bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Revelation 21
Revelation 21
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 22 →
1
ತರುವಾಯ, “ನೂತನ ಆಕಾಶವನ್ನೂ ನೂತನ ಭೂಮಿಯನ್ನೂ” ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಇಲ್ಲದಂತಾದವು. ಇನ್ನು ಸಮುದ್ರವು ಇರಲಿಲ್ಲ.
2
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.
3
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.
4
‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.
5
ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!” ಎಂದರು ಮತ್ತು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!” ಎಂದು ಹೇಳಿದನು.
6
ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.
7
ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು.
8
ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.
9
ಅಂತಿಮ ಏಳು ಉಪದ್ರವಗಳಿಂದ ತುಂಬಿದ ಏಳು ಬೋಗುಣಿಗಳನ್ನು ಹಿಡಿದಿದ್ದ ಏಳುಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ, ಯಜ್ಞದ ಕುರಿಮರಿಯಾದವವರಿಗೆ ಹೆಂಡತಿಯಾಗತಕ್ಕ ವಧುವನ್ನು ನಿನಗೆ ತೋರಿಸುವೆನು!” ಎಂದು ಹೇಳಿ,
10
ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಪರಿಶುದ್ಧ ಪಟ್ಟಣವಾದ ಯೆರೂಸಲೇಮು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದು ಬರುವುದನ್ನು ನನಗೆ ತೋರಿಸಿದನು.
11
ಅದು ದೇವರ ಮಹಿಮೆಯಿಂದ ಕೂಡಿತ್ತು. ಪಟ್ಟಣದ ಪ್ರಕಾಶವು ಸೂರ್ಯಕಾಂತದಂತೆ ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಅದು ಸ್ವಚ್ಛವಾದ ಸ್ಪಟಿಕದಂತೆ ಕಾಣಿಸಿತು.
12
ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ ಪುತ್ರರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.
13
ಪೂರ್ವದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.
14
ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು.
15
ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.
16
ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು, ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು 2,200 ಕಿಲೋಮೀಟರ್ ಆಗಿತ್ತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿದ್ದವು.
17
ಅವನು ಅದರ ಗೋಡೆಯನ್ನೂ ಅಳತೆ ಮಾಡಿದನು. ಅದು 65 ಮೀಟರ್ ಆಗಿತ್ತು. ಮನುಷ್ಯನ ಅಳತೆಯಂತೆ ದೇವದೂತನು ಅಳೆದನು.
18
ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲಾಗಿತ್ತು. ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
19
ಪಟ್ಟಣದ ಗೋಡೆಯು ಮತ್ತು ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತ, ಎರಡನೆಯದು ವೈಡೂರ್ಯ, ಮೂರನೆಯದು ಪಚ್ಚೆ, ನಾಲ್ಕನೆಯದು ಪದ್ಮರಾಗ,
20
ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಬತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲ ಸ್ಪಟಿಕ.
21
ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದಾಗಿತ್ತು. ಪಟ್ಟಣದ ಮಹಾ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
22
ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ.
23
ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.
24
ಅದರ ಬೆಳಕಿನಲ್ಲಿ ಎಲ್ಲಾ ಜನರು ನಡೆಯುವರು. ಭೂರಾಜರು ತಮ್ಮ ಮಹಿಮೆಯನ್ನು ಅಲ್ಲಿಗೆ ತರುವರು.
25
ಅದರ ಹೆಬ್ಬಾಗಿಲುಗಳು ಒಂದು ದಿನವೂ ಮುಚ್ಚುವುದೇ ಇಲ್ಲ. ಇರುಳಂತೂ ಇರುವುದೇ ಇಲ್ಲ.
26
ಜನಾಂಗಗಳ ಮಹಿಮೆಯೂ ಗೌರವವೂ ಅಲ್ಲಿಗೆ ತರಲಾಗುವವು.
27
ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 22 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22