bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 John 1
1 John 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 2 →
1
ನಾವು ನಿಮಗೆ ಪ್ರಸಿದ್ಧಿಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನಸ್ಸಿಟ್ಟು ನೋಡಿ ಕೈಯಿಂದ ಮುಟ್ಟಿದ್ದೇವೆ.
2
ಆ ಜೀವವು ಪ್ರತ್ಯಕ್ಷವಾಯಿತು; ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ.
3
ನಾವು ಕಂಡು ಕೇಳಿದ್ದು ನಿಮಗೂ ಗೊತ್ತಾಗಿ ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದು.
4
ನಮ್ಮುಭಯತರ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಈ ಮಾತುಗಳನ್ನು ಬರೆಯುತ್ತೇವೆ.
5
ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
6
ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
7
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.
8
ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಮತ್ತು ಸತ್ಯವೆಂಬದು ನಮ್ಮಲ್ಲಿಲ್ಲ.
9
ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು.
10
ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ ಮತ್ತು ಆತನ ವಾಕ್ಯವು ನಮ್ಮಲ್ಲಿ ಇಲ್ಲ.
Jump to:
Chapter 1
Chapter 2
Chapter 3
Chapter 4
Chapter 5
Chapter 2 →
All chapters:
1
2
3
4
5