bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Chronicles 26
1 Chronicles 26
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 27 →
1
ದ್ವಾರಪಾಲಕವರ್ಗಗಳ ವಿಷಯ ಕೋರಹೀಯನಾದ ಮೆಷೆಲೆಮ್ಯ ಎಂಬವನು ಕೊರೇಯನ ಮಗನೂ ಆಸಾಫನ ಮೊಮ್ಮಗನೂ.
2
ಮೆಷೆಲೆಮ್ಯನ ಮಕ್ಕಳಲ್ಲಿ ಜೆಕರ್ಯನು ಚೊಚ್ಚಲನು; ಎದೀಯಯೇಲನು ಮರಚಲನು; ಜೆಬದ್ಯನು ಮೂರನೆಯವನು; ಯೆತ್ನಿಯೇಲನು ನಾಲ್ಕನೆಯವನು;
3
ಏಲಾಮನು ಐದನೆಯವನು; ಯೆಹೋಹಾನಾನನು ಆರನೆಯವನು; ಎಲೈಹೋಯೇನೈ ಏಳನೆಯವನು.
4
ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು; ಯೆಹೋಜಾಬಾದನು ಮರಚಲನು; ಯೋವಾಹನು ಮೂರನೆಯವನು; ಸಾಕಾರನು ನಾಲ್ಕನೆಯವನು;
5
ನೆತನೇಲನು ಐದನೆಯವನು; ಅಮ್ಮೀಯೇಲನು ಆರನೆಯವನು; ಇಸ್ಸಾಕಾರನು ಏಳನೆಯವನು; ಪೆಯುಲ್ಲೆತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನಷ್ಟೆ.
6
ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.
7
ಅವರು ಯಾರಂದರೆ - ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್ ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬ ಇವರ ಸಹೋದರರೂ. ಇವರೆಲ್ಲರೂ ಓಬೇದೆದೋಮನ ಸಂತಾನದವರು.
8
ಸಮರ್ಥರೂ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ ಇವರ ಮಕ್ಕಳೂ ಸಹೋದರರೂ ಕೂಡಿ ಅರುವತ್ತೆರಡು ಮಂದಿ.
9
ಮೆಷೆಲೆಮ್ಯನ ಮಕ್ಕಳೂ ಸಹೋದರರೂ ಹದಿನೆಂಟು ಮಂದಿ; ಇವರೂ ಸಮರ್ಥರು.
10
ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬವನು ಪ್ರಧಾನನಾಗಿದ್ದನು. ಇವನು ಚೊಚ್ಚಲನಲ್ಲದಿದ್ದರೂ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇವಿುಸಿದನು.
11
ಹಿಲ್ಕೀಯನು ಎರಡನೆಯವನು; ಟೆಬಲ್ಯನು ಮೂರನೆಯವನು; ಜೆಕರ್ಯನು ನಾಲ್ಕನೆಯವನು; ಹೋಸನ ಮಕ್ಕಳೂ ಸಹೋದರರೂ ಒಟ್ಟಿಗೆ ಹದಿಮೂರು ಮಂದಿ.
12
ಈ ದ್ವಾರಪಾಲಕವರ್ಗಗಳ ಪ್ರಧಾನ ಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು.
13
ಅವರು ಕನಿಷ್ಠ ಕುಟುಂಬವೆಂದೂ ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.
14
ಮೂಡಣ ದಿಕ್ಕಿನ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಪಂಚಾಯತನಾಗಿರುವ ಅವನ ಮಗನಾದ ಜೆಕರ್ಯನ ಹೆಸರಿಗೆ ಬಡಗಣ ದಿಕ್ಕಿನ ಚೀಟು ಬಿದ್ದಿತು.
15
ಓಬೇದೆದೋಮನಿಗೆ ತೆಂಕಣ ಬಾಗಲೂ ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ ಶುಪ್ಪೀಮ್,
16
ಹೋಸ ಎಂಬವರಿಗೆ ಪಡುವಣ ಬಾಗಲೂ ಅದರ ಸಮೀಪದಲ್ಲಿರುವ ಶೆಲ್ಲೆಕೆತೆಂಬ ಬಾಗಲೂ ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಲು [ಪಟ್ಟಣದಿಂದ ದೇವಾಲಯಕ್ಕೆ] ಏರಿಹೋಗುವ ದಾರಿಯಲ್ಲಿದೆ.
17
ಲೇವಿಯರಲ್ಲಿ ಪ್ರತಿದಿನವೂ ಮೂಡಣ ಬಾಗಲನ್ನು ಆರು ಮಂದಿ, ಪಡುವಣ ಬಾಗಲನ್ನು ನಾಲ್ಕು ಮಂದಿ, ತೆಂಕಣ ಬಾಗಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಲುಗಳನ್ನು ಇಬ್ಬಿಬ್ಬರು,
18
ಪರ್ಬರೆಂಬ ಕಟ್ಟಡವಿರುವ ಪಡುವಣ ದಿಕ್ಕಿನ ದಾರಿಯ ಬಾಗಲನ್ನು ನಾಲ್ಕು ಮಂದಿ, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.
19
ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕ ವರ್ಗಗಳು ಇವೇ.
20
ಮೇಲೆ ಕಂಡವರ ಕುಲಬಂಧುಗಳೂ ದೇವಾಲಯದ ಭಂಡಾರ, ಪರಿಶುದ್ಧವಸ್ತುಗಳ ಭಂಡಾರ ಇವುಗಳನ್ನು ಕಾಯುವವರೂ ಆದ ಲೇವಿಯರ ಪಟ್ಟಿ -
21
ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ - ಯೆಹೀಯೇಲೀ;
22
ಯೆಹೀಯೇಲ್ಯರಾದ ಜೇತಾಮನೂ ಯೋವೇಲನೆಂಬ ಅವನ ತಮ್ಮನೂ ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.
23
ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಇವರ ಸಂತಾನದವರಲ್ಲಿ
24
ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನು.
25
ಎಲೀಯೆಜೆರನ ಮಗ ರೆಹಬ್ಯನಿಗೆ ಹುಟ್ಟಿದ ಯೆಶಾಯನ ಮರಿಮಗನೂ ಯೋರಾಮನ ಮೊಮ್ಮಗನೂ ಜಿಕ್ರೀಯ ಮಗನೂ ಆಗಿರುವ
26
ಶೆಲೋಮೋತನೂ ಅವನ ಸಹೋದರರೂ ಪ್ರತಿಷ್ಠಿತವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರಬಂಧುಗಳು.
27
ಅರಸನಾದ ದಾವೀದನೂ ಗೋತ್ರಪ್ರಧಾನರೂ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಸೇನಾನಾಯಕರೂ ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು.
28
ಇವರಲ್ಲದೆ ದರ್ಶಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದ್ದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.
29
ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳೂ ಲೌಕಿಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲ್ಯರ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಆಗಿದ್ದರು.
30
ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮಪ್ರಾಂತಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವಾಕಾರ್ಯಗಳನ್ನೂ ರಾಜಕೀಯ ಕಾರ್ಯಗಳನ್ನೂ ನಡಿಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಮಂದಿ.
31
ದಾವೀದನ ಆಳಿಕೆಯ ನಾಲ್ವತ್ತನೆಯ ವರುಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಲ್ಲಿ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು;
32
ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳು ನೂರು ಮಂದಿ. ಅರಸನಾದ ದಾವೀದನು ರೂಬೇನ್ ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕಕಾರ್ಯಗಳಲ್ಲಿಯೂ ರಾಜಕೀಯಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇವಿುಸಿದನು.
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 27 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29