bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Leviticus 26
Leviticus 26
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 27 →
1
“ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
2
“ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.
3
“ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ,
4
ನಿಮಗೆ ಮಳೆಯನ್ನು ತಕ್ಕ ಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವುದು. ಭೂಮಿಯ ಮರಗಳು ಅವುಗಳ ಫಲವನ್ನು ಕೊಡುವವು.
5
ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
6
“ ‘ನಾನು ದೇಶದಲ್ಲಿ ಶಾಂತಿಯನ್ನು ಕೊಡುವೆನು, ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ. ದೇಶದಲ್ಲಿ ದುಷ್ಟಮೃಗಗಳು ಇಲ್ಲದ ಹಾಗೆ ನಾನು ಮಾಡುವೆನು. ಖಡ್ಗ ನಿಮ್ಮ ದೇಶದಲ್ಲಿ ಹಾದು ಹೋಗುವುದಿಲ್ಲ.
7
ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ, ಅವರು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.
8
ನಿಮ್ಮಲ್ಲಿಯ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿಯ ನೂರು ಮಂದಿ, ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.
9
“ ‘ನಾನು ನಿಮ್ಮನ್ನು ಲಕ್ಷಿಸಿ, ನಿಮ್ಮನ್ನು ಅಭಿವೃದ್ಧಿ ಮಾಡಿ, ನಿಮ್ಮನ್ನು ಹೆಚ್ಚಿಸಿ, ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
10
ನೀವು ಹಳೆಯ ಧಾನ್ಯವನ್ನು ತಿಂದು, ಹೊಸದು ಬಂದಾಗ ಹಳೆಯದನ್ನು ಹೊರಗೆ ತರುವಿರಿ.
11
ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳುವೆನು. ನನ್ನ ಪ್ರಾಣವು ನಿಮ್ಮನ್ನು ತಿರಸ್ಕರಿಸುವುದಿಲ್ಲ.
12
ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವರಾಗಿರುವೆನು. ನೀವು ನನ್ನ ಜನರಾಗಿರುವಿರಿ.
13
ಈಜಿಪ್ಟ್ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ನಿಮ್ಮ ನೊಗದ ಕಟ್ಟುಗಳನ್ನು ಮುರಿದು, ನಿಮ್ಮನ್ನು ತಲೆಯೆತ್ತಿ ನಡೆಯುವಂತೆ ಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಾನೇ.
14
“ ‘ನೀವು ನನ್ನ ಮಾತನ್ನು ಕೇಳದೆ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ,
15
ನನ್ನ ನಿಯಮಗಳನ್ನು ನೀವು ತಿರಸ್ಕರಿಸಿದರೆ, ನನ್ನ ನಿರ್ಣಯಗಳಿಗೆ ಅಸಹ್ಯಪಟ್ಟರೆ, ನೀವು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ,
16
ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
17
ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.
18
“ ‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು.
19
ನಿಮ್ಮ ಬಲದ ಗರ್ವವನ್ನು ಮುರಿದುಹಾಕಿ, ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಕಂಚಿನಂತೆಯೂ ಮಾಡುವೆನು.
20
ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.
21
“ ‘ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ, ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ಬಾಧಿಸುವೆನು.
22
ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.
23
“ ‘ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ,
24
ನಾನು ಸಹ ನಿಮಗೆ ವಿರೋಧವಾಗಿ ನಡೆದು, ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ, ಏಳರಷ್ಟು ಶಿಕ್ಷಿಸುವೆನು.
25
ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು.
26
ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.
27
“ ‘ಇದೆಲ್ಲಾ ಆದರೂ, ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,
28
ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
29
ನೀವು ನಿಮ್ಮ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.
30
ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.
31
ನಿಮ್ಮ ಪಟ್ಟಣಗಳನ್ನು ನಾನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಸುವಾಸನೆಗಳನ್ನು ಮೂಸಿ ನೋಡದೆ ಇರುವೆನು.
32
ನಾನು ದೇಶವನ್ನು ಹಾಳುಮಾಡುವೆನು. ಅದರಲ್ಲಿ ವಾಸವಾಗುವ ನಿಮ್ಮ ಶತ್ರುಗಳೂ ಅದಕ್ಕೆ ಆಶ್ಚರ್ಯಪಡುವರು.
33
ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.
34
ಆಗ ನಾಡು ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವವರೆಗೂ, ನಾಡು ತನ್ನ ಸಬ್ಬತ್ ಕಾಲವನ್ನು ಅನುಭವಿಸುವುದು. ಆಗ ನೆಲವು ವಿಶ್ರಮಿಸಿಕೊಂಡು ತನ್ನ ವಿಶ್ರಾಂತಿಯ ಕಾಲವನ್ನು ಅನುಭವಿಸುವುದು.
35
ನೀವು ನಿಮ್ಮ ಶತ್ರುಗಳ ದೇಶದಲ್ಲಿ ವಾಸವಾಗಿದ್ದಾಗ, ಹಾಳುಬಿದ್ದ ನಿಮ್ಮ ನಾಡು ತಾನು ಹೊಂದದ ವಿಶ್ರಾಂತಿಯನ್ನು ಈಗ ಸುದೀರ್ಘವಾಗಿ ಹೊಂದಿಕೊಳ್ಳುವುದು.
36
“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.
37
ಓಡಿಸುವವನಿಲ್ಲದೆ ಒಬ್ಬರ ಮೇಲೊಬ್ಬರು ಖಡ್ಗದ ಭಯದಿಂದಾದ ಹಾಗೆ ಬೀಳುವರು. ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವುದು ನಿಮ್ಮಿಂದಾಗದು.
38
ಜನಾಂಗಗಳೊಳಗೆ ನಾಶವಾಗುವಿರಿ. ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವುದು.
39
ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು, ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
40
“ ‘ಆದರೆ ಅವರು ನನಗೆ ಮಾಡಿದ ತಮ್ಮ ದುಷ್ಕೃತ್ಯದಲ್ಲಿರುವ ತಮ್ಮ ಅಕ್ರಮವನ್ನೂ, ತಮ್ಮ ಪಿತೃಗಳ ಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದುಕೊಂಡದ್ದನ್ನೂ,
41
ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,
42
ನಾನು ಯಾಕೋಬನಿಗೆ, ಇಸಾಕನಿಗೆ ಮತ್ತು ಅಬ್ರಹಾಮನಿಗೆ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ದೇಶವನ್ನು ದಯೆಯಿಂದ ನೆನಪಿಸಿಕೊಳ್ಳುವೆನು.
43
ಅವರು ಬಿಟ್ಟುಹೋದ ಸ್ವದೇಶವು ಯಾರೂ ಇಲ್ಲದೆ ಹಾಳಾದ ವೇಳೆಯಲ್ಲಿ ತನ್ನ ವಿಶ್ರಾಂತಿಯನ್ನು ಅನುಭವಿಸುವುದು. ಆದರೆ ಅವರು ತಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ಅನುಭವಿಸುವರು. ಅದು ಏಕೆಂದರೆ, ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ತಾತ್ಸಾರ ಮಾಡಿದ್ದರಿಂದಲೇ.
44
ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ.
45
ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು, ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ, ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಮುಂದೆ ಈಜಿಪ್ಟಿನಿಂದ ಬರಮಾಡಿದೆನು. ನಾನೇ ಯೆಹೋವ ದೇವರು.’ ”
46
ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ, ಇಸ್ರಾಯೇಲರಿಗೂ ಮಧ್ಯದಲ್ಲಿ ಇಟ್ಟ ನಿಯಮಗಳೂ, ನ್ಯಾಯಗಳೂ, ಆಜ್ಞಾವಿಧಿಗಳೂ ಇವೇ.
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 27 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27