bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Kings 10
1 Kings 10
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 11 →
1
ಯೆಹೋವನಾಮ ಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬದ ರಾಣಿಯು ಕೇಳಿ ಅವನನ್ನು ಒಗಟುಗಳಿಂದ ಪರೀಕ್ಷಿಸುವದಕ್ಕೆ ಬಂದಳು.
2
ಆಕೆಯು ಸುಗಂಧದ್ರವ್ಯ, ಅಪರಿವಿುತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಯೆರೂಸಲೇವಿುಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
3
ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಾದ ಅವನಿಗೆ ತಿಳಿಯದಂಥದು ಅವುಗಳಲ್ಲಿ ಒಂದೂ ಇರಲಿಲ್ಲವಾದದರಿಂದ ಎಲ್ಲವುಗಳಿಗೂ ಉತ್ತರ ಕೊಟ್ಟನು.
4
ಶೆಬದ ರಾಣಿಯು ಸೊಲೊಮೋನನ ಎಲ್ಲಾ ಜ್ಞಾನ, ಅವನು ಕಟ್ಟಿಸಿದ ಅರಮನೆ,
5
ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಅರಸನಿಗೆ -
6
ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
7
ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನ ವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.
8
ನಿನ್ನ ಪ್ರಜೆಗಳೂ ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.
9
ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಆತನು ಇಸ್ರಾಯೇಲ್ಯರನ್ನು ಸದಾ ಪ್ರೀತಿಸುವವನಾಗಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.
10
ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ ಅಪರಿವಿುತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವು ದೇಶಕ್ಕೆ ತಿರಿಗಿ ಬರಲೇ ಇಲ್ಲ.
11
ಹೀರಾಮನ ಹಡಗುಗಳು ಓಫೀರ್ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.
12
ಅರಸನು ಸುಗಂಧದ ಮರದಿಂದ ದೇವಾಲಯ, ಅರಮನೆ ಇವುಗಳಿಗೆ ಕಟಕಟೆಗಳನ್ನೂ ಗಾಯಕರಿಗೋಸ್ಕರ ಕಿನ್ನರಿಗಳನ್ನೂ ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನವರೆಗೂ ಬರಲಿಲ್ಲ, ಮತ್ತು ಕಾಣಲಿಲ್ಲ.
13
ಅರಸನಾದ ಸೊಲೊಮೋನನು ಶೆಬದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.
14
ಸೊಲೊಮೋನನಿಗೆ ದೇಶಾಂತರ ವ್ಯಾಪಾರಿಗಳೂ ವರ್ತಕರೂ ಅರಬಿಯ ಅರಸರೂ ಪ್ರದೇಶಾಧಿಪತಿಗಳೂ ತೆರುತ್ತಿದ್ದ ಬಂಗಾರದ ಹೊರತಾಗಿ
15
ಪ್ರತಿವರುಷ ಆರುನೂರರುವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.
16
ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲೆ ಬಂಗಾರ ಹಿಡಿಯಿತು.
17
ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲೆ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.
18
ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು;
19
ಅದಕ್ಕೆ ಆರು ಮೆಟ್ಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.
20
ಆರು ಮೆಟ್ಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು; ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
21
ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲವಾದದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.
22
ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.
23
ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ವಿುಗಿಲಾಗಿದ್ದನು.
24
ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.
25
ಅವರೆಲ್ಲರೂ ಅವನಿಗೆ ವರುಷ ವರುಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂದದ್ರವ್ಯ, ಕುದುರೆ, ಹೇಸರಕತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
26
ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇವಿುನಲ್ಲಿ ತನ್ನ ಬಳಿಯಲ್ಲಿಯೂ ಉಳಿದವುಗಳನ್ನು ರಥಗಳಿಗೋಸ್ಕರ ನೇವಿುಸಿದ ಪಟ್ಟಣಗಳಲ್ಲಿಯೂ ಇರಿಸಿದನು.
27
ಅವನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಯು ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು.
28
ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.
29
ಐಗುಪ್ತದೇಶದಿಂದ ರಥಗಳನ್ನೂ ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಯಿತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಸಿಕ್ಕುತ್ತಿದ್ದವು.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22