ಅದು ಅವನ ಅಶುದ್ಧತೆಯಾಗಿರುವುದು. ಅವನ ಶರೀರವು ತನ್ನ ಸ್ರಾವದಿಂದ ಹರಿಯುವುದಾಗಿದ್ದರೂ, ಸ್ರಾವವು ಅವನ ಶರೀರದಲ್ಲಿ ನಿಂತು ಹೋಗಿದ್ದರೂ, ಅದು ಅವನ ಅಶುದ್ಧತೆಯಾಗಿರುವುದು. ಅವನ ವಿಸರ್ಜನೆಯು ಹೇಗೆ ಅಶುದ್ಧತೆಯನ್ನು ತರುತ್ತದೆ ಅಂದರೆ:
4
“ ‘ಸ್ರಾವವಿರುವವನು ಮಲಗುವ ಪ್ರತಿಯೊಂದು ಹಾಸಿಗೆಯೂ ಅಶುದ್ಧವಾದದ್ದು, ಅವನು ಕೂತುಕೊಳ್ಳುವ ಪ್ರತಿಯೊಂದು ವಸ್ತುವೂ ಅಶುದ್ಧವಾಗಿರುವುದು.
5
ಅವನ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು, ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.
6
ಇದಲ್ಲದೆ ಸ್ರಾವವಿರುವವನು ಕುಳಿತುಕೊಂಡ ಯಾವುದೇ ವಸ್ತುವಿನ ಮೇಲೆ ಕುಳಿತುಕೊಳ್ಳುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರುವರು.
7
“ ‘ಸ್ರಾವವಿರುವವನ ಶರೀರವನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಮತ್ತು ಸಂಜೆಯವರೆಗೆ ಅವರು ಅಶುದ್ಧನಾಗಿರಬೇಕು.
8
“ ‘ಶುದ್ಧರಾಗಿರುವವರ ಮೇಲೆ ಸ್ರಾವವಿರುವವನು ಉಗುಳಿದರೆ, ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.
9
“ ‘ಸ್ರಾವವುಳ್ಳವನು ಏರಿ ಕುಳಿತುಕೊಂಡಿದ್ದ ತಡಿಯು ಅಶುದ್ಧವಾಗಿರುವುದು.
10
ಅವನ ಕೆಳಗಿರುವ ಯಾವುದಾದರೂ ವಸ್ತುವನ್ನು ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರಬೇಕು, ಅವುಗಳಲ್ಲಿ ಯಾವುದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರುವನು.
11
“ ‘ಸ್ರಾವವುಳ್ಳವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ, ಯಾರನ್ನಾದರೂ ಮುಟ್ಟಿದರೆ ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.
12
“ ‘ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.
13
“ ‘ಸ್ರಾವವುಳ್ಳವನು ತನ್ನ ಸ್ರಾವದಿಂದ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕ ಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗಿರುವನು.
14
ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿ ಯೆಹೋವ ದೇವರ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
15
ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
16
“ ‘ಒಬ್ಬನಿಗೆ ವೀರ್ಯವು ಹೊರಟು ಹೋದರೆ, ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು, ಸಂಜೆಯವರೆಗೆ ಅಶುದ್ಧನಾಗಿರಬೇಕು.
17
ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮವನ್ನು ನೀರಿನಿಂದ ತೊಳೆದು, ಸಂಜೆಯವರೆಗೆ ಅಶುದ್ಧವಾಗಿರಬೇಕು.
18
ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ, ವೀರ್ಯ ಸ್ರಾವವಾಗಿದ್ದರೆ, ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರಬೇಕು.
19
“ ‘ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತ ಸ್ರಾವವಿದ್ದರೆ, ಅವಳು ಏಳು ದಿವಸಗಳವರೆಗೆ ಪ್ರತ್ಯೇಕವಾಗಿರಬೇಕು, ಅವಳನ್ನು ಯಾರಾದರೂ ಮುಟ್ಟಿದರೆ, ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
20
“ ‘ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ಹಾಸಿಗೆ ಅಶುದ್ಧವಾಗಿರುವುದು. ಅವಳು ಕೂತುಕೊಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರುವುದು.
21
ಅವಳ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರುವರು.
22
ಅವಳು ಯಾವುದರ ಮೇಲೆ ಕುಳಿತಿದ್ದಳೋ, ಅದನ್ನು ಮುಟ್ಟಿದವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
23
ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕುಳಿತುಕೊಂಡ ಯಾವದರ ಮೇಲಾಗಲಿ ಇರುವುದನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.
24
“ ‘ಯಾವನಾದರೂ ಅವಳೊಂದಿಗೆ ಸಂಗಮಿಸಿದರೆ ಮತ್ತು ಅವಳ ಸ್ರಾವವು ಅವನಿಗೆ ತಗಲಿದರೆ, ಅವನು ಏಳು ದಿವಸ ಅಶುದ್ಧನಾಗಿರಬೇಕು. ಅವನು ಮಲಗಿಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವುದು.
25
“ ‘ಇದಲ್ಲದೆ ಸ್ತ್ರೀಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ, ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದರೆ, ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು. ಅವಳು ಅಶುದ್ಧಳಾಗಿರುವಳು.
26
ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಹಾಸಿಗೆಯು, ಅವಳ ಮುಟ್ಟಿನ ಹಾಸಿಗೆಯಂತೆ ಅಶುದ್ಧವಾಗಿರುವುದು. ಅವಳು ಕುಳಿತುಕೊಳ್ಳುವುದೆಲ್ಲವೂ ಅವಳ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವುದು.
27
ಯಾರಾದರೂ ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧರಾಗಿರುವರು. ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
28
“ ‘ಅವಳು ತನ್ನ ಸ್ರಾವದಿಂದ ಶುದ್ಧಳಾದರೆ, ಅವಳು ಶುದ್ಧಳಾದಂದಿನಿಂದ ತನಗಾಗಿ ಏಳು ದಿನಗಳನ್ನು ಲೆಕ್ಕಿಸಬೇಕು.
29
ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು, ದೇವದರ್ಶನದ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರಬೇಕು.
30
ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು, ಯಾಜಕನು ಅವಳಿಗಾಗಿ ಅವಳ ಅಶುದ್ಧತೆಯ ಸ್ರಾವದ ವಿಷಯದಲ್ಲಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
31
“ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ”
32
ಮೇಹಸ್ರಾವವುಳ್ಳವನಿಗೂ ವೀರ್ಯ ಸ್ರಾವವುಳ್ಳವನಿಗೂ ಅವುಗಳಿಂದ ಅಶುದ್ಧವಾಗುವವರೆಗೂ ಇರುವ ನಿಯಮವು ಇದೆ.
33
ಮುಟ್ಟು ಇರುವವಳಿಗೂ, ಸ್ರಾವವಿರುವ ಪುರುಷನಿಗೂ ಸ್ತ್ರೀಗೂ, ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮ ಇದೆ.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27