bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Chronicles 16
1 Chronicles 16
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 17 →
1
ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿಸಿದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
2
ಆ ಯಜ್ಞಗಳೂ ಹೋಮಗಳೂ ಸಮರ್ಪಣೆಯಾದನಂತರ ದಾವೀದನು ಇಸ್ರಾಯೇಲ್ಯರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿ
3
ಅವರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ದ್ರಾಕ್ಷೇಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.
4
ಯೆಹೋವನ ಮಂಜೂಷದ ಮುಂದೆ ದೇವಾರಾಧನೆ ನಡಿಸುವದಕ್ಕೋಸ್ಕರ ದಾವೀದನು ಕೆಲವು ಮಂದಿ ಲೇವಿಯರನ್ನು ನೇವಿುಸಿದನು. ಇಸ್ರಾಯೇಲ್ದೇವರಾದ ಯೆಹೋವನನ್ನು ಸ್ತುತಿಸುವದೂ ಹಾಡಿ ಹರಸುವದೂ ಅವರ ಕರ್ತವ್ಯ.
5
ಅವರಲ್ಲಿ ಆಸಾಫನು ಪ್ರಧಾನನು; ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ ಕಿನ್ನರಿ ಮೊದಲಾದ ವಾದ್ಯಗಳನ್ನು ಬಾರಿಸುವವರು; ಆಸಾಫನು ತಾಳಹೊಡೆಯುವನು.
6
ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ನಿಬಂಧನಮಂಜೂಷದ ಮುಂದೆ ನಿತ್ಯವೂ ತುತೂರಿಗಳನ್ನು ಊದುವವರು.
7
ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಯೆಹೋವ ಕೀರ್ತನೆಗೋಸ್ಕರ ಆ ದಿನದಲ್ಲೇ ಮೊದಲು ನೇವಿುಸಿದನು [ಅವರು ಹಾಡಿದ್ದೇನಂದರೆ] -
8
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.
9
ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
10
ಆತನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.
11
ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
12
ಆತನ ಸೇವಕನಾದ ಇಸ್ರಾಯೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,
13
ಆತನ ಅದ್ಭುತಕೃತ್ಯ ಮಹತ್ಕಾರ್ಯ ನ್ಯಾಯನಿರ್ಣಯಗಳನ್ನು ನೆನಪುಮಾಡಿಕೊಳ್ಳಿರಿ.
14
ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
15
ಆತನು ಸಾವಿರ ತಲೆಗಳವರೆಗಿರುವವರಿಗೂ ಮಾಡಿದ ವಾಗ್ದಾನ, ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.
16
ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.
17
ಅದು ರಾಜಶಾಸನದಂತಿರುವದೆಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು.
18
ನೀವು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್ ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ
19
ಆತನು - ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿರುವದು ಎಂದು ಹೇಳಿದನು.
20
ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ
21
ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ -
22
ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು.
23
ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ; ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.
24
ಜನಾಂಗಗಳಲ್ಲಿ ಆತನ ಘನತೆಯನ್ನೂ ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.
25
ಯೆಹೋವನು ದೊಡ್ಡವನೂ ಬಹಳವಾಗಿ ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವತೆಗಳಲ್ಲಿ ಆತನೇ ಭಯಂಕರನು.
26
ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.
27
ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲಸಂತೋಷಗಳೂ ಇರುತ್ತವೆ.
28
ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.
29
ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.
30
ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ನಡುಗಿರಿ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ.
31
ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
32
ಭೂನಿವಾಸಿಗಳಿಗೆ ನ್ಯಾಯತೀರಿಸುವದಕ್ಕೆ ಬರುವ ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವದೆಲ್ಲವೂ ಘೋಷಿಸಲಿ.
33
ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿಮಾಡಲಿ.
34
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವದು.
35
ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ಬಿಡಿಸಿ ಕೂಡಿಸು; ಆಗ ನಿನ್ನ ಪರಿಶುದ್ಧನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.
36
ಇಸ್ರಾಯೇಲ್ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ ಎಂಬದೇ. ಅವರು ಹೀಗೆ ಹಾಡಿದ್ದಕ್ಕೆ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.
37
ದಾವೀದನು ಯೆಹೋವನ ನಿಬಂಧನ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುತ್ತಿರುವದಕ್ಕೋಸ್ಕರ ಆಸಾಫನನ್ನೂ ಅವನ ಸಹೋದರರನ್ನೂ
38
ಬಾಗಲುಕಾಯುವದಕ್ಕೋಸ್ಕರ ಯೆದುತೂನನ ಮಗನಾದ ಓಬೇದೆದೋಮ್ ಹೋಸ ಇವರನ್ನೂ ಇವರ ಅರುವತ್ತೆಂಟು ಮಂದಿ ಸಹೋದರರನ್ನೂ ಅಲ್ಲೇ ಇರಿಸಿದನು.
39
ಯಾಜಕನಾದ ಚಾದೋಕನನ್ನೂ ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.
40
ಅವರು ಪ್ರತಿದಿನವೂ ಪ್ರಾತಃಕಾಲಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲ್ಯರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.
41
ಅವರ ಬಳಿಯಲ್ಲಿ ಯೆಹೋವನನ್ನು ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವದಕ್ಕೆ ಹೇಮಾನ್ ಯೆದುತೂನರೂ ಹೆಸರು ಹೆಸರಾಗಿ ನೇವಿುಸಲ್ಪಟ್ಟ ಬೇರೆ ಜನರೂ ಇದ್ದರು.
42
ಹೇಮಾನ್ಯೆದುತೂನರ ಹತ್ತಿರ ವಾದ್ಯಗಾರರಿಗೋಸ್ಕರ ತುತೂರಿ ತಾಳ ಮೊದಲಾದ ದೇವಕೀರ್ತನಾಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳೂ ದ್ವಾರಪಾಲಕರಾಗಿ ನೇವಿುಸಲ್ಪಟ್ಟರು.
43
ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನೂ ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೋಸ್ಕರ ಹೋದನು.
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 17 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29