bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Luke 22
Luke 22
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 23 →
1
ಪಸ್ಕವೆಂಬ, ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸಮೀಪವಾಗಿತ್ತು.
2
ಮುಖ್ಯಯಾಜಕರೂ ನಿಯಮ ಬೋಧಕರೂ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
3
ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಎಂದು ಕರೆಯಲಾಗುವ ಯೂದನಲ್ಲಿ, ಸೈತಾನನು ಪ್ರವೇಶಿಸಿದನು.
4
ಅವನು ಮುಖ್ಯಯಾಜಕರ ಬಳಿಗೂ ದೇವಾಲಯದ ಕಾವಲಧಿಕಾರಿಗಳ ಬಳಿಗೂ ಹೋಗಿ ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಅವರ ಕೂಡ ಚರ್ಚಿಸಿದನು.
5
ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವುದಕ್ಕೆ ವಾಗ್ದಾನ ಮಾಡಿದರು.
6
ಅವನೂ ಸಮ್ಮತಿಸಿ, ಜನಸಮೂಹವು ಇಲ್ಲದಿರುವಾಗ ಯೇಸುವನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಕಾಯುತ್ತಿದ್ದನು.
7
ಆಗ ಪಸ್ಕದ ಕುರಿಯು ಬಲಿಕೊಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನ ಬಂದಿತು.
8
ಯೇಸು ಪೇತ್ರ ಯೋಹಾನರನ್ನು ಕರೆದು, “ನೀವು ಹೋಗಿ ನಮಗೋಸ್ಕರ ಪಸ್ಕಭೋಜನವನ್ನು ಸಿದ್ಧಮಾಡಿರಿ,” ಎಂದರು.
9
ಅವರು ಯೇಸುವಿಗೆ, “ನಾವು ಎಲ್ಲಿ ಸಿದ್ಧಮಾಡಬೇಕು?” ಎಂದರು.
10
ಆಗ ಯೇಸು ಅವರಿಗೆ, “ನೀವು ಪಟ್ಟಣವನ್ನು ಪ್ರವೇಶಿಸಿದಾಗ, ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡಿರುವ ಒಬ್ಬನು ನಿಮ್ಮನ್ನು ಸಂಧಿಸುವನು. ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
11
ನೀವು ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ’ ಎಂದು ಹೇಳಿರಿ.
12
ಅವನು ಕ್ರಮಪಡಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿಯೇ ಪಸ್ಕಭೋಜನ ಸಿದ್ಧಪಡಿಸಿರಿ,” ಎಂದರು.
13
ಅವರು ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡು, ಪಸ್ಕವನ್ನು ಸಿದ್ಧಮಾಡಿದರು.
14
ನಿಶ್ಚಿತ ಸಮಯ ಬಂದಾಗ ಯೇಸು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕುಳಿತುಕೊಂಡರು.
15
ಆಗ ಯೇಸು ಅವರಿಗೆ, “ನಾನು ಬಾಧೆಯನ್ನು ಅನುಭವಿಸುವುದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕಭೋಜನ ಮಾಡುವುದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ.
16
ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕಭೋಜನ ಮಾಡುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
17
ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು, ಸ್ತೋತ್ರಮಾಡಿ, “ಇದನ್ನು ತೆಗೆದುಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ.
18
ದೇವರ ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ,” ಎಂದರು.
19
ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.
20
ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.
21
ಆದರೂ ಇಗೋ, ನನಗೆ ದ್ರೋಹಬಗೆಯುವವನ ಕೈ ನನ್ನ ಕೈಯೊಂದಿಗೆ ಮೇಜಿನ ಮೇಲೆ ಇದೆ.
22
ನೇಮಕವಾದ ಪ್ರಕಾರ ಮನುಷ್ಯಪುತ್ರನಾದ ನಾನು ಹೊರಟುಹೋಗುತ್ತೇನೆ; ಆದರೆ ನನಗೆ ದ್ರೋಹಬಗೆಯುವವನಿಗೋ ಎಷ್ಟೋ ಕಷ್ಟ!” ಎಂದು ಹೇಳಿದರು.
23
ಆಗ ಇದನ್ನು ದ್ರೋಹಬಗೆಯುವವನು ಯಾವನು ಎಂದು ಶಿಷ್ಯರು ತಮ್ಮೊಳಗೆ ಪ್ರಶ್ನೆ ಮಾಡಲಾರಂಭಿಸಿದರು.
24
ಇದಲ್ಲದೆ ತಮ್ಮೊಳಗೆ ಯಾರು ಅತಿ ದೊಡ್ಡವನೆಂಬುದಾಗಿ ಶಿಷ್ಯರಲ್ಲಿ ವಿವಾದವು ಪ್ರಾರಂಭವಾಯಿತು.
25
ಆಗ ಯೇಸು ಅವರಿಗೆ, “ಯೆಹೂದ್ಯರಲ್ಲದವರ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡೆಸುವವರು ಉಪಕಾರಿಗಳು ಎಂದು ಎಣಿಸಿಕೊಳ್ಳುತ್ತಾರೆ.
26
ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿ ದೊಡ್ಡವನಾಗಿರುವವನು ಅತಿ ಚಿಕ್ಕವನಂತೆ ಇರಲಿ ಮತ್ತು ಆಳ್ವಿಕೆ ಮಾಡುವವನು ಸೇವೆ ಮಾಡುವವನಂತೆ ಇರಲಿ.
27
ಯಾರು ದೊಡ್ಡವನು? ಊಟಕ್ಕೆ ಕುಳಿತುಕೊಂಡಿರುವವನೋ ಅಥವಾ ಸೇವೆ ಮಾಡುವವನೋ? ಊಟಕ್ಕೆ ಕುಳಿತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
28
ನೀವೇ, ನನ್ನ ಕಷ್ಟಗಳಲ್ಲಿ ನನ್ನೊಂದಿಗೆ ನಿಂತವರು.
29
ನನ್ನ ತಂದೆ ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ, ನಾನೂ ನಿಮಗೆ ರಾಜ್ಯವನ್ನು ನೇಮಕ ಮಾಡುತ್ತೇನೆ.
30
ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
31
“ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.
32
ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.
33
ಆದರೆ ಅವನು ಯೇಸುವಿಗೆ, “ಕರ್ತದೇವರೇ, ನಾನು ನಿಮ್ಮ ಜೊತೆಯಲ್ಲಿ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.
34
ಆಗ ಯೇಸು, “ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವುದಕ್ಕಿಂತ ಮುಂಚೆ, ಈ ದಿವಸ ಹುಂಜ ಕೂಗುವುದಿಲ್ಲ ಎಂದು ನಿನಗೆ ಹೇಳುತ್ತೇನೆ,” ಎಂದರು.
35
ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.
36
ಆಗ ಯೇಸು ಅವರಿಗೆ, “ಆದರೆ ಈಗ ಹಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಅದರಂತೆಯೇ ಪ್ರಯಾಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಖಡ್ಗಯಿಲ್ಲದವನು ತನ್ನ ಬಟ್ಟೆಯನ್ನು ಮಾರಿ ಅದನ್ನು ಕೊಂಡುಕೊಳ್ಳಲಿ.
37
ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.
38
ಶಿಷ್ಯರು, “ಕರ್ತದೇವರೇ, ಇಗೋ ಇಲ್ಲಿ ಎರಡು ಖಡ್ಗಗಳಿವೆ,” ಎಂದರು. ಅದಕ್ಕೆ ಯೇಸು ಅವರಿಗೆ, “ಅಷ್ಟು ಸಾಕು,” ಎಂದರು.
39
ಯೇಸು ಹೊರಗೆ ಬಂದು ತಮ್ಮ ವಾಡಿಕೆಯಂತೆ ಓಲಿವ್ ಗುಡ್ಡಕ್ಕೆ ಹೋದರು. ಯೇಸುವಿನ ಶಿಷ್ಯರೂ ಅವರನ್ನು ಹಿಂಬಾಲಿಸಿದರು.
40
ಯೇಸು ಆ ಸ್ಥಳದಲ್ಲಿದ್ದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ,” ಎಂದರು.
41
ಯೇಸು ಅವರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣಕಾಲೂರಿ,
42
“ತಂದೆಯೇ, ನಿಮ್ಮ ಚಿತ್ತವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸಿ. ಆದರೂ ನನ್ನ ಚಿತ್ತವಲ್ಲ ನಿಮ್ಮ ಚಿತ್ತದಂತೆಯೇ ಆಗಲಿ,” ಎಂದು ಪ್ರಾರ್ಥಿಸಿದರು.
43
ಆಗ ಪರಲೋಕದಿಂದ ಒಬ್ಬ ದೇವದೂತನು ಯೇಸುವಿಗೆ ಕಾಣಿಸಿಕೊಂಡು, ಅವರನ್ನು ಬಲಪಡಿಸುತ್ತಾ ಇದ್ದನು.
44
ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.
45
ಯೇಸು ಪ್ರಾರ್ಥನೆಮಾಡಿ ಎದ್ದ ಮೇಲೆ ತಮ್ಮ ಶಿಷ್ಯರ ಕಡೆಗೆ ಬಂದು, ಅವರು ದುಃಖದಿಂದ ಬಳಲಿ ನಿದ್ರೆ ಮಾಡುತ್ತಿರುವುದನ್ನು ಕಂಡು ಅವರಿಗೆ,
46
“ನೀವು ನಿದ್ರೆ ಮಾಡುವುದು ಏಕೆ? ಶೋಧನೆಗೆ ಒಳಗಾಗದಂತೆ ಎದ್ದು ಪ್ರಾರ್ಥಿಸಿರಿ,” ಎಂದರು.
47
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದ ಯೂದನು ಅವರಿಗೆ ಮುಂದಾಳಾಗಿ ಬಂದು, ಮುದ್ದಿಡುವುದಕ್ಕಾಗಿ ಯೇಸುವನ್ನು ಸಮೀಪಿಸಿದನು.
48
ಆಗ ಯೇಸು ಅವನಿಗೆ, “ಯೂದಾ, ಮುದ್ದಿನಿಂದ ಮನುಷ್ಯಪುತ್ರನಾದ ನನಗೆ ದ್ರೋಹಮಾಡುತ್ತೀಯೋ?” ಎಂದರು.
49
ಯೇಸುವಿನ ಸುತ್ತಲಿದ್ದ ಶಿಷ್ಯರು ಮುಂದೆ ಸಂಭವಿಸುವುದನ್ನು ಅರಿತು ಯೇಸುವಿಗೆ, “ಕರ್ತದೇವರೇ, ನಾವು ಖಡ್ಗದಿಂದ ಹೊಡೆಯೋಣವೋ?” ಎಂದು ಕೇಳಿದರು.
50
ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು.
51
ಆದರೆ ಯೇಸು, “ಸಾಕು ಇಂಥದ್ದು ಬೇಡ!” ಎಂದು ಹೇಳಿ, ಅವನ ಕಿವಿಯನ್ನು ಮುಟ್ಟಿ ಸ್ವಸ್ಥಮಾಡಿದರು.
52
ಆಗ ಯೇಸು ತಮ್ಮ ಬಳಿಗೆ ಬಂದಿದ್ದ ಮುಖ್ಯಯಾಜಕರಿಗೂ ದೇವಾಲಯದ ಕಾವಲಾಧಿಕಾರಿಗಳಿಗೂ ಹಿರಿಯರಿಗೂ, “ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬಂದ ಹಾಗೆ ಖಡ್ಗಗಳಿಂದಲೂ ದೊಣ್ಣೆಗಳಿಂದಲೂ ನೀವು ಹೊರಟು ಬಂದಿರುವಿರೋ?
53
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.
54
ಆಗ ಅವರು ಯೇಸುವನ್ನು ಬಂಧಿಸಿ, ಮಹಾಯಾಜಕನ ಭವನಕ್ಕೆ ಕರೆದುಕೊಂಡು ಬಂದರು. ಪೇತ್ರನೋ ದೂರದಿಂದ ಹಿಂಬಾಲಿಸಿದನು.
55
ಅವರು ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ, ಅದರ ಸುತ್ತಲೂ ಒಟ್ಟಾಗಿ ಕುಳಿತುಕೊಂಡಾಗ ಪೇತ್ರನೂ ಅವರ ಸಂಗಡ ಸೇರಿ ಕುಳಿತುಕೊಂಡನು.
56
ಆದರೆ ಒಬ್ಬ ದಾಸಿಯು ಬೆಂಕಿಯ ಬಳಿಯಲ್ಲಿ ಕುಳಿತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ, “ಈ ಮನುಷ್ಯನು ಸಹ ಯೇಸುವಿನ ಸಂಗಡ ಇದ್ದವನು,” ಎಂದಳು.
57
ಆದರೆ ಪೇತ್ರನು ಅಲ್ಲಗಳೆದು, “ಅಮ್ಮಾ, ನಾನು ಯೇಸುವನ್ನು ಅರಿಯೆನು,” ಎಂದನು.
58
ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಪೇತ್ರನನ್ನು ಕಂಡು, “ನೀನು ಸಹ ಅವರಲ್ಲಿ ಒಬ್ಬನು,” ಎಂದನು. ಅದಕ್ಕೆ ಪೇತ್ರನು, “ಇಲ್ಲಪ್ಪ, ನಾನಲ್ಲ,” ಎಂದನು.
59
ಹೆಚ್ಚು ಕಡಿಮೆ ಒಂದು ತಾಸು ಕಳೆದನಂತರ ಮತ್ತೊಬ್ಬನು, “ನಿಜವಾಗಿಯೂ ಇವನು ಸಹ ಯೇಸುವಿನೊಂದಿಗೆ ಇದ್ದವನು. ಏಕೆಂದರೆ ಇವನು ಗಲಿಲಾಯದವನೇ,” ಎಂದನು.
60
ಆದರೆ ಪೇತ್ರನು, “ಅಯ್ಯಾ, ನೀನು ಏನು ಹೇಳುತ್ತೀಯೋ ನನಗೆ ಅರ್ಥವಾಗುತ್ತಾಯಿಲ್ಲ,” ಎಂದನು. ಹೀಗೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
61
ಆಗ ಕರ್ತದೇವರು ಹಿಂದಿರುಗಿ ಪೇತ್ರನ ಕಡೆಗೆ ದಿಟ್ಟಿಸಿ ನೋಡಿದರು. “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ,” ಎಂದು ಕರ್ತದೇವರು ತನಗೆ ಹೇಳಿದ್ದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು
62
ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.
63
ಯೇಸುವನ್ನು ಕಾಯುತ್ತಿದ್ದ ಜನರು, ಹಾಸ್ಯಮಾಡಿ ಅವರನ್ನು ಹೊಡೆದರು.
64
ಇದಲ್ಲದೆ ಅವರು ಯೇಸುವಿನ ಕಣ್ಣಿಗೆ ಬಟ್ಟೆ ಕಟ್ಟಿ, ಅವರ ಮುಖದ ಮೇಲೆ ಹೊಡೆದು ಯೇಸುವಿಗೆ, “ನಿನ್ನನ್ನು ಹೊಡೆದವರು ಯಾರು? ಪ್ರವಾದನೆ ಹೇಳು,” ಎಂದರು.
65
ಅವರು ಯೇಸುವಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳನ್ನಾಡಿದರು.
66
ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,
67
“ನೀನು ಆ ಕ್ರಿಸ್ತನೋ? ನಮಗೆ ಹೇಳು,” ಎಂದರು. ಯೇಸು ಅವರಿಗೆ, “ನಾನು ನಿಮಗೆ ಹೇಳಿದರೂ ನೀವು ನಂಬುವುದಿಲ್ಲ.
68
ನಾನು ನಿಮ್ಮನ್ನು ಕೇಳಿದರೂ ನೀವು ಉತ್ತರ ಕೊಡುವುದಿಲ್ಲ.
69
ಆದರೆ ಇಂದಿನಿಂದ ಮನುಷ್ಯಪುತ್ರನಾದ ನಾನು ಸರ್ವಶಕ್ತರಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡಿರುವೆನು,” ಎಂದರು.
70
ಆಗ ಅವರೆಲ್ಲರೂ, “ಹಾಗಾದರೆ ನೀನು ದೇವರ ಪುತ್ರನೋ?” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಉತ್ತರಕೊಟ್ಟರು.
71
ಆಗ ಅವರು, “ನಮಗೆ ಇನ್ನೇನು ಸಾಕ್ಷಿ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವಲ್ಲಾ?” ಎಂದರು.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24