bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Leviticus 24
Leviticus 24
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 25 →
1
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2
“ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು.
3
ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ನಿಮಗೆ ಮತ್ತು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರುವುದು.
4
ದೀಪಗಳು ಚೊಕ್ಕ ಬಂಗಾರದ ದೀಪಸ್ತಂಭದ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
5
“ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು.
6
ಅವುಗಳನ್ನು ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ, ಎರಡು ಸಾಲುಗಳನ್ನಾಗಿ ಇಡಬೇಕು.
7
ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
8
ಪ್ರತಿಯೊಂದು ಸಬ್ಬತ್ ದಿನದಲ್ಲಿಯೂ ಯೆಹೋವ ದೇವರ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮಪಡಿಸಬೇಕು. ಇದು ಇಸ್ರಾಯೇಲರ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
9
ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.”
10
ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ, ಈಜಿಪ್ಟಿನವನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲರ ಪಾಳ್ಯಕ್ಕೆ ಬಂದನು. ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಜಗಳವಾಡಿದರು.
11
ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.
12
ಯೆಹೋವ ದೇವರ ಮನಸ್ಸನ್ನು ತಿಳಿಯುವಂತೆ ಅವನನ್ನು ಕಾವಲಲ್ಲಿ ಬಿಟ್ಟರು.
13
ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
14
“ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ, ಅವನಿಂದ ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
15
ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ಶಪಿಸುವವನು, ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
16
ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು.
17
“ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
18
ಪಶುವನ್ನು ಕೊಲ್ಲುವವರು, ಅದಕ್ಕೆ ಪ್ರತಿಯಾಗಿ ಒಂದು ಪಶುವನ್ನು ಕೊಡಬೇಕು.
19
ಯಾರಾದರೂ ತಮ್ಮ ನೆರೆಯವನಿಗೆ ಊನವಾಗುವಂತೆ ಮಾಡಿದರೆ, ಅವರು ಮಾಡಿದಂತೆಯೇ ಅವರಿಗೆ ಮಾಡಬೇಕು.
20
ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವರು ಒಬ್ಬರಿಗೆ ಊನ ಮಾಡಿದ ಹಾಗೆಯೇ ಅವರಿಗೂ ಮಾಡಬೇಕು.
21
ಪಶುವನ್ನು ಕೊಲ್ಲುವವರು ಅದಕ್ಕೆ ಬದಲುಕೊಡಬೇಕು. ಮನುಷ್ಯರನ್ನು ಕೊಲ್ಲುವವರನ್ನು ಮರಣಕ್ಕೆ ಒಳಪಡಿಸಬೇಕು.
22
ನಿಮಗೆ ಒಂದೇ ವಿಧವಾದ ನಿಯಮವಿರಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”
23
ಶಪಿಸಿದವನನ್ನು ಪಾಳೆಯದ ಹೊರಗೆ ತಂದು, ಅವನನ್ನು ಕಲ್ಲುಗಳಿಂದ ಹೊಡೆಯುವಂತೆ ಮೋಶೆಯು ಇಸ್ರಾಯೇಲರೊಂದಿಗೆ ಮಾತನಾಡಿದನು. ಆಗ ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 25 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27