bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI Bible 2016
/
Zechariah 2
Zechariah 2
Kannada BSI Bible 2016
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 3 →
1
ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
2
ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.
3
ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.
4
ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
5
ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
6
ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
7
ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
8
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
9
ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
10
ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
11
ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
12
ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
13
ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 3 →
All chapters:
1
2
3
4
5
6
7
8
9
10
11
12
13
14