bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Numbers 35
Numbers 35
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 34
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 36 →
1
ಯೆಹೋವ ದೇವರು ಯೆರಿಕೋವಿಗೆ ಎದುರಾಗಿ ಯೊರ್ದನಿನ ಬಳಿಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,
2
“ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿಯರಿಗೆ ವಾಸಮಾಡುವುದಕ್ಕೆ ಕೆಲವು ಪಟ್ಟಣಗಳನ್ನು ಕೊಡಬೇಕು. ಪಟ್ಟಣಗಳ ಸುತ್ತಮುತ್ತಲಿರುವ ಹುಲ್ಲುಗಾವಲು ಪ್ರದೇಶಗಳನ್ನು ನೀವು ಲೇವಿಯರಿಗೆ ಕೊಡಬೇಕು.
3
ನಂತರ ಅವರು ವಾಸಮಾಡುವದಕ್ಕೆ ಪಟ್ಟಣಗಳು, ಅವರು ಹೊಂದಿರುವ ಪಶುಗಳಿಗೋಸ್ಕರವೂ ಮತ್ತು ಅವರ ಎಲ್ಲಾ ಇತರ ಪ್ರಾಣಿಗಳಿಗೂ ಹುಲ್ಲುಗಾವಲು ಪ್ರದೇಶಗಳನ್ನು ಹೊಂದಿರುತ್ತಾರೆ.
4
“ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣಗಳ ಉಪನಗರಗಳು, ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.
5
ನೀವು ಪಟ್ಟಣದ ಹೊರಗೆ ಪೂರ್ವದಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ ಅಳೆಯಬೇಕು. ಮಧ್ಯದಲ್ಲಿ ಪಟ್ಟಣವಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
6
“ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯ ಹತ್ಯೆ ಮಾಡಿದವನು ಅಲ್ಲಿಗೆ ಓಡುವ ಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು. ಅವುಗಳ ಹೊರತು ನೀವು ನಲವತ್ತೆರಡು ಪಟ್ಟಣಗಳನ್ನು ಕೊಡಬೇಕು.
7
ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು, ಅವುಗಳ ಉಪನಗರಗಳ ಸಂಗಡ ನಲವತ್ತೆಂಟು ಪಟ್ಟಣಗಳಾಗಿರಬೇಕು.
8
ನೀವು ಇಸ್ರಾಯೇಲರ ಸ್ವಾಧೀನದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ, ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತೆಗೆದುಕೊಳ್ಳಬೇಕು. ಒಬ್ಬೊಬ್ಬನು ತಾನು ಹೊಂದುವ ಸೊತ್ತಿಗನುಸಾರವಾಗಿ ತನ್ನ ಪಟ್ಟಣಗಳೊಳಗಿಂದ ಲೇವಿಯರಿಗೆ ಕೊಡಬೇಕು,” ಎಂದು ಹೇಳಿದರು.
9
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
10
“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,
11
ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
12
ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು.
13
ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.
14
ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
15
ಕೈತಪ್ಪಿ ಪ್ರಾಣಹತ್ಯೆ ಮಾಡುವವರೆಲ್ಲರೂ, ಅಲ್ಲಿಗೆ ಓಡಿಹೋಗುವುದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲರಿಗೂ, ಪರಕೀಯರಿಗಾಗಿ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.
16
“ ‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
17
ಒಬ್ಬನು ಸಾಯುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
18
ಇಲ್ಲವೆ ಯಾರಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದುಕೊಂದರೆ, ಆ ವ್ಯಕ್ತಿಯು ಕೊಲೆಗಾರ; ಆ ಕೊಲೆಪಾತಕನಿಗೆ ನಿಜವಾಗಿಯೂ ಮರಣಶಿಕ್ಷೆಯಾಗಬೇಕು.
19
ರಕ್ತಪಾತಕ್ಕೆ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ಕೊಲ್ಲಬೇಕು. ಅವನು ಕೊಲೆಪಾತಕನನ್ನು ನೋಡಿದಾಗ, ಅವನನ್ನೂ ಕೊಲ್ಲಬೇಕು.
20
ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ, ಇಲ್ಲವೆ ನೂಕುವುದರಿಂದಲಾದರೂ, ಸಮಯ ನೋಡಿಕೊಂಡು ಅವನ ಮೇಲೆ ಯಾವುದನ್ನಾದರೂ ಬಲವಾಗಿ ಎಸೆದರೆ,
21
ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು.
22
“ ‘ಆದರೆ ಶತ್ರುತ್ವವಿಲ್ಲದೆ ಆಕಸ್ಮಿಕವಾಗಿ ಅವನನ್ನು ನೂಕುವುದರಿಂದಲಾದರೂ, ಸಮಯ ಸಾಧಿಸದೆ ಯಾವುದಾದರೊಂದು ವಸ್ತುವನ್ನು ಅವನ ಮೇಲೆ ಎಸೆದರೆ,
23
ಇಲ್ಲವೆ ಶತ್ರುತ್ವವಿಲ್ಲದೆ ಅವನ ಕೇಡನ್ನು ಹುಡುಕದೆ ಅವನನ್ನು ನೋಡದೆ ಮರಣವಾಗುವಂತೆ ಯಾವುದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳ ಮಾಡಿದರೆ,
24
ಆಗ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ, ರಕ್ತಪಾತಕ್ಕೆ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
25
ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸುವವನ ಕೈಯಿಂದ ತಪ್ಪಿಸಿ, ಅವನು ಓಡಿ ಹೋದ ಆಶ್ರಯದ ಪಟ್ಟಣಕ್ಕೆ ತಿರುಗಿ ಸೇರಿಸಬೇಕು. ಅಲ್ಲೇ ಅವನು ಪರಿಶುದ್ಧ ಎಣ್ಣೆಯಿಂದ ಅಭಿಷೇಕ ಹೊಂದಿದ ಮಹಾಯಾಜಕನು ಸಾಯುವವರೆಗೂ ವಾಸಮಾಡಲಿ.
26
“ ‘ಆದರೆ ಕೊಲೆಪಾತಕನು ತಾನು ಓಡಿ ಹೋದ ಆಶ್ರಯದ ಪಟ್ಟಣದ ಮೇರೆಯನ್ನು ಯಾವ ಸಮಯದಲ್ಲಾದರೂ ಮೀರಿ ಹೊರಟರೆ,
27
ರಕ್ತಕ್ಕೆ ಸೇಡು ತೀರಿಸುವವನು ಅವನನ್ನು ತನ್ನ ಆಶ್ರಯದ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಲೆಪಾತಕನನ್ನು ಕೊಂದರೆ, ಅವನಿಗೆ ರಕ್ತಾಪರಾಧವಿಲ್ಲ.
28
ಏಕೆಂದರೆ ಅವನು ತನ್ನ ಆಶ್ರಯದ ಪಟ್ಟಣದ ಮಹಾಯಾಜಕನು ಸಾಯುವವರೆಗೂ ವಾಸಮಾಡಬೇಕಾಗಿತ್ತು. ಮಹಾಯಾಜಕನ ಮರಣದ ತರುವಾಯ ಕೊಲೆಪಾತಕನು ತನ್ನ ಸೊತ್ತಿರುವ ದೇಶಕ್ಕೆ ಹೋಗಬಹುದು.
29
“ ‘ಹೀಗೆ ಇವು ನಿಮ್ಮ ಸಮಸ್ತ ನಿವಾಸಿಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಯಾಗಿರಬೇಕು.
30
“ ‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು.
31
“ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.
32
“ ‘ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿಗೋಸ್ಕರ ಅವನು ತಿರುಗಿಬಂದು ಮಹಾಯಾಜಕನು ಸಾಯುವವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತೆಗೆದುಕೊಳ್ಳಬೇಡಿರಿ.
33
“ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
34
ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’ ” ಎಂದರು.
← Chapter 34
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 36 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36