bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Chronicles 14
1 Chronicles 14
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 15 →
1
ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವದಕ್ಕೋಸ್ಕರ ದೂತರನ್ನೂ ದೇವದಾರು ಮರಗಳನ್ನೂ ಶಿಲ್ಪಿಗಳನ್ನೂ ಬಡಗಿಯವರನ್ನೂ ಅವನ ಬಳಿಗೆ ಕಳುಹಿಸಿದನು.
2
ಇದರಿಂದ ದಾವೀದನು ದೇವಪ್ರಜೆಗಳಾದ ಇಸ್ರಾಯೇಲ್ಯರ ನಿವಿುತ್ತವಾಗಿ ತನ್ನ ರಾಜ್ಯವು ಉನ್ನತಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲ್ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.
3
ದಾವೀದನು ಯೆರೂಸಲೇವಿುನಲ್ಲಿ ಸಹ ಕೆಲವು ಮಂದಿ ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳನ್ನು ಪಡೆದನು.
4
ಅಲ್ಲಿ ಅವನಿಗೆ ಹುಟ್ಟಿದ ಗಂಡುಮಕ್ಕಳ ಹೆಸರುಗಳು - ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,
5
ಇಬ್ಹಾರ್, ಎಲೀಷೂವ, ಎಲ್ಪೆಲೆಟ್, ನೋಗಹ, ನೆಫೆಗ್,
7
ಯಾಫೀಯ, ಎಲೀಷಾಮ, ಬೇಲ್ಯಾದ, ಎಲೀಫೆಲೆಟ್.
8
ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವದಕ್ಕೆ ಹೊರಟರು; ದಾವೀದನು ಇದನ್ನು ಕೇಳಿ ತಾನೂ ಅವರೆದುರಿಗೆ ಹೋದನು.
9
ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿನಲ್ಲಿ ಸುಲಿಗೆ ಮಾಡುತ್ತಿದ್ದದರಿಂದ ದಾವೀದನು ದೇವರಾದ ಯೆಹೋವನನ್ನು -
10
ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟನು.
11
ಅಷ್ಟರಲ್ಲಿ ಬಾಳ್ಪೆರಾಚೀವಿುಗೆ ಬಂದ ಅವರನ್ನು ದಾವೀದನು ಸೋಲಿಸಿ - ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆಂದು ಹೇಳಿದ್ದರಿಂದ ಆ ಯುದ್ಧಸ್ಥಳಕ್ಕೆ ಬಾಳ್ಪೆರಾಚೀಮೆಂದು ಹೆಸರಾಯಿತು.
12
ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ದೇವರುಗಳನ್ನು ದಾವೀದನು ಸುಡಿಸಿಬಿಟ್ಟನು.
13
ಫಿಲಿಷ್ಟಿಯರು ಇನ್ನೊಮ್ಮೆ ಬಂದು ಅದೇ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು.
14
ದಾವೀದನು ತಿರಿಗಿ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ಅವರನ್ನು ಬೆನ್ನಟ್ಟಬೇಡ; ಅವರ ಎದುರಿನಿಂದ ತಿರುಗಿಕೊಂಡು ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.
15
ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು ಅಂದನು.
16
ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು; ಇಸ್ರಾಯೇಲ್ಯರು ಫಿಲಿಷ್ಟಿಯ ಸೈನ್ಯವನ್ನು ಗಿಬ್ಯೋನಿನಿಂದ ಗೆಜೆರಿನವರೆಗೂ ಸಂಹರಿಸುತ್ತಾ ಹೋದರು.
17
ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರುವಂತೆ ಮಾಡಿದನು.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29