bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Chronicles 10
1 Chronicles 10
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 11 →
1
ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡಿದರು. ಇಸ್ರಾಯೇಲ್ಯರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.
2
ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.
3
ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು.
4
ಆದದರಿಂದ ಸೌಲನು ಭೀತನಾಗಿ ತನ್ನ ಆಯುಧವಾಹಕನಿಗೆ - ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿಯನ್ನುಂಟು ಮಾಡಾರು ಎಂದು ಹೇಳಲು ಅವನು ಹೆದರಿ ಒಲ್ಲೆನು ಅಂದನು. ಆದದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.
5
ಸೌಲನು ಸತ್ತದ್ದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು.
6
ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಅವನ ಮನೆಯವರೆಲ್ಲರೂ ಅದೇ ದಿವಸದಲ್ಲಿ ಸತ್ತರು.
7
ಇಸ್ರಾಯೇಲ್ ಭಟರು ಸೋತರು, ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರೆಲ್ಲರೂ ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು; ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.
8
ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲುಕೊಳ್ಳುವದಕ್ಕೆ ಬಂದಾಗ ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವದನ್ನು ಕಂಡು
9
ಸೌಲನಿಗಿರುವದನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ ತಮ್ಮ ದೇವತೆಗಳಿಗೂ ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
10
ಅವನ ಆಯುಧಗಳನ್ನು ತಮ್ಮ ದೇವಸ್ಥಾನದಲ್ಲಿಟ್ಟರು; ಅವನ ಬುರುಡೆಯನ್ನು ದಾಗೋನನ ಗುಡಿಯಲ್ಲಿ ಜಡಿದರು.
11
ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನವು ಯಾಬೇಷ್ ಗಿಲ್ಯಾದಿನವರಿಗೆ ಮುಟ್ಟಿದಾಗ
12
ಅವರಲ್ಲಿದ್ದ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು ಅವರ ಎಲುಬುಗಳನ್ನು ಅಲ್ಲಿದ್ದ ಏಲಾವೃಕ್ಷದ ಕೆಳಗೆ ಸಮಾಧಿಮಾಡಿ ಏಳು ದಿವಸ ಉಪವಾಸಮಾಡಿದರು.
13
ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು.
14
ಯೆಹೋವನು ಅವನನ್ನು ಕೊಲ್ಲಿಸಿ ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29