bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Leviticus 4
Leviticus 4
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 5 →
1
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2
“ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:
3
“ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.
4
ಅವನು ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿಗೆ ತರಬೇಕು. ತನ್ನ ಕೈಯನ್ನು ಆ ಹೋರಿಯ ತಲೆಯ ಮೇಲಿಟ್ಟು, ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.
5
ಆಗ ಅಭಿಷಿಕ್ತನಾದ ಯಾಜಕನು ಆ ಹೋರಿಯ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಳಿಗೆ ತರಬೇಕು.
6
ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
7
ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.
8
ಅವನು ಪಾಪ ಪರಿಹಾರದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,
9
ಎರಡು ಮೂತ್ರಪಿಂಡಗಳನ್ನು ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ, ಮೂತ್ರಪಿಂಡದೊಂದಿಗೂ ಕಾಳಿಜದ ಉತ್ತಮ ಭಾಗವನ್ನೂ ಅವನು ತೆಗೆಯಬೇಕು.
10
ಸಮಾಧಾನದ ಬಲಿಯನ್ನು ಹೋರಿಯಿಂದ ತೆಗೆದಂತೆಯೇ ತೆಗೆಯಬೇಕು. ಯಾಜಕನು ದಹನಬಲಿಯ ಪೀಠದ ಮೇಲೆ ಅವುಗಳನ್ನು ಸುಡಬೇಕು.
11
ಆ ಹೋರಿಯ ಚರ್ಮವನ್ನು, ಅದರ ಎಲ್ಲಾ ಮಾಂಸವನ್ನು, ಅದರ ತಲೆ, ಅದರ ಕಾಲುಗಳು, ಅದರ ಕರುಳುಗಳು, ಅದರ ಸಗಣಿಯೊಂದಿಗೆ
12
ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು.
13
“ ‘ಮಾಡಬಾರದ ಕೆಲಸಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ಯಾವುದನ್ನಾದರೂ ಇಸ್ರಾಯೇಲರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಮತ್ತು ಅದು ಸಮೂಹಕ್ಕೆ ಕಣ್ಮರೆಯಾಗಿದ್ದರೆ
14
ಅವರು ಮಾಡಿದ ಪಾಪವು ಗೊತ್ತಾದಾಗ, ಆ ಪಾಪಕ್ಕಾಗಿ ಸಮಾಜವು ಒಂದು ಎಳೆಯ ಹೋರಿಯನ್ನು ದೇವದರ್ಶನದ ಗುಡಾರದ ಮುಂದೆ ಪಾಪ ಪರಿಹಾರದ ಬಲಿಯಾಗಿ ತರಬೇಕು.
15
ಸಮಾಜದ ಹಿರಿಯರು ಯೆಹೋವ ದೇವರ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.
16
ಅಭಿಷಿಕ್ತನಾದ ಯಾಜಕನು ಆ ಹೋರಿಯ ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗೆ ತಂದು,
17
ಅದರಲ್ಲಿ ಬೆರಳನ್ನು ಅದ್ದಿ ಅದನ್ನು ಯೆಹೋವ ದೇವರ ಮುಂದೆ ಅಂದರೆ ತೆರೆಯ ಮುಂದೆ ಏಳು ಸಾರಿ ಚಿಮುಕಿಸಬೇಕು.
18
ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.
19
ಅವನು ಅದರ ಎಲ್ಲಾ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.
20
ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.
21
ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ, ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡಬೇಕು. ಅದು ಸಮಾಜಕ್ಕೆ ಪಾಪ ಪರಿಹಾರದ ಬಲಿಯಾಗಿ ಇರುವುದು.
22
“ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,
23
ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದುಬಂದರೆ, ಅವನು ಬಲಿಗಾಗಿ ಹೋತಗಳಲ್ಲಿ ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು.
24
ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.
25
ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.
26
ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.
27
“ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,
28
ಇಲ್ಲವೆ ಅವರು ಮಾಡಿದ ಪಾಪವು ಅವರಿಗೆ ತಿಳಿದುಬಂದರೆ, ಅವರು ಪಾಪ ಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
29
ಅವರು ತಮ್ಮ ಕೈಯನ್ನು ಪಾಪದ ಬಲಿಯ ಮೇಲಿಟ್ಟು, ಆ ಪಾಪ ಪರಿಹಾರದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
30
ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.
31
ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.
32
“ ‘ಯಾರಾದರೂ ಪಾಪ ಪರಿಹಾರದ ಬಲಿಗಾಗಿ ಒಂದು ಕುರಿಮರಿಯನ್ನು ತರುವುದಾದರೆ, ಕಳಂಕರಹಿತವಾದ ಒಂದು ಹೆಣ್ಣನ್ನು ತರಬೇಕು.
33
ಅವರು ಪಾಪ ಪರಿಹಾರದ ಬಲಿಯ ತಲೆಯ ಮೇಲೆ ತಮ್ಮ ಕೈಯನ್ನು ಇಟ್ಟು, ದೋಷಪರಿಹಾರ ಬಲಿಯಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
34
ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಬೇಕು. ಉಳಿದ ಎಲ್ಲಾ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ಯಬೇಕು.
35
ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 5 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27