bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Luke 23
Luke 23
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 24 →
1
ಆಗ ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಯೇಸುವನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋದರು.
2
ಅವರು ಯೇಸುವಿನ ಮೇಲೆ ದೂರು ಹೇಳಲಾರಂಭಿಸಿ, “ಈ ನಮ್ಮ ಜನಾಂಗವು ದಂಗೆಯೇಳುವಂತೆಯೂ ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದೂ ಹೇಳಿ ಕೈಸರನಿಗೆ ತೆರಿಗೆ ಕೊಡದಂತೆ ಈತನು ಅಡ್ಡಿಮಾಡುತ್ತಿರುವುದನ್ನೂ ನಾವು ಕಂಡಿದ್ದೇವೆ,” ಎಂದರು.
3
ಆಗ ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಅದಕ್ಕೆ ಯೇಸು ಅವರಿಗೆ, “ನೀವೇ ಹೇಳುತ್ತಿದ್ದೀರಿ,” ಎಂದರು.
4
ತರುವಾಯ ಪಿಲಾತನು, ಮುಖ್ಯಯಾಜಕರಿಗೂ ಜನರಿಗೂ, “ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ,” ಎಂದನು.
5
ಅದಕ್ಕೆ ಅವರು, “ಈತನು ಗಲಿಲಾಯ ಪ್ರಾಂತ ಮೊದಲುಗೊಂಡು ಈ ಸ್ಥಳದವರೆಗೂ ಯೂದಾಯ ಪ್ರಾಂತದ ಎಲ್ಲಾ ಕಡೆಗೂ ಬೋಧಿಸುತ್ತಾ, ಜನರನ್ನು ಕ್ರಾಂತಿಗೆ ಪ್ರೇರೇಪಿಸುತ್ತಿದ್ದಾನೆ,” ಎಂದು ಒತ್ತಾಯ ಪೂರ್ವಕವಾಗಿ ಹೇಳಿದರು.
6
ಪಿಲಾತನು ಗಲಿಲಾಯದ ವಿಷಯವಾಗಿ ಕೇಳಿದಾಗ, “ಈ ಮನುಷ್ಯನು ಗಲಿಲಾಯದವನೋ?” ಎಂದು ವಿಚಾರಿಸಿದನು.
7
ಯೇಸು ಹೆರೋದನ ಅಧಿಕಾರಕ್ಕೆ ಸಂಬಂಧ ಪಟ್ಟವನೆಂದು ತಿಳಿದ ಕೂಡಲೇ ಅದೇ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಯೇಸುವನ್ನು ಕಳುಹಿಸಿದನು.
8
ಹೆರೋದನು ಯೇಸುವನ್ನು ಕಂಡಾಗ, ಅತ್ಯಂತ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ, ಅವರನ್ನು ಕಾಣಲು ಬಹಳ ಕಾಲದಿಂದ ಆಶೆಪಟ್ಟಿದ್ದನು. ಅವರಿಂದಾಗುವ ಸೂಚಕಕಾರ್ಯವನ್ನು ಕಾಣಲು ನಿರೀಕ್ಷಿಸುತ್ತಿದ್ದನು.
9
ಅವನು ಯೇಸುವನ್ನು ಅನೇಕ ಪ್ರಶ್ನೆಗಳನ್ನು ಕೇಳಿದರೂ ಯೇಸು ಅವನಿಗೆ ಏನೂ ಉತ್ತರ ಕೊಡಲಿಲ್ಲ.
10
ಮುಖ್ಯಯಾಜಕರೂ ನಿಯಮ ಬೋಧಕರು ನಿಂತುಕೊಂಡು ಬಲವಾಗಿ ಯೇಸುವಿನ ಮೇಲೆ ದೂರುಗಳನ್ನು ಹೇಳುತ್ತಿದ್ದರು.
11
ಆಗ ಹೆರೋದನು ತನ್ನ ಸೈನಿಕರೊಂದಿಗೆ ಯೇಸುವನ್ನು ತಿರಸ್ಕರಿಸಿ, ಹಾಸ್ಯಮಾಡಿ, ಅವರ ಮೇಲೆ ರಾಜವಸ್ತ್ರವನ್ನು ಹೊದಿಸಿ ಅವರನ್ನು ತಿರುಗಿ ಪಿಲಾತನ ಬಳಿಗೆ ಕಳುಹಿಸಿದನು.
12
ಪಿಲಾತನೂ ಹೆರೋದನೂ ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು. ಏಕೆಂದರೆ ಅದುವರೆಗೂ ಅವರು ವೈರಿಗಳಾಗಿದ್ದರು.
13
ಪಿಲಾತನು ಮುಖ್ಯಯಾಜಕರನ್ನೂ ಅಧಿಕಾರಿಗಳನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ ಅವರಿಗೆ,
14
“ಜನರು ತಿರುಗಿ ಬೀಳುವಂತೆ ಮಾಡುತ್ತಾನೆಂದು ನೀವು ಈತನನ್ನು ನನ್ನ ಬಳಿಗೆ ತಂದಿದ್ದೀರಿ. ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ಅಪರಾಧವೂ ಕಾಣಲಿಲ್ಲ.
15
ಮಾತ್ರವಲ್ಲದೆ, ಈತನನ್ನು ನಮ್ಮ ಬಳಿಗೆ ಕಳುಹಿಸಿದ ಹೆರೋದ ಅರಸನಿಗೂ ಸಹ ಈತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ. ಇಗೋ, ಈತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
16
ಹೀಗಿರುವುದರಿಂದ ನಾನು ಈತನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.
17
ಏಕೆಂದರೆ ಅಧಿಪತಿಯು ಸೆರೆಯಾಳು ಒಬ್ಬನನ್ನು ಹಬ್ಬದಲ್ಲಿ ಜನರಿಗೋಸ್ಕರ ಬಿಡಿಸುವುದು ಪದ್ಧತಿಯಾಗಿತ್ತು.
18
ಆಗ ಅವರೆಲ್ಲರೂ ಆ ಕ್ಷಣವೇ, “ಈತನಿಗೆ ಮರಣದಂಡನೆ ವಿಧಿಸಿರಿ, ನಮಗೆ ಬರಬ್ಬನನ್ನು ಬಿಡುಗಡೆಮಾಡು,” ಎಂದು ಬೊಬ್ಬೆಹಾಕಿದರು.
19
ಬರಬ್ಬನು ಪಟ್ಟಣದಲ್ಲಿ ನಡೆದ ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಿದವನಾಗಿದ್ದನು.
20
ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಜನರಲ್ಲಿ ಮನವಿ ಮಾಡಿಕೊಂಡನು.
21
ಅವರಾದರೋ, “ಈತನನ್ನು ಶಿಲುಬೆಗೆ ಹಾಕಿಸು, ಈತನನ್ನು ಶಿಲುಬೆಗೆ ಹಾಕಿಸು!” ಎಂದು ಆರ್ಭಟಿಸತೊಡಗಿದರು.
22
ಪಿಲಾತನು ಮೂರನೆಯ ಸಾರಿ ಅವರಿಗೆ, “ಏಕೆ? ಈತನು ಮಾಡಿದ ಅಪರಾಧವೇನು? ಈತನಲ್ಲಿ ಮರಣದಂಡನೆಗೆ ಕಾರಣವಾದದ್ದೇನೂ ನನಗೆ ಕಾಣಲಿಲ್ಲ. ಆದ್ದರಿಂದ ನಾನು ಈತನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.
23
ಆದರೆ ಯೇಸುವನ್ನು ಶಿಲುಬೆಗೆ ಹಾಕಿಸಬೇಕೆಂದು ಜನರು ಆರ್ಭಟಿಸುತ್ತಾ, ಒತ್ತಾಯಮಾಡಿದರು. ಹೀಗೆ ಅವರ ಕೂಗಾಟವೇ ಗೆದ್ದಿತು.
24
ಪಿಲಾತನು ಅವರು ಕೇಳಿಕೊಂಡಂತೆಯೇ ಆಗಲಿ ಎಂದು ನಿರ್ಣಯಿಸಿದನು.
25
ಇದಲ್ಲದೆ ಪಿಲಾತನು ಜನರು ಬರಬ್ಬನನ್ನು ಎಂದರೆ, ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಿದವನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನೋ ಅವರ ಇಷ್ಟಕ್ಕೆ ಒಪ್ಪಿಸಿದನು.
26
ಸೈನಿಕರು ಯೇಸುವನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆದ ಸೀಮೋನನೆಂಬವನನ್ನು ಹಿಡಿದು, ಅವನ ಮೇಲೆ ಶಿಲುಬೆಯನ್ನು ಹೊರಿಸಿ, ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
27
ಜನರ ಮಹಾ ಸಮೂಹ ಯೇಸುವಿನ ಹಿಂದೆ ಹೊರಟಿತು. ಅವರಲ್ಲಿ ಯೇಸುವಿಗಾಗಿ ಶೋಕಿಸುತ್ತಾ, ಗೋಳಾಡುತ್ತಿದ್ದ ಮಹಿಳೆಯರು ಸಹ ಇದ್ದರು.
28
ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಪುತ್ರಿಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿ ಅಳಿರಿ.
29
ಏಕೆಂದರೆ, ‘ಇಗೋ, ಬಂಜೆಯರೂ ಹೆರದವರೂ ಹಾಲು ಕುಡಿಸದವರೂ ಧನ್ಯರು,’ ಎಂದು ಜನರು ಹೇಳುವ ದಿವಸಗಳು ಬರುತ್ತವೆ.
30
ಆಗ ಅವರು, “ ‘ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ!” ಗುಡ್ಡಗಳಿಗೆ, “ನಮ್ಮನ್ನು ಮುಚ್ಚಿಕೊಳ್ಳಿರಿ!” ’ ಎಂದು ಹೇಳಲಾರಂಭಿಸುವರು.
31
ಅವರು ಹಸಿ ಮರಕ್ಕೆ ಇವುಗಳನ್ನು ಮಾಡಿದರೆ, ಒಣ ಮರಕ್ಕೆ ಇನ್ನೇನು ಮಾಡಿಯಾರು?” ಎಂದರು.
32
ಅಪರಾಧಿಗಳಾದ ಬೇರೆ ಇಬ್ಬರನ್ನು ಕೂಡ ಯೇಸುವಿನೊಂದಿಗೆ ಮರಣದಂಡನೆಗಾಗಿ ಕರೆದುಕೊಂಡು ಹೋದರು.
33
ಅವರು “ತಲೆಬುರುಡೆಯ ಸ್ಥಳ” ಎಂದು ಕರೆಯಲಾಗುವ ಸ್ಥಳಕ್ಕೆ ಬಂದಾಗ, ಅಲ್ಲಿ ಯೇಸುವನ್ನು ಶಿಲುಬೆಗೆ ಹಾಕಿದರು. ಆ ಅಪರಾಧಿಗಳಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿ ಮತ್ತೊಬ್ಬನನ್ನು ಅವರ ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.
34
ಆಗ ಯೇಸು, “ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು.
35
ಜನರು ನೋಡುತ್ತಾ ನಿಂತುಕೊಂಡಿದ್ದರು. ಅವರೊಂದಿಗೆ ಅಧಿಕಾರಿಗಳು ಸಹ ಯೇಸುವನ್ನು ಅಪಹಾಸ್ಯಮಾಡಿ, “ಬೇರೆಯವರನ್ನು ರಕ್ಷಿಸಿದ ಈತನು ದೇವರು ಆರಿಸಿಕೊಂಡ ಕ್ರಿಸ್ತನಾಗಿದ್ದರೆ, ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.
36
ಸೈನಿಕರು ಸಹ ಯೇಸುವಿನ ಬಳಿಗೆ ಬಂದು ಅವರನ್ನು ಹಾಸ್ಯಮಾಡಿ ಯೇಸುವಿಗೆ ಹುಳಿರಸವನ್ನು ಕೊಟ್ಟು,
37
“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ,” ಎಂದರು.
38
ಯೇಸುವಿನ ಶಿಲುಬೆಯ ಮೇಲ್ಗಡೆಯಲ್ಲಿ ಒಂದು ಲಿಖಿತ ಹೀಗಿತ್ತು: ಈತನು ಯೆಹೂದ್ಯರ ಅರಸನು.
39
ಶಿಲುಬೆಗೆ ಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, “ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು, ನಮ್ಮನ್ನೂ ರಕ್ಷಿಸು,” ಎಂದು ಯೇಸುವನ್ನು ದೂಷಿಸಿದನು.
40
ಆದರೆ ಮತ್ತೊಬ್ಬ ಅಫರಾಧಿಯು ಅವನನ್ನು ಖಂಡಿಸುತ್ತಾ, “ನೀನು ಇದೇ ದಂಡನೆಗೆ ಗುರಿಯಾಗಿದ್ದರೂ ದೇವರಿಗೆ ಭಯಪಡುವುದಿಲ್ಲವೋ?
41
ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ,” ಎಂದನು.
42
ಬಳಿಕ ಅವನು, “ಯೇಸುವೇ, ನೀವು ನಿಮ್ಮ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪುಮಾಡಿಕೊಳ್ಳಿರಿ,” ಎಂದನು.
43
ಆಗ ಯೇಸು ಅವನಿಗೆ, “ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
44
ಆಗ ಸುಮಾರು ಮಧ್ಯಾಹ್ನವಾಗಿತ್ತು, ಆ ಹೊತ್ತಿನಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
45
ಸೂರ್ಯನು ಕಳೆಗುಂದಿದನು ಮತ್ತು ದೇವಾಲಯದ ತೆರೆಯು ಹರಿದು ಎರಡು ಭಾಗವಾಯಿತು.
46
ಯೇಸು ಮಹಾಧ್ವನಿಯಿಂದ, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.
47
ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
48
ಆ ದೃಶ್ಯವನ್ನು ಕಾಣಲು ಬಂದ ಜನರು ನಡೆದ ಘಟನೆಗಳನ್ನು ಕಂಡು, ತಮ್ಮ ಎದೆಗಳನ್ನು ಬಡಿದುಕೊಂಡು ಹಿಂದಿರುಗಿ ಹೋದರು.
49
ಯೇಸುವಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯದಿಂದ ಅವರನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
50
ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು, ಇವನು ಆಲೋಚನಾ ಸಭೆಯವನೂ ಒಳ್ಳೆಯವನೂ ಮತ್ತು ನೀತಿವಂತನೂ ಆಗಿದ್ದನು.
51
ಇವನು ಅವರ ತೀರ್ಮಾನಕ್ಕೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ. ಇವನು ಯೆಹೂದ್ಯರ ಪಟ್ಟಣವಾದ ಅರಿಮಥಾಯದವನೂ ದೇವರ ರಾಜ್ಯಕ್ಕಾಗಿ ಎದುರುನೋಡುವವನೂ ಆಗಿದ್ದನು.
52
ಇವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ಕೊಡಲು ಬೇಡಿಕೊಂಡನು.
53
ತರುವಾಯ ಇವನು ಶರೀರವನ್ನು ಕೆಳಗೆ ಇಳಿಸಿ, ನಾರುಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಇಟ್ಟನು, ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿರಲಿಲ್ಲ.
54
ಅಂದು ಸಿದ್ಧತೆಯ ದಿನವಾಗಿತ್ತು. ಸಬ್ಬತ್ ದಿನ ಪ್ರಾರಂಭವಾಗಲಿತ್ತು.
55
ಗಲಿಲಾಯದಿಂದ ಯೇಸುವಿನೊಂದಿಗೆ ಬಂದ ಸ್ತ್ರೀಯರು ಅರಿಮಥಾಯದ ಯೋಸೇಫನೊಂದಿಗೆ ಹೋಗಿ, ಸಮಾಧಿಯನ್ನೂ ದೇಹವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿದರು.
56
ಅವರು ಮನೆಗೆ ಹಿಂತಿರುಗಿ ಪರಿಮಳ ದ್ರವ್ಯವನ್ನೂ ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡರು; ಆದರೆ ಮೋಶೆಯ ಆಜ್ಞಾನುಸಾರವಾಗಿ ಸಬ್ಬತ್ ದಿನದಲ್ಲಿ ವಿಶ್ರಮಿಸಿಕೊಂಡರು.
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24