bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI Bible 2016
/
Micah 3
Micah 3
Kannada BSI Bible 2016
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 4 →
1
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
2
ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,
3
ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
4
ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
5
ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
6
ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
7
ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
8
ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
9
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
10
ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
11
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
12
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 4 →
All chapters:
1
2
3
4
5
6
7