Jeremiah 35:31
Kannada BSI Bible 2016
ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು.ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
Compare Jeremiah 35:31 across all translations →