bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Matthew 15
Matthew 15
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 16 →
1
ಯೆರೂಸಲೇಮಿನಿಂದ ಫರಿಸಾಯರು ಮತ್ತು ನಿಯಮ ಬೋಧಕರು ಯೇಸುವಿನ ಬಳಿಗೆ ಬಂದು,
2
“ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯವನ್ನು ಏಕೆ ಮೀರುತ್ತಾರೆ? ಅವರು ಊಟಕ್ಕೆ ಮುಂಚೆ ತಮ್ಮ ಕೈಗಳನ್ನು ಏಕೆ ತೊಳೆದುಕೊಳ್ಳುವುದಿಲ್ಲ?” ಎಂದರು.
3
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ನೀವು ದೇವರ ಆಜ್ಞೆಯನ್ನು ಏಕೆ ಮೀರುತ್ತೀರಿ?
4
‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ದೇವರು ಹೇಳಿದ್ದಾರೆ.
5
ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ,
6
‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.
7
ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ:
8
“ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
9
ಅವರು ಮನುಷ್ಯರ ಆಜ್ಞೆಗಳನ್ನು ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ಆರಾಧಿಸುವುದು ವ್ಯರ್ಥ.’ ”
10
ಯೇಸು ಜನಸಮೂಹವನ್ನು ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ.
11
ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ, ಆದರೆ ಬಾಯೊಳಗಿಂದ ಹೊರಗೆ ಬರುವಂಥದ್ದೇ ಮನುಷ್ಯನನ್ನು ಅಶುದ್ಧ ಮಾಡುತ್ತದೆ,” ಎಂದು ಹೇಳಿದರು.
12
ತರುವಾಯ ಯೇಸುವಿನ ಶಿಷ್ಯರು ಬಂದು, “ಫರಿಸಾಯರು ನಿಮ್ಮ ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿಮಗೆ ತಿಳಿಯಿತೇ?” ಎಂದು ಕೇಳಿದರು.
13
ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಪರಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊಂದು ಗಿಡವು ಬೇರುಸಹಿತವಾಗಿ ಕಿತ್ತುಹಾಕಲಾಗುವುದು.
14
ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.
15
ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸು,” ಎಂದನು.
16
ಅದಕ್ಕೆ ಯೇಸು, “ನೀವು ಸಹ ಇನ್ನೂ ಬುದ್ಧಿಯಿಲ್ಲದವರಾಗಿದ್ದೀರಾ?” ಎಂದು ಕೇಳಿ,
17
“ಬಾಯೊಳಕ್ಕೆ ಹೋಗಿ ಹೊಟ್ಟೆಯಲ್ಲಿ ಸೇರುವುದೆಲ್ಲವೂ ವಿಸರ್ಜಿತವಾಗುವುದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
18
ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವು ಹೃದಯದೊಳಗಿಂದ ಬಂದು ಮನುಷ್ಯನನ್ನು ಅಶುದ್ಧ ಮಾಡುತ್ತವೆ.
19
ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.
20
ಇವುಗಳೇ ಮನುಷ್ಯನನ್ನು ಅಶುದ್ಧ ಮಾಡುತ್ತವೆ; ಆದರೆ ಕೈತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ,” ಎಂದರು.
21
ಯೇಸು ಅಲ್ಲಿಂದ ಹೊರಟು ಟೈರ್ ಸೀದೋನ್ ಪ್ರದೇಶಕ್ಕೆ ಬಂದರು.
22
ಆಗ, ಕಾನಾನ್ಯ ಸ್ತ್ರೀಯೊಬ್ಬಳು ಬಂದು ಅವರಿಗೆ, “ಸ್ವಾಮೀ, ದಾವೀದನ ಪುತ್ರನೇ, ನನ್ನನ್ನು ಕರುಣಿಸು. ನನ್ನ ಮಗಳು ದೆವ್ವದ ಕಾಟದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.
23
ಆದರೆ ಯೇಸು ಆಕೆಗೆ ಉತ್ತರ ಕೊಡಲಿಲ್ಲ. ಆಗ ಶಿಷ್ಯರು ಯೇಸುವಿನ ಬಳಿ ಬಂದು, “ಆಕೆಯನ್ನು ಕಳುಹಿಸಿಬಿಡು, ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ” ಎಂದು ಕೇಳಿಕೊಂಡರು.
24
ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು.
25
ಆಕೆಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮೀ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡಳು.
26
ಆಗ ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದು ಹೇಳಿದರು.
27
ಆಗ ಆಕೆಯು, “ಸ್ವಾಮೀ, ಅದು ನಿಜವೇ, ಆದರೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ನಾಯಿಮರಿಗಳು ತಿನ್ನುತ್ತವಲ್ಲಾ,” ಎಂದಳು.
28
ಯೇಸು ಉತ್ತರವಾಗಿ ಆಕೆಗೆ, “ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ,” ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು.
29
ಯೇಸು ಅಲ್ಲಿಂದ ಹೊರಟು ಗಲಿಲಾಯ ಸರೋವರದ ಸಮೀಪಕ್ಕೆ ಬಂದು, ಬೆಟ್ಟವನ್ನು ಹತ್ತಿ ಅಲ್ಲಿ ಕುಳಿತುಕೊಂಡರು.
30
ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು, ಕುರುಡರನ್ನು, ಮೂಕರನ್ನು, ಊನವಾದವರನ್ನು ಮತ್ತು ಬೇರೆ ಅನೇಕ ರೋಗಿಗಳನ್ನು ತಮ್ಮೊಂದಿಗೆ ಕರೆದುಕೊಂಡು ಬಂದು ಯೇಸುವಿನ ಪಾದದ ಬಳಿಯಲ್ಲಿ ಬಿಟ್ಟರು. ಯೇಸು ಅವರನ್ನೆಲ್ಲಾ ಸ್ವಸ್ಥಪಡಿಸಿದರು.
31
ಮೂಕರು ಮಾತನಾಡುವುದನ್ನೂ ಊನವಾದವರು ಸ್ವಸ್ಥರಾಗಿರುವುದನ್ನೂ ಕುಂಟರು ನಡೆದಾಡುವುದನ್ನೂ ಕುರುಡರು ಕಾಣುವುದನ್ನೂ ಜನಸಮೂಹದವರು ಕಂಡು ಆಶ್ಚರ್ಯಪಟ್ಟರು. ಅವರು ಇಸ್ರಾಯೇಲಿನ ದೇವರನ್ನು ಕೊಂಡಾಡಿದರು.
32
ಯೇಸು ತಮ್ಮ ಶಿಷ್ಯರನ್ನು ಕರೆದು, “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ,” ಎಂದರು.
33
ಅದಕ್ಕೆ ಶಿಷ್ಯರು, “ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ನಿರ್ಜನ ಪ್ರದೇಶದಲ್ಲಿ ನಮಗೆ ಎಲ್ಲಿಂದ ರೊಟ್ಟಿ ಸಿಕ್ಕೀತು?” ಎಂದರು.
34
ಯೇಸು ಅವರಿಗೆ, “ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದರು. ಶಿಷ್ಯರು, “ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ,” ಎಂದರು.
35
ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟರು.
36
ಅನಂತರ ಯೇಸು ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಡಲು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
37
ಅವರೆಲ್ಲರೂ ಊಟಮಾಡಿ ತೃಪ್ತರಾದರು. ಅನಂತರ ಶಿಷ್ಯರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.
38
ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರಿದ್ದರು.
39
ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಊರಿಗೆ ಬಂದರು.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28