bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Numbers 4
Numbers 4
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 5 →
1
ಯೆಹೋವ ದೇವರು ಮೋಶೆಯ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
2
“ಲೇವಿಯರೊಳಗೆ ಕೊಹಾತ್ಯರಲ್ಲಿಯ ಕುಟುಂಬಗಳನ್ನು ಗೋತ್ರಗಳನ್ನಾಗಿ ಲೆಕ್ಕಮಾಡು.
3
ಮೂವತ್ತು ವರ್ಷವಾದವರನ್ನೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷದವರವರೆಗೆ ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕೆ ಬರುವವರನ್ನು ಲೆಕ್ಕಮಾಡು.
4
“ದೇವದರ್ಶನದ ಗುಡಾರದಲ್ಲಿ ಕೊಹಾತ್ಯರು ಮಾಡುವ ಸೇವೆ ಯಾವುದೆಂದರೆ, ದೇವದರ್ಶನ ಗುಡಾರದ ಅತಿಪರಿಶುದ್ಧವಾದ ವಸ್ತುಗಳನ್ನು ಕಾಪಾಡುವುದು.
5
ಜನರು ಹೊರಡುವಾಗ, ಆರೋನನೂ, ಅವನ ಮಕ್ಕಳೂ ಒಳಗೆ ಹೋಗಿ ಪರದೆಯನ್ನು ಇಳಿಸಿ, ಅದರಿಂದ ಒಡಂಬಡಿಕೆಯ ಮಂಜೂಷವನ್ನು ಮುಚ್ಚಿ,
6
ಅದರ ಮೇಲೆ ಕಡಲುಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗದಲ್ಲಿ ಪೂರ್ಣವಾದ ನೀಲಿವಸ್ತ್ರವನ್ನು ಹಾಸಿ, ಕೋಲುಗಳನ್ನು ಅದರ ಸ್ಥಳದಲ್ಲಿ ಇಡಬೇಕು.
7
“ಸಮ್ಮುಖದ ರೊಟ್ಟಿಯ ಮೇಜಿನ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದರ ಮೇಲೆ ಪಾತ್ರೆಗಳನ್ನು, ಸೌಟುಗಳನ್ನು, ಬೋಗುಣಿಗಳನ್ನು ಮತ್ತು ಪಾನಾರ್ಪಣೆಯ ಹೂಜಿಗಳನ್ನು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಯನ್ನು ಅದರ ಮೇಲೆ ಇಡಬೇಕು.
8
ಅವೆಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.
9
“ಇದಲ್ಲದೆ ಅವರು ನೀಲಿವಸ್ತ್ರವನ್ನು ತೆಗೆದುಕೊಂಡು, ಅದರಿಂದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ, ಅದರ ಬತ್ತಿ ಕತ್ತರಿಸುವ ಸಲಕರಣೆಗಳನ್ನೂ, ಅದರ ಬಟ್ಟಲುಗಳನ್ನೂ, ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
10
ಅವರು ಅದನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಇಟ್ಟು, ಅಡ್ಡ ದಂಡಕ್ಕೆ ಕಟ್ಟಬೇಕು.
11
“ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಮುಚ್ಚಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.
12
“ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವ ಸೇವೆಯ ಎಲ್ಲಾ ಸಲಕರಣೆಗಳನ್ನು ಅವರು ತೆಗೆದುಕೊಂಡು ನೀಲಿ ವಸ್ತ್ರದಿಂದ ಕಟ್ಟಿ, ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ, ಅಡ್ಡ ದಂಡಕ್ಕೆ ಕಟ್ಟಬೇಕು.
13
“ಬಲಿಪೀಠದ ಬೂದಿಯನ್ನು ತೆಗೆದು, ಅದರ ಮೇಲೆ ಧೂಮ್ರವರ್ಣದ ವಸ್ತ್ರವನ್ನು ಹಾಸಿ,
14
ಅದರ ಮೇಲೆ ಸೇವೆ ಮಾಡುವ ಎಲ್ಲಾ ಸಲಕರಣೆಗಳನ್ನು, ಅಗ್ನಿ ಪಾತ್ರೆಗಳನ್ನು, ಮುಳ್ಳುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಬಲಿಪೀಠದ ಎಲ್ಲಾ ಸಲಕರಣೆಗಳನ್ನು ಅದರ ಮೇಲಿಟ್ಟು, ಕಡಲುಹಂದಿಯ ಚರ್ಮಗಳ ಹೊದಿಕೆಯನ್ನು ಹಾಕಿ, ಹೊರುವ ಕೋಲುಗಳನ್ನು ಇಡಬೇಕು.
15
“ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.
16
“ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”
17
ಇದಲ್ಲದೆ ಯೆಹೋವ ದೇವರು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
18
“ನೀವು ಲೇವಿಯರೊಳಗಿಂದ ಕೊಹಾತ್ಯರ ಗೋತ್ರದ ಕಟುಂಬಗಳು ನಾಶವಾಗಿ ಹೋಗದಂತೆ ನೋಡಿಕೊಳ್ಳಿರಿ.
19
ಅವರು ಮಹಾಪರಿಶುದ್ಧ ವಸ್ತುಗಳ ಸಮೀಪಕ್ಕೆ ಬರುವಾಗ, ಅವರು ಸಾಯದೆ ಬದುಕುವ ಹಾಗೆ ಹೀಗೆ ಎಚ್ಚರಿಕೆ ವಹಿಸಬೇಕು: ಆರೋನನೂ ಅವನ ಪುತ್ರರೂ ಒಳಗೆ ಪ್ರವೇಶಿಸಿ, ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಯನ್ನೂ ನೇಮಿಸಬೇಕು.
20
ಆದರೆ ಕೊಹಾತ್ಯರು ದೇವದರ್ಶನದ ಗುಡಾರದ ಒಳಗೆ ಬಂದು, ಒಂದು ಕ್ಷಣವೂ ಆ ಪವಿತ್ರ ವಸ್ತುಗಳನ್ನು ನೋಡಬಾರದು, ನೋಡಿ ಸಾವನ್ನಪ್ಪದಿರಲಿ.”
21
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
22
“ಗೇರ್ಷೋನನ ಪುತ್ರರ ಲೆಕ್ಕವನ್ನು ಸಹ ಅವರ ತಂದೆಗಳ ಮನೆಗಳ ಪ್ರಕಾರವಾಗಿಯೂ, ಅವರ ಕುಲಗಳ ಪ್ರಕಾರವಾಗಿಯೂ ತೆಗೆದುಕೊಳ್ಳಬೇಕು.
23
ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳ ಪುರುಷರನ್ನೂ ದೇವದರ್ಶನ ಗುಡಾರದಲ್ಲಿ ಸೇವೆ ಮಾಡುವುದಕ್ಕೂ, ಅದನ್ನು ಪೂರೈಸುವುದಕ್ಕೂ ಸೇರುವವರೆಲ್ಲರನ್ನೂ ಎಣಿಸು.
24
“ಗೇರ್ಷೋನ್ಯರ ಕುಟುಂಬಗಳ ಸೇವೆಯೂ ಜವಾಬ್ದಾರಿಕೆ ಯಾವುದೆಂದರೆ,
25
ಅವರು ಗುಡಾರದ ಪರದೆಗಳನ್ನೂ ದೇವದರ್ಶನ ಗುಡಾರವನ್ನೂ ಅದರ ಹೊದಿಕೆಯನ್ನೂ ಅದರ ಮೇಲಿರುವ ಕಡಲುಹಂದಿಯ ಚರ್ಮಗಳ ಹೊದಿಕೆಯನ್ನೂ ದೇವದರ್ಶನ ಗುಡಾರದ ಬಾಗಿಲಿನ ಪರದೆಯನ್ನೂ
26
ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಿಲಿನ ಪರದೆಯನ್ನೂ ಅವುಗಳ ಹಗ್ಗಗಳನ್ನೂ, ಅವುಗಳ ಸೇವೆಯ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.
27
ಗೇರ್ಷೋನ್ಯರು ಆರೋನ್, ಅವನ ಪುತ್ರರ ನಿರ್ದೇಶನದ ಮೇರೆಗೆ ಅವರ ಹೊರೆಹೊರುವದನ್ನು ಮತ್ತು ಇತರ ಕೆಲಸಗಳನ್ನು ಮಾಡಲಿ. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.
28
ಗೇರ್ಷೋನ್ಯರ ಕುಟುಂಬದವರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯೂ ಇದೆ. ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವುದು ಅವರಿಗೆ ಅಪ್ಪಣೆಯಾಗಿದೆ.
29
“ಮೆರಾರೀಯ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ಎಣಿಸಬೇಕು.
30
ಮೂವತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷಗಳವರೆಗೆ ದೇವದರ್ಶನದ ಗುಡಾರದ ಸೇವೆ ಮಾಡುವುದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.
31
ದೇವದರ್ಶನದ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವುದಕ್ಕೆ ನೀಡಿದ ಅಪ್ಪಣೆಯು ಏನೆಂದರೆ: ಗುಡಾರದ ಹಲಿಗೆಗಳೂ ಅದರ ಅಡ್ಡ ದಂಡ ಅದರ ಕಂಬಗಳ ಆಧಾರಗಳೂ ಅದರ ಗದ್ದಿಗೇ ಕಲ್ಲುಗಳೂ
32
ಸುತ್ತಲಿರುವ ಅಂಗಳದ ಕಂಬಗಳ ಆಧಾರಗಳೂ ಅದರ ಗದ್ದಿಗೇ ಕಲ್ಲುಗಳೂ ಅದರ ಗೂಟಗಳೂ ಅವುಗಳ ಹಗ್ಗಗಳೂ ಅವುಗಳ ಎಲ್ಲಾ ಸಲಕರಣೆಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವುದಕ್ಕೆ ಕೊಟ್ಟ ಅಪ್ಪಣೆಯ ಸಲಕರಣೆಗಳನ್ನು ನೀವು ಹೆಸರೆಸರಾಗಿ ಎಣಿಸಬೇಕು.
33
ಮೆರಾರೀಯ ಪುತ್ರರ ಕುಟುಂಬಗಳ ಸೇವೆಯೂ, ದೇವದರ್ಶನದ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೆ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.”
34
ಮೋಶೆಯೂ, ಆರೋನನೂ, ಸಭೆಯ ಮುಖ್ಯಸ್ಥನೂ, ಕೊಹಾತ್ಯರ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ
35
ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರೂ ಎಂದರೆ ಐವತ್ತು ವರ್ಷಗಳವರೆಗೆ ದೇವದರ್ಶನದ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿದರು.
36
ಕುಲಗಳ ಪ್ರಕಾರ ಅವರಲ್ಲಿ ಎಣಿಕೆಯಾದವರು 2,750 ಮಂದಿಯಾಗಿದ್ದರು.
37
ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ, ಆರೋನನೂ ಎಣಿಸಿದ ಕೊಹಾತ್ಯರ ಕುಟುಂಬಗಳಲ್ಲಿ ಎಣಿಕೆಯಾದವರೂ, ದೇವದರ್ಶನ ಗುಡಾರದಲ್ಲಿ ಸೇವೆ ಮಾಡುವವರೆಲ್ಲರೂ ಇವರೇ.
38
ಗೇರ್ಷೋನನ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಕೆಯಾದರು.
39
ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ, ಎಂದರೆ ಐವತ್ತು ವರ್ಷಗಳವರೆಗೆ ದೇವದರ್ಶನ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ,
40
ಎಂದರೆ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ, ಅವರಲ್ಲಿ ಎಣಿಕೆಯಾದವರು 2,630 ಮಂದಿಯಾಗಿದ್ದರು.
41
ಯೆಹೋವ ದೇವರ ಅಪ್ಪಣೆಯ ಹಾಗೆ ಮೋಶೆಯೂ, ಆರೋನನೂ ಎಣಿಸಿದ ಗೇರ್ಷೋನನ ಪುತ್ರರ ಕುಟುಂಬಗಳಲ್ಲಿ ಎಣಿಕೆಯಾದವರೂ, ದೇವದರ್ಶನದ ಗುಡಾರದಲ್ಲಿ ಸೇವೆ ಮಾಡುವವರೆಲ್ಲರೂ ಇವರೇ.
42
ಮೆರಾರೀಯ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಕೆಯಾದವರು.
43
ಮೂವತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷಗಳವರೆಗೆ ದೇವದರ್ಶನ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು
44
ಎಂದರೆ, ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಕೆಯಾದವರು 3,200 ಮಂದಿಯಾಗಿದ್ದರು.
45
ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಪುತ್ರರ ಕುಲಗಳಲ್ಲಿ ಎಣಿಕೆಯಾದವರು ಇವರೇ.
46
ಮೋಶೆಯೂ, ಆರೋನನೂ, ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಲಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸಿದರು.
47
ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕಾಗಿಯೂ, ಹೊರುವುದಕ್ಕಾಗಿಯೂ ಬರುವವರೆಲ್ಲರೂ ಎಂದರೆ, ಅವರಲ್ಲಿ ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಎಂದರೆ, ಐವತ್ತು ವರ್ಷಗಳವರೆಗೆ
48
ಎಣಿಕೆಯಾದವರು 8,580 ಮಂದಿ.
49
ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ, ಹೊರುವುದಕ್ಕಾಗಿಯೂ ಜವಾಬ್ದಾರಿಕೆ ಕೊಡಲಾಯಿತು. ಹೀಗೆ ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಎಣಿಸಲಾಯಿತು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 5 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36