bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Leviticus 27
Leviticus 27
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 26
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
1
ಯೆಹೋವ ದೇವರು ಮಾತನಾಡಿ ಮೋಶೆಗೆ ಹೇಳಿದ್ದೇನೆಂದರೆ,
2
“ಇಸ್ರಾಯೇಲರ ಸಂಗಡ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಒಬ್ಬನು ಪ್ರತ್ಯೇಕವಾಗಿ ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿಕೊಂಡರೆ, ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕೊಡಬೇಕು.
3
ನೀನು ನೇಮಿಸಬೇಕಾದ ಕ್ರಯವು ಯಾವುದೆಂದರೆ, ಇಪ್ಪತ್ತರಿಂದ ಅರವತ್ತು ವಯಸ್ಸುಳ್ಳ ಪುರುಷನಿಗೆ ನೀನು ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಐವತ್ತು ಶೆಕೆಲ್ ಆಗಿರಬೇಕು.
4
ಹೆಣ್ಣಾಗಿದ್ದರೆ, ನೀನು ನೇಮಿಸುವ ಕ್ರಯವು ಮೂವತ್ತು ಶೆಕೆಲ್ ಆಗಿರಬೇಕು.
5
ಐದರಿಂದ ಇಪ್ಪತ್ತು ವಯಸ್ಸುಳ್ಳ ಪುರುಷನ ಕ್ರಯವು ಇಪ್ಪತ್ತು ಶೆಕೆಲ್, ಸ್ತ್ರೀ ಕ್ರಯವು ಹತ್ತು ಶೆಕೆಲ್ ಆಗಿರಬೇಕು.
6
ಒಂದು ತಿಂಗಳಿಂದ ಐದು ವಯಸ್ಸುಳ್ಳ ಹುಡುಗನ ಕ್ರಯವು ಐದು ಶೆಕೆಲ್, ಹುಡುಗಿಯ ಕ್ರಯವು ಮೂರು ಶೆಕೆಲ್ ಆಗಿರಬೇಕು.
7
ಅರವತ್ತು ವರುಷವೂ, ಅದಕ್ಕೂ ಹೆಚ್ಚಾದ ಪ್ರಾಯವುಳ್ಳ ಪುರುಷನಾಗಿದ್ದರೆ, ನೀನು ನೇಮಿಸುವ ಕ್ರಯವು ಹದಿನೈದು ಶೆಕೆಲ್, ಸ್ತ್ರೀಗೆ ಹತ್ತು ಶೆಕೆಲ್ ಆಗಿರಬೇಕು.
8
ಆದರೆ ನೀನು ನೇಮಿಸಿದ ಕ್ರಯವನ್ನು ಕೊಡದಷ್ಟು ಅವನು ಬಡವನಾಗಿದ್ದರೆ, ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. ಪ್ರಮಾಣ ಮಾಡಿದವನ ಸಂಪತ್ತಿಗೆ ತಕ್ಕಂತೆ ಯಾಜಕನು ಅವನಿಗೆ ಕ್ರಯವನ್ನು ನಿರ್ಣಯಿಸಬೇಕು.
9
“ ‘ಆದರೆ ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುಗಳ ಜಾತಿಯಲ್ಲಿ ಯಾವುದಾಗಿದ್ದರೂ, ಅವುಗಳಲ್ಲಿ ಯೆಹೋವ ದೇವರಿಗೆ ಕೊಡುವಂಥದ್ದು ಪರಿಶುದ್ಧವಾಗಿರಬೇಕು.
10
ಅದನ್ನು ಒಳ್ಳೆಯದಕ್ಕೆ ಕೆಟ್ಟದ್ದನ್ನಾಗಲಿ, ಕೆಟ್ಟದ್ದಕ್ಕೆ ಒಳ್ಳೆಯದನ್ನಾಗಲಿ ಬದಲು ಮಾಡಬಾರದು, ಮಾರ್ಪಡಿಸಲೂಬಾರದು. ಅವನು ಗೊತ್ತುಮಾಡಿದ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ, ಅದು ಮತ್ತು ಅದರ ಬದಲಾಗಿಟ್ಟ ಪಶು ಇವೆರಡೂ ಯೆಹೋವ ದೇವರಿಗೆ ಪರಿಶುದ್ಧವಾಗಿರಬೇಕು.
11
ಅದು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.
12
ಆಗ ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಅದಕ್ಕೆ ಕ್ರಯ ಕಟ್ಟಬೇಕು. ಯಾಜಕನು ನಿರ್ಧರಿಸಿದ ಕ್ರಯವೇ ಅಂತಿಮ ಕ್ರಯವಾಗಿರಬೇಕು.
13
ಹರಕೆ ಮಾಡುವವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿದ್ದರೆ, ನೀನು ನಿರ್ಧರಿಸಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.
14
“ ‘ಒಬ್ಬನು ತನ್ನ ಮನೆಯನ್ನು ಯೆಹೋವ ದೇವರಿಗೆ ಪರಿಶುದ್ಧವಾಗಿರಲೆಂದು ಪ್ರತಿಷ್ಠೆಪಡಿಸಿದರೆ, ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಪರೀಕ್ಷಿಸಿ ಕ್ರಯವನ್ನು ಕಟ್ಟಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಸ್ಥಿರವಾಗಿರಬೇಕು.
15
ಆದರೆ ಪ್ರತಿಷ್ಠೆ ಪಡಿಸಿದವನು ತನ್ನ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಒಂದು ಭಾಗ ಹಣವನ್ನು ಕೊಡಲಿ, ಆಗ ಅದು ಅವನದಾಗಿರುವುದು.
16
“ ‘ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಯೆಹೋವ ದೇವರಿಗೆ ಪ್ರತಿಷ್ಠಿಸಿದರೆ, ಅದರ ಬೀಜದ ಪ್ರಕಾರ ಕ್ರಯ ಕಟ್ಟಬೇಕು. ಒಂದು ಓಮೆರ್ ಜವೆಗೋಧಿಯನ್ನು, ಬೀಜಕ್ಕೆ ಐವತ್ತು ಬೆಳ್ಳಿ ಶೆಕೆಲ್ಗಳನ್ನು ಕೊಡಬೇಕಾಗುವುದು.
17
ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪ್ರತಿಷ್ಠಿಸಿದರೆ, ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.
18
ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪ್ರತಿಷ್ಠೆ ಮಾಡಿದರೆ, ಜೂಬಿಲಿ ಸಂವತ್ಸರದವರೆಗೆ ಮಿಕ್ಕ ವರ್ಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ನಿರ್ಧರಿಸಿ, ಕಟ್ಟಿದ ಕ್ರಯದಿಂದ ಕಳೆಯಬೇಕು.
19
ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿದವನು ಅದನ್ನು ಅವನು ವಿಮೋಚಿಸಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಒಂದು ಪಾಲನ್ನು ಕೊಡಬೇಕು. ಆಗ ಅದು ಸ್ಥಿರವಾಗಿರುವುದು.
20
ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ, ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ, ಅದನ್ನು ಅನಂತರ ವಿಮೋಚಿಸಕೂಡದು.
21
ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.
22
“ ‘ಆದರೆ ತನ್ನ ಹೊಲಗಳಲ್ಲಿ ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಂಥ ಹೊಲವನ್ನು ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
23
ಯಾಜಕನು ಅವನಿಗೆ ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದವರೆಗೂ ಎಣಿಸಬೇಕು. ಅವನು ಆ ದಿವಸದಲ್ಲಿ ಕಟ್ಟಿದ ಕ್ರಯವನ್ನು ಯೆಹೋವ ದೇವರಿಗೆ ಮೀಸಲಾದದ್ದು ಎಂದು ಭಾವಿಸಿ ಕೊಡಬೇಕು.
24
ಆ ಹೊಲವು ಯಾರಿಗೆ ಸ್ವಂತವಾಗಿದ್ದು, ಯಾರಿಂದ ಕೊಂಡುಕೊಳ್ಳಲಾಗಿದೆಯೋ ಅದು ಜೂಬಿಲಿ ವರ್ಷದಲ್ಲಿ ಅವರಿಗೇ ಹಿಂದಕ್ಕೆ ಕೊಡಬೇಕು.
25
ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಇಪ್ಪತ್ತು ಗೇರಾ ತೂಕದ ಶೆಕೆಲ್ ಮೇರೆಗೆ ನೀವು ಕ್ರಯವನ್ನು ನಿಗದಿಮಾಡಬೇಕು.
26
“ ‘ಪಶುಗಳ ಚೊಚ್ಚಲ ಮರಿ ಯೆಹೋವ ದೇವರದಾದ್ದರಿಂದ ಅದನ್ನೂ ಹರಕೆಯಾಗಿ ಕೊಡಬಾರದು. ಅದು ಎತ್ತಾಗಲಿ ಇಲ್ಲವೆ ಕುರಿಯಾಗಲಿ, ಅದು ಯೆಹೋವ ದೇವರದೇ.
27
ಆದರೆ ಅದು ಅಶುದ್ಧ ಪಶುಗಳಲ್ಲಿ ಹುಟ್ಟಿದ್ದಾಗಿದ್ದರೆ, ಹರಕೆ ಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ಕಟ್ಟಿದ ಕ್ರಯದ ಪ್ರಕಾರ ಮಾರಬೇಕು.
28
“ ‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.
29
“ ‘ಯೆಹೋವ ದೇವರಿಗೆಂದು ಮೀಸಲಾದದನ್ನು ಯಾರೂ ಕ್ರಯಕೊಟ್ಟು ವಿಮೋಚಿಸಬಾರದು. ಅಂಥವನಿಗೆ ಮರಣವೇ ಆಗಬೇಕು.
30
“ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.
31
ಯಾವನಾದರೂ ತನ್ನ ಹತ್ತನೆಯ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ, ಅದಕ್ಕಿಂತ ಹೆಚ್ಚಾಗಿ ಅದರ ಐದನೆಯ ಒಂದು ಪಾಲನ್ನು ಕೊಡಬೇಕು.
32
ಇದಲ್ಲದೆ ದನಕುರಿಗಳಲ್ಲಿಯೂ, ಕುರುಬನು ಎಣಿಸುವ ಪಶುಗಳಲ್ಲಿಯೂ ಹತ್ತನೆಯ ಪಾಲು, ಹತ್ತರಲ್ಲಿ ಒಂದು ಯೆಹೋವ ದೇವರಿಗೆ ಪರಿಶುದ್ಧವಾಗಿರುವುದು.
33
ಆ ಪಶು ಒಳ್ಳೆಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸಬಾರದು. ಅವನು ಅದನ್ನು ಬದಲಾಯಿಸಬಾರದು. ಯಾರಾದರೂ ಅದನ್ನು ಬದಲಾಯಿಸಿದ್ದಾದರೆ, ಆಗ ಎರಡೂ ಪಶುಗಳು ಯೆಹೋವ ದೇವರಿಗೆ ಸೇರುತ್ತದೆ, ಅದು ಪರಿಶುದ್ಧವಾಗಿರುತ್ತದೆ ಅದನ್ನು ವಿಮೋಚಿಸಬಾರದು.’ ”
34
ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.
← Chapter 26
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27