bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Zechariah 5
Zechariah 5
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 6 →
1
ಆಗ ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಲು, ಹಾರುವ ಸುರುಳಿ ಕಾಣಿಸಿತು.
2
ಆಗ ದೂತನು ನನಗೆ, “ಏನು ನೋಡುತ್ತೀ?” ಎಂದಾಗ, ನಾನು, “ಹಾರುವ ಸುರುಳಿಯನ್ನು ನೋಡುತ್ತಿದ್ದೇನೆ. ಅದರ ಉದ್ದವು ಒಂಬತ್ತು ಮೀಟರ್, ಅದರ ಅಗಲವು ನಾಲ್ಕುವರೆ ಮೀಟರ್ ಇದೆ,” ಎಂದೆನು.
3
ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು.
4
‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ”
5
ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ನಿನ್ನ ಕಣ್ಣೆತ್ತಿ ಹೊರಡುವಂಥದ್ದು ಏನೆಂದು ನೋಡು,” ಎಂದು ನನಗೆ ಹೇಳಿದನು.
6
ನಾನು, “ಇದೇನು?” ಎಂದು ಕೇಳಿದಾಗ, ಅವನು, “ಇದು ಅಳೆಯುವ ಬುಟ್ಟಿ,” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು,” ಎಂದನು.
7
ಸೀಸದ ಮುಚ್ಚಳವು ತೆಗೆಯಲಾಯಿತು. ಆ ಬುಟ್ಟಿಯಲ್ಲಿ ಒಬ್ಬ ಸ್ತ್ರೀ ಕುಳಿತುಕೊಂಡಿದ್ದಳು.
8
ಆತನು, “ಇದು ದುಷ್ಟತ್ವವು,” ಎಂದು ಹೇಳಿ ಆಕೆಯನ್ನು ಬುಟ್ಟಿಯಲ್ಲಿ ಪುನಃ ಅದುಮಿ, ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.
9
ಆಗ ನಾನು ಕಣ್ಣೆತ್ತಿ ನೋಡಿದಾಗ, ಇಬ್ಬರು ಸ್ತ್ರೀಯರು ಇದ್ದರು. ಅವರ ರೆಕ್ಕೆಗಳು ರಭಸವಾಗಿದ್ದವು. ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು. ಅವರು ಆಕಾಶ ಮತ್ತು ಭೂಮಿಯ ನಡುವೆ ಬುಟ್ಟಿಯನ್ನು ಎತ್ತಿದರು.
10
ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದೆನು.
11
ದೂತನು ನನಗೆ, “ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವುದಕ್ಕೆ ತೆಗೆದುಕೊಂಡು ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿತವಾಗಿ, ತನ್ನ ಸ್ಥಾನದಲ್ಲಿ ಇರಿಸಲಾಗುವುದು,” ಎಂದನು.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 6 →
All chapters:
1
2
3
4
5
6
7
8
9
10
11
12
13
14