bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Corinthians 8
1 Corinthians 8
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 9 →
1
ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.
2
ಇಂಥಿಂಥದನ್ನು ತಿಳುಕೊಂಡಿದ್ದೇನೆಂದು ನೆನಸಿದವನು ತಾನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳುಕೊಳ್ಳಲಿಲ್ಲ.
3
ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳುಕೊಳ್ಳುತ್ತಾನೆ.
4
ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.
5
ಅನೇಕರನ್ನು ದೇವರುಗಳೆಂದೂ ಕರ್ತರೆಂದೂ ಪೂಜಿಸುವದುಂಟು ನಿಜವೇ; ಆಕಾಶದಲ್ಲಿಯಾಗಲಿ ಭೂವಿುಯ ಮೇಲೆಯಾಗಲಿ ದೇವರುಗಳೆನಿಸಿಕೊಳ್ಳುವವರಿದ್ದಾರೆ,
6
ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲಕಾರಣನು; ನಾವು ಆತನಿಗಾಗಿ ಉಂಟಾದೆವು. ಮತ್ತು ನಮಗೆ ಒಬ್ಬನೇ ಕರ್ತ; ಆತನು ಯೇಸು ಕ್ರಿಸ್ತನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು, ನಾವೂ ಆತನ ಮುಖಾಂತರ ಉಂಟಾದೆವು.
7
ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.
8
ಆದರೆ ಆಹಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸಲಾಗದು. ತಿನ್ನದಿದ್ದರೆ ನಮಗೆ ಕಡಿಮೆಯಿಲ್ಲ, ತಿಂದರೆ ನಮಗೆ ಹೆಚ್ಚಿಲ್ಲ.
9
ಆದರೂ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲವಿಲ್ಲದವರಿಗೆ ಒಂದು ವೇಳೆ ವಿಘ್ನವಾದೀತು, ಎಚ್ಚರಿಕೆಯಾಗಿರಿ.
10
ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲವಾದ ಮನಸ್ಸುಳ್ಳ ಸಹೋದರನು ಕಂಡರೆ ಅವನೂ ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೆ ಧೈರ್ಯತಂದುಕೊಂಡಾನಲ್ಲವೇ.
11
ಹೀಗೆ ಆ ಬಲಹೀನನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ. ಅವನು ಸಹೋದರನಲ್ಲವೇ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ.
12
ಹೀಗಿರಲಾಗಿ ಸಹೋದರರಿಗೆ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ಪಾಪಮಾಡುವವರಾಗುತ್ತೀರಿ.
13
ಆದದರಿಂದ ಭೋಜನಪದಾರ್ಥದಿಂದ ನನ್ನ ಸಹೋದರನಿಗೆ ವಿಘ್ನವಾಗುವದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವದಿಲ್ಲ; ನಾನು ನನ್ನ ಸಹೋದರನಿಗೆ ವಿಘ್ನವನ್ನುಂಟುಮಾಡಬಾರದಲ್ಲಾ.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 9 →
All chapters:
1
2
3
4
5
6
7
8
9
10
11
12
13
14
15
16