bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Kings 1
1 Kings 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 2 →
1
ಅರಸನಾದ ದಾವೀದನು ದಿನ ತುಂಬಿದ ಮುದುಕನಾಗಿದ್ದನು. ಸೇವಕರು ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿದ್ದಿಲ್ಲ.
2
ಆದದರಿಂದ ಅವನ ಸೇವಕರು ಅವನಿಗೆ - ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕತಕ್ಕದ್ದು; ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ಅವನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಮಗ್ಗುಲಲ್ಲಿ ಮಲಗುವದಾದರೆ ಅವನಿಗೆ ಬೆಚ್ಚಗಾಗುವದು ಎಂದು ಹೇಳಿ
3
ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಲ್ಲಿ ಅತಿಸುಂದರಿಯಾದ ಹುಡುಗಿಯನ್ನು ಹುಡುಕುವದಕ್ಕೆ ಹೋಗಿ ಶೂನೇಮ್ ಊರಿನ ಅಬೀಷಗ್ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರಕೊಂಡು ಬಂದರು.
4
ಬಹು ಸುಂದರಿಯಾದ ಈಕೆಯು ಅರಸನನ್ನು ಪರಾಂಬರಿಸುವ ಸೇವಕಿಯಾದಳು. ಅರಸನು ಈಕೆಯನ್ನು ಸಂಗವಿುಸಲಿಲ್ಲ.
5
ಹಗ್ಗೀತಳ ಮಗನಾದ ಅದೋನೀಯನು ನಾನೇ ಅರಸನಾಗತಕ್ಕವನು ಎಂಬದಾಗಿ ಉಬ್ಬಿಕೊಂಡು ತನಗೋಸ್ಕರ ರಥರಥಾಶ್ವಗಳನ್ನೂ ಮುಂದೆ ಓಡುವದಕ್ಕಾಗಿ ಐವತ್ತು ಮಂದಿ ಸಿಪಾಯಿಗಳನ್ನೂ ಇಟ್ಟುಕೊಂಡನು.
6
ಅವನ ತಂದೆಯು - ನೀನು ಹಾಗೆ ಹೀಗೆ ಮಾಡಿದ್ದೇಕೆ ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿದ್ದು ಇರಲಿಲ್ಲ. ಅವನು ಬಹುಸುಂದರನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನು.
7
ಅವನು ಚೆರೂಯಳ ಮಗನಾದ ಯೋವಾಬನನ್ನೂ ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನಿಗೆ ಸಹಾಯಕರಾದರು.
8
ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ಭಟರೂ ಅವನ ಪಕ್ಷದಲ್ಲಿರಲಿಲ್ಲ.
9
ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಪ್ರವಾದಿಯಾದ ನಾತಾನ್, ಬೆನಾಯ, ಯುದ್ಧಭಟರು, ತಮ್ಮನಾದ ಸೊಲೊಮೋನ್ ಇವರನ್ನು ಬಿಟ್ಟು
10
ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಉದ್ಯೋಗಸ್ಥರಾದ ಎಲ್ಲಾ ಯೆಹೂದ್ಯರನ್ನೂ ಔತಣಕ್ಕೆ ಕರಿಸಿದನು.
11
ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ - ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೆ ಅರಸನಾದನೆಂಬದನ್ನು ನೀನು ಕೇಳಿದಿಯಲ್ಲವೋ?
12
ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.
13
ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ - ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು; ಅವನೇ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು ಎಂದು ತನ್ನ ದಾಸಿಯಾದ ನನಗೆ ಪ್ರಮಾಣಮಾಡಿ ಹೇಳಿದನಲ್ಲಾ! ಹೀಗಿದ್ದ ಮೇಲೆ ಅದೋನೀಯನು ಆಳುವದೇಕೆ ಎಂದು ಹೇಳು.
14
ನೀನು ಅರಸನೊಡನೆ ಮಾತಾಡುತ್ತಿರುವಾಗ ನಾನೂ ಬಂದು ನಿನ್ನ ಮಾತನ್ನು ದೃಢಪಡಿಸುವೆನು ಅಂದನು.
15
ಅರಸನು ಬಹು ವೃದ್ಧನಾಗಿದ್ದದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು.
16
ಬತ್ಷೆಬೆಯು ಅಲ್ಲಿಗೆ ಹೋಗಿ ಅರಸನಿಗೆ ಬೊಗ್ಗಿ ನಮಸ್ಕರಿಸಿದಳು. ಅರಸನು - ನಿನಗೇನು ಬೇಕು ಎಂದು ಆಕೆಯನ್ನು ಕೇಳಿದನು.
17
ಆಗ ಆಕೆಯು - ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತನ್ನ ದಾಸಿಯಾದ ನನಗೆ - ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಬೇಕು; ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು ಎಂಬದಾಗಿ ಹೇಳಿದನಲ್ಲಾ!
18
ಆದರೆ ಈಗ ಅದೋನೀಯನು ನನ್ನ ಒಡೆಯನೂ ಅರಸನೂ ಆದ ನಿನಗೆ ತಿಳಿಯದೆ
19
ರಾಜನಾಗಿ ಹೋರಿಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೇನಾಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.
20
ನನ್ನ ಒಡೆಯನೂ ಅರಸನೂ ಆದ ನಿನ್ನ ತರುವಾಯ ಸಿಂಹಾಸನದ ಮೇಲೆ ಕೂತುಕೊಳ್ಳತಕ್ಕವರಾರೆಂಬದನ್ನು ನೀನೇ ಗೊತ್ತುಮಾಡಬೇಕೆಂದು ಇಸ್ರಾಯೇಲ್ಯರೆಲ್ಲರೂ ಕಾದುಕೊಂಡಿರುತ್ತಾರೆ.
21
ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು.
22
ಆಕೆಯು ಹೀಗೆ ಅರಸನ ಸಂಗಡ ಮಾತಾಡುತ್ತಿರುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು.
23
ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿ -
24
ನನ್ನ ಒಡೆಯನೂ ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವದಕ್ಕೂ ನಿನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.
25
ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ.
26
ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.
27
ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕೂತುಕೊಳ್ಳತಕ್ಕವರಾರೆಂಬದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ ಎಂದು ಹೇಳಿದನು.
28
ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಾಗ ಅರಸನು ಆಕೆಗೆ -
29
ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,
30
ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಿ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು ಅಂದನು.
31
ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲ ಬಾಳಲಿ ಎಂದಳು.
32
ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ - ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನು ಕರೆಯಿರಿ ಎಂದು ಆಜ್ಞಾಪಿಸಿದನು;
33
ಅವರು ಅರಸನ ಸನ್ನಿಧಿಗೆ ಬರಲು ಅರಸನು ಅವರಿಗೆ - ನೀವು ನನ್ನ ಸೇವಕರನ್ನು ಕರಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.
34
ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಅಭಿಷೇಕಿಸಲಿ; ಅನಂತರ ಕೊಂಬನ್ನೂದಿರಿ; ಎಲ್ಲರೂ ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಲಿ.
35
ಆಮೇಲೆ ನೀವು ಅವನ ಹಿಂದೆ ಬನ್ನಿರಿ; ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕೂತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಾಯೇಲ್ಯರ ಮತ್ತು ಯೆಹೂದ್ಯರ ಮೇಲೆ ಅವನನ್ನೇ ಪ್ರಭುವನ್ನಾಗಿ ನೇವಿುಸಿದ್ದೇನೆ ಅಂದನು.
36
ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ - ಹಾಗಾಗಲಿ; ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.
37
ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ ಅರಸನೂ ಆದ ನಿನ್ನ ಕಾಲದಲ್ಲಿದ್ದದ್ದಕ್ಕಿಂತ ಅಭಿವೃದ್ಧಿಮಾಡಲಿ ಎಂದು ನುಡಿದನು.
38
ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ ಗೀಹೋನಿಗೆ ಕರಕೊಂಡು ಹೋದರು.
39
ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿರುವ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದಿ ಎಲ್ಲಾ ಜನರು - ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.
40
ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ ಬಹುಸಂತೋಷದಿಂದ ಆರ್ಭಟಿಸುತ್ತಾ ತಿರಿಗಿ ಬಂದರು. ಅವರ ಕೂಗಿನಿಂದ ಭೂವಿುಯು ಸೀಳಿಹೋಗುತ್ತದೋ ಎಂಬಂತೆ ಆಯಿತು.
41
ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ತೀರಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ - ಪಟ್ಟಣದಲ್ಲಿ ಇಂಥ ಗದ್ದಲವೇಕೆ ಎಂದು ವಿಚಾರಿಸುವಾಗಲೇ
42
ಯಾಜಕನಾದ ಎಬ್ಯಾತಾರನ ಮಗ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ - ಬಾ, ನೀನು ಯೋಗ್ಯಪುರುಷನೂ ಶುಭವರ್ತಮಾನತರುವವನೂ ಆಗಿರುತ್ತೀ ಅಂದನು.
43
ಯೋನಾತಾನನು ಅವನಿಗೆ - ಶುಭವಾರ್ತೆಯೆಲ್ಲಿ! ನಮ್ಮೊಡೆಯನೂ ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
44
ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ಕೆರೇತ್ಯ ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರ ಕತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.
45
ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕಮಾಡಿದರು. ಅಲ್ಲಿಂದ ಅವರು ಮಹಾಸಂತೋಷದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ.
46
ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕೂತುಕೊಂಡಿದ್ದಾನೆ.
47
ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ ಆರಸನೂ ಆದ ದಾವೀದನ ಮುಂದೆ ಬಂದು - ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ ಎಂದು ಅವನನ್ನು ಹರಸಿದ್ದಾರೆ; ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು -
48
ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಎಂದು ಹೇಳಿದ್ದಾನೆ ಅಂದನು.
49
ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮತಮ್ಮ ಮನೆಗಳಿಗೆ ಹೊರಟುಹೋದರು.
50
ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು.
51
ದೂತರು ಬಂದು ಸೊಲೊಮೋನನಿಗೆ - ಅದೋನೀಯನು ನಿನಗೆ ಹೆದರಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದು - ಅರಸನಾದ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವದಿಲ್ಲವೆಂಬದಾಗಿ ಈ ಹೊತ್ತು ನನಗೆ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತಾನೆ ಎಂಬದನ್ನು ತಿಳಿಸಿದಾಗ
52
ಅವನು - ಅದೋನೀಯನು ಸತ್ಪುರುಷನಾಗಿ ನಡೆಯುವದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡುವದಿಲ್ಲ; ಅವನಲ್ಲಿ ಕೆಟ್ಟತನವು ಕಂಡುಬರುವದಾದರೆ ಅವನು ಸಾಯುವನು ಎಂದು ಹೇಳಿ
53
ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ತರಿಸಿದನು. ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಮನೆಗೆ ಹೋಗ ಅಪ್ಪಣೆಕೊಟ್ಟನು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22