bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Numbers 13
Numbers 13
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 14 →
1
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
2
“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಜನರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು,” ಎಂದರು.
3
ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಪಾರಾನ್ ಮರುಭೂಮಿಯಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾಯೇಲರ ಮುಖ್ಯಸ್ಥರಾಗಿದ್ದರು.
4
ಅವರ ಹೆಸರುಗಳು ಯಾವುವೆಂದರೆ: ರೂಬೇನನ ಗೋತ್ರದ ಜಕ್ಕೂರನ ಮಗ ಶಮ್ಮೂವ,
5
ಸಿಮೆಯೋನ್ ಗೋತ್ರದ ಹೋರಿಯನ ಮಗ ಶಾಫಾಟನು,
6
ಯೆಹೂದ ಗೋತ್ರದ ಯೆಫುನ್ನೆಯ ಮಗ ಕಾಲೇಬನು,
7
ಇಸ್ಸಾಕಾರ್ ಗೋತ್ರದ ಯೋಸೇಫನ ಮಗ ಇಗಾಲ್,
8
ಎಫ್ರಾಯೀಮ್ ಗೋತ್ರದ ನೂನನ ಮಗ ಹೋಶೇಯ,
9
ಬೆನ್ಯಾಮೀನ್ ಗೋತ್ರದ ರಾಫೂವನ ಮಗ ಪಲ್ಟೀ,
10
ಜೆಬುಲೂನ್ ಗೋತ್ರದ ಸೋದೀಯ ಮಗ ಗದ್ದೀಯೇಲ್,
11
ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗ ಗದ್ದೀ,
12
ದಾನನ ಗೋತ್ರದ ಗೆಮಲ್ಲೀಯನ ಮಗ ಅಮ್ಮಿಯೇಲ್,
13
ಆಶೇರ್ ಗೋತ್ರದ ಮೀಕಾಯೇಲನ ಮಗ ಸೆತೂರ್,
14
ನಫ್ತಾಲಿ ಗೋತ್ರದ ವಾಪೆಸೀಯನ ಮಗ ನಹಬೀ.
15
ಗಾದನ ಗೋತ್ರದ ಮಾಕೀಯನ ಮಗ ಗೆಯೂಯೇಲ್.
16
ದೇಶವನ್ನು ಸಂಚರಿಸಿ ನೋಡುವುದಕ್ಕಾಗಿ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನು.
17
ಮೋಶೆ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ನೆಗೆವ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ,
18
ಆ ದೇಶವು ಎಂಥಾದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳವರೋ, ಬಲಹೀನರೋ? ಸ್ವಲ್ಪ ಜನರೋ, ಬಹಳ ಜನರೋ? ಎಂದೂ,
19
ಅವರು ವಾಸಿಸುವ ದೇಶವು ಎಂಥಾದ್ದೋ? ಅದು ಒಳ್ಳೆಯದಾಗಿದೆಯೋ, ಕೆಟ್ಟದ್ದಾಗಿದೆಯೋ? ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ? ಅವರು ವಾಸಿಸುವುದು ಡೇರೆಗಳಲ್ಲಿಯೋ, ಬಲವಾದ ಕೋಟೆಗಳಲ್ಲಿಯೋ? ಎಂದೂ,
20
ಆ ಭೂಮಿಯು ಎಂಥಾದ್ದೋ? ಸಾರವಾದದ್ದೋ? ನಿಸ್ಸಾರವಾದದ್ದೋ? ಮರಗಳುಳ್ಳದ್ದೋ? ಇಲ್ಲದಿರುವುದೋ? ಎಂದು ನೋಡಿರಿ. ನೀವು ಧೈರ್ಯವುಳ್ಳವರಾಗಿದ್ದು, ಆ ಭೂಮಿಯ ಫಲವನ್ನು ತರಬೇಕು,” ಎಂದನು. ಆ ಕಾಲವು ಪ್ರಥಮ ದ್ರಾಕ್ಷಿ ಹಣ್ಣುಗಳ ಕಾಲವಾಗಿತ್ತು.
21
ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು.
22
ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.
23
ಅವರು ಎಷ್ಕೋಲ್ ಹಳ್ಳದವರೆಗೂ ಬಂದು, ಅಲ್ಲಿ ದ್ರಾಕ್ಷಿ ಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು, ಅದನ್ನು ಅಡ್ಡ ಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು. ಇದಲ್ಲದೆ ದಾಳಿಂಬೆ, ಅಂಜೂರ ಹಣ್ಣುಗಳನ್ನು ತೆಗೆದುಕೊಂಡು ಹೋದರು.
24
ಇಸ್ರಾಯೇಲರು ಅಲ್ಲಿ ದ್ರಾಕ್ಷಿ ಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು.
25
ಅವರು ದೇಶವನ್ನು ಸಂಚರಿಸಿ ನೋಡಿ, ನಲವತ್ತು ದಿವಸಗಳಾದ ಮೇಲೆ ತಿರುಗಿ ಬಂದರು.
26
ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
27
ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ. ಅದರ ಫಲವು ಇವೇ.
28
ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು. ಪಟ್ಟಣಗಳು ಭದ್ರವಾಗಿಯೂ, ಬಹಳ ದೊಡ್ಡದಾಗಿಯೂ ಇವೆ. ಅನಾಕನ ಮಕ್ಕಳನ್ನು ನಾವು ಅಲ್ಲಿ ಕಂಡೆವು.
29
ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು.
30
ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.
31
ಆದರೆ ಅವನ ಸಂಗಡ ಹೋದ ಜನರು, “ಆ ಜನರ ಬಳಿಗೆ ಹೋಗುವುದಕ್ಕೆ ನಮ್ಮಿಂದಾಗುವುದಿಲ್ಲ, ಅವರು ನಮಗಿಂತ ಬಲಿಷ್ಠರಾಗಿದ್ದಾರೆ,” ಎಂದರು.
32
ಅವರು ಸಂಚರಿಸಿ ನೋಡಿದಂಥ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿ ಬಂದ ದೇಶವು ತನ್ನಲ್ಲಿ ವಾಸವಾಗಿರುವವರನ್ನೇ ತಿಂದುಬಿಡುವ ದೇಶವಾಗಿದೆ. ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾ ಶರೀರದ ಮನುಷ್ಯರು.
33
ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು.
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 14 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36