bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Numbers 26
Numbers 26
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 27 →
1
ವ್ಯಾಧಿಯ ತರುವಾಯ ಯೆಹೋವ ದೇವರು ಮೋಶೆಗೂ, ಆರೋನನ ಮಗನೂ, ಯಾಜಕನೂ ಆಗಿರುವ ಎಲಿಯಾಜರನ ಸಂಗಡ ಮಾತನಾಡಿ,
2
“ಇಸ್ರಾಯೇಲರ ಸಮಸ್ತ ಸಮೂಹದವರಲ್ಲಿ ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಯುದ್ಧಕ್ಕೆ ಹೋಗುವುದಕ್ಕೆ ಶಕ್ತರಾದವರೆಲ್ಲರನ್ನು ಜನಗಣತಿ ಮಾಡಿ ಅವರ ಗೋತ್ರಗಳ ಪ್ರಕಾರ ತೆಗೆದುಕೊಳ್ಳಿರಿ,” ಎಂದರು.
3
ಆಗ ಮೋಶೆಯೂ ಯಾಜಕನಾದ ಎಲಿಯಾಜರನೂ ಮೋವಾಬಿನ ಬಯಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ,
4
“ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇಪ್ಪತ್ತು ವರ್ಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.” ಈಜಿಪ್ಟ್ ದೇಶದಿಂದ ಹೊರಟು ಬಂದಿದ್ದ ಇಸ್ರಾಯೇಲರು ಇವರು:
5
ಇಸ್ರಾಯೇಲನ ಚೊಚ್ಚಲ ಮಗ ರೂಬೇನನೂ, ರೂಬೇನನ ಮಕ್ಕಳೂ; ಹನೋಕನೂ, ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;
6
ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ಮೀಯಿಂದ ಕರ್ಮೀಯರ ಕುಟುಂಬ.
7
ಇವೇ ರೂಬೇನ್ಯರ ಕುಟುಂಬಗಳು. ಇವರಲ್ಲಿ ಎಣಿಕೆಯಾದವರ ಸಂಖ್ಯೆ 43,730 ಪುರುಷರು.
8
ಪಲ್ಲೂವಿನ ಪುತ್ರ ಎಲೀಯಾಬನು.
9
ಎಲೀಯಾಬನ ಪುತ್ರರು ನೆಮೂಯೇಲ್, ದಾತಾನ್, ಅಬೀರಾಮ್. ಈ ದಾತಾನನೂ, ಅಬೀರಾಮನೂ ಜನರಲ್ಲಿ ಪ್ರಸಿದ್ಧರಾಗಿದ್ದು; ಕೋರಹನ ಗುಂಪಿನಲ್ಲಿದ್ದು; ಯೆಹೋವ ದೇವರಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.
10
ಭೂಮಿಯು ತನ್ನ ಬಾಯಿಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು. ಹಾಗೆಯೇ ಆ ಗುಂಪಿನವರಲ್ಲಿ ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. ಹೀಗೆ ಇಸ್ರಾಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು. ಅವರು ದೃಷ್ಟಾಂತವಾದರು.
11
ಆದರೂ ಕೋರಹನ ಮಕ್ಕಳು ಸಾಯಲಿಲ್ಲ.
12
ಕುಟುಂಬಗಳ ಪ್ರಕಾರ ಸಿಮೆಯೋನನ ಪುತ್ರರು. ನೆಮೂಯೇಲನಿಂದ ನೆಮೂಯೇಲ್ಯರ ಕುಟುಂಬ; ಯಾಮೀನನಿಂದ ಯಾಮೀನ್ಯರ ಕುಟುಂಬ; ಯಾಕೀನನಿಂದ ಯಾಕೀನ್ಯರ ಕುಟುಂಬ;
13
ಜೆರಹನ ವಂಶಸ್ಥರಾದ ಜೆರಹಿಯರು, ಸೌಲನಿಂದ ಸೌಲ್ಯರ ಕುಟುಂಬ;
14
ಸಿಮೆಯೋನ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 22,200 ಪುರುಷರು.
15
ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯಿಂದ ಹಗ್ಗೀಯರ ಕುಟುಂಬ ಶೂನೀಯಿಂದ ಶೂನೀಯರ ಕುಟುಂಬ;
16
ಒಜ್ನೀಯ ವಂಶಸ್ಥರಾದ ಒಜ್ನೀಯರು, ಏರೀಯ ವಂಶಸ್ಥರಾದ ಏರೀಯರು,
17
ಅರೋದನಿಂದ ಅರೋದ್ಯರ ಕುಟುಂಬ; ಅರೇಲೀಯಿಂದ ಅರೇಲೀಯರ ಕುಟುಂಬ.
18
ಗಾದನ ಮಕ್ಕಳ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 40,500 ಪುರುಷರು.
19
ಯೆಹೂದನ ಪುತ್ರರು: ಏರ್, ಓನಾನನೂ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
20
ಕುಟುಂಬಗಳ ಪ್ರಕಾರ ಯೆಹೂದನ ಪುತ್ರರು. ಶೇಲಹನಿಂದ ಶೇಲಾನ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹಿಯರ ಕುಟುಂಬ;
21
ಪೆರೆಚನ ಪುತ್ರರು, ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ. ಹಾಮೂಲನಿಂದ ಹಾಮೂಲ್ಯರು ಕುಟುಂಬ
22
ಯೆಹೂದನ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 76,500 ಪುರುಷರು.
23
ಕುಟುಂಬಗಳ ಪ್ರಕಾರ ಇಸ್ಸಾಕಾರನ ಪುತ್ರರು. ತೋಲನ ವಂಶಸ್ಥರಾದ ತೋಲಾಯರು, ಪುವ್ವನಿಂದ ಪೂನ್ಯರ ಕುಟುಂಬ;
24
ಯಾಶೂಬನಿಂದ ಯಾಶೂಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ.
25
ಇಸ್ಸಾಕಾರನ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 64,300 ಪುರುಷರು.
26
ಜೆಬುಲೂನನ ಪುತ್ರರು: ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನಿಂದ ಯಹಲೇಲ್ಯರ ಕುಟುಂಬ.
27
ಜೆಬುಲೂನ್ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 60,500 ಪುರುಷರು.
28
ಕುಟುಂಬಗಳ ಪ್ರಕಾರ ಯೋಸೇಫನ ಪುತ್ರರು: ಮನಸ್ಸೆ, ಎಫ್ರಾಯೀಮ್.
29
ಮನಸ್ಸೆಯ ಪುತ್ರರು: ಮಾಕೀರನಿಂದ ಮಾಕೀರ್ಯರ ಕುಟುಂಬ; ಮಾಕೀರನು ಗಿಲ್ಯಾದನನ್ನು ಪಡೆದನು. ಗಿಲ್ಯಾದನಿಂದ ಗಿಲ್ಯಾದ್ಯರ ಕುಟುಂಬ.
30
ಗಿಲ್ಯಾದನ ಪುತ್ರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ;
31
ಅಸ್ರೀಯೇಲನಿಂದ ಅಸ್ರೀಯೇಲ್ಯರ ಕುಟುಂಬ, ಶೆಕೆಮನಿಂದ ಶೆಕೆಮ್ಯರ ಕುಟುಂಬ;
32
ಶೆಮೀದಾಯನಿಂದ ಶೆಮೀದಾಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ.
33
ಹೇಫೆರನ ಮಗ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಪುತ್ರಿಯರು ಇದ್ದರು. ಚಲ್ಪಹಾದನ ಪುತ್ರಿಯರ ಹೆಸರುಗಳು ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
34
ಮನಸ್ಸೆಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 52,700 ಪುರುಷರು.
35
ಕುಟುಂಬಗಳ ಪ್ರಕಾರ ಎಫ್ರಾಯೀಮನ ಪುತ್ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನಿಯರ ಕುಟುಂಬ.
36
ಶೂತೆಲಹನ ಪುತ್ರರು: ಏರಾನನಿಂದ ಏರಾನ್ಯರ ಕುಟುಂಬ.
37
ಎಫ್ರಾಯೀಮನ ಪುತ್ರರ ಎಫ್ರಾಯೀಮನ ಪುತ್ರರುಗಳು ಇವೇ. ಅವರಲ್ಲಿ ಲೆಕ್ಕಿತರಾದವರ ಸಂಖ್ಯೆ 32,500. ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.
38
ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು: ಬೆಳಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;
39
ಶೂಫಾಮನಿಂದ ಶೂಫಾಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ.
40
ಬೆಳಗನ ಪುತ್ರರು ಆರ್ದನೂ ನಾಮಾನನೂ. ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ.
41
ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು ಇವರೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 45,600.
42
ಕುಟುಂಬಗಳ ಪ್ರಕಾರ ದಾನನ ಪುತ್ರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ; ಕುಟುಂಬಗಳ ಪ್ರಕಾರ ದಾನನ ಕುಟುಂಬಗಳು ಇವೇ.
43
ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 64,400.
44
ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನನಿಂದ ಇಮ್ನಾಹರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.
45
ಬೆರೀಯನ ಕುಮಾರರು: ಹೆಬೆರನಿಂದ ಹೆಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ.
46
ಆಶೇರನ ಮಗಳ ಹೆಸರು ಸೆರಹ.
47
ಲೆಕ್ಕಾನುಸಾರವಾದ ಆಶೇರನ ಪುತ್ರರ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 53,400.
48
ಕುಟುಂಬಗಳ ಪ್ರಕಾರ ನಫ್ತಾಲಿಯ ಪುತ್ರರು: ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀಯ ವಂಶಸ್ಥರಾದ ಗೂನೀಯರು,
49
ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ.
50
ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರು 45,400.
51
ಇಸ್ರಾಯೇಲರಲ್ಲಿ ಲೆಕ್ಕಿತರಾದವರ ಸಂಖ್ಯೆ 6,01,730.
52
ಯೆಹೋವ ದೇವರು ಮೋಶೆಗೆ,
53
“ಇವರಿಗೆ ನಾಡನ್ನು ಹೆಸರುಗಳ ಲೆಕ್ಕದ ಪ್ರಕಾರ ಸೊತ್ತಾಗಿ ಹಂಚಿಕೊಡು.
54
ಹೆಚ್ಚು ಮಂದಿಯುಳ್ಳ ಗೋತ್ರಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಗೋತ್ರಕ್ಕೆ ಕಡಿಮೆಯಾಗಿಯೂ ಕೊಡು. ಹೀಗೆ ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸೊತ್ತನ್ನು ಹಂಚಿಕೊಡು.
55
ಇದಲ್ಲದೆ ಚೀಟು ಹಾಕುವುದರಿಂದ ದೇಶವನ್ನು ಪಾಲುಮಾಡಬೇಕು. ತಮ್ಮ ಗೋತ್ರಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ತಮ್ಮ ಪಾಲನ್ನು ಪಡೆಯಬೇಕು.
56
ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿಯ ಪ್ರಕಾರ ಪಾಲಾಗಬೇಕು.”
57
ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಕೆಯಾದವರು ಇವರೇ. ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೊಹಾತನಿಂದ ಕೊಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.
58
ಲೇವಿಯರ ಕುಟುಂಬಗಳು ಇವೇ. ಲಿಬ್ನೀಯರ ಕುಟುಂಬ; ಹೆಬ್ರೋನಿಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹೀಯರ ಕುಟುಂಬ. ಕೊಹಾತನು ಅಮ್ರಾಮನನ್ನು ಪಡೆದನು.
59
ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಈಜಿಪ್ಟಿನಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
60
ಆರೋನನಿಗೆ ನಾದಾಬನೂ ಅಬೀಹೂ ಎಲಿಯಾಜರನೂ ಈತಾಮಾರನೂ ಹುಟ್ಟಿದರು.
61
ಆದರೆ ನಾದಾಬನೂ ಅಬೀಹೂ ಯೆಹೋವ ದೇವರ ಮುಂದೆ ಆಜ್ಞಾಪಿಸದೇ ಇದ್ದ ಬೇರೆ ಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
62
ಇವರಲ್ಲಿ ಲೆಕ್ಕಿತರಾದವರು ಒಂದು ತಿಂಗಳೂ ಹಾಗೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 23,000 ಆಗಿತ್ತು. ಇವರಿಗೆ ಇಸ್ರಾಯೇಲರಲ್ಲಿ ಸೊತ್ತು ದೊರೆಯದ ಕಾರಣ ಅವರು ಇಸ್ರಾಯೇಲರೊಳಗೆ ಲೆಕ್ಕಿತರಾಗಲಿಲ್ಲ.
63
ಇವರನ್ನು ಮೋಶೆಯೂ ಯಾಜಕನಾದ ಎಲಿಯಾಜರನೂ ಇಸ್ರಾಯೇಲರಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
64
ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಎಣಿಸಿದಾಗ, ಎಣಿಕೆಯಾದವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.
65
ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 27 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
Recommended Reading
Commentary
Numbers Commentaries
→
Devotional
Numbers Devotional Guide
→
Get This Bible
Kannada KSB (ಕನ್ನಡ ಸಮಕಾಲಿಕ ಅನುವಾದ) Study Bible
→