bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Kings 13
1 Kings 13
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 14 →
1
ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪ ಸುಡುವದಕ್ಕಾಗಿ ವೇದಿಯ ಹತ್ತಿರ ನಿಂತುಕೊಳ್ಳಲು
2
ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ವೇದಿಯನ್ನು ಕುರಿತು - ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬೊಬ್ಬನು ಹುಟ್ಟುವನು; ಅವನು ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ ಅಂದನು.
3
ಇದಲ್ಲದೆ ಅವನು - ನನ್ನ ಮಾತು ಯೆಹೋವನದೆಂಬದಕ್ಕೆ ವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದು ಹೋಗುವದೇ ಗುರುತಾಗಿರುವದು ಎಂದು ಹೇಳಿದನು.
4
ಬೇತೇಲಿನ ವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ - ಅವನನ್ನು ಹಿಡಿಯಿರಿ ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು.
5
ಅವನು ಅದನ್ನು ಹಿಂದೆಗೆಯಲಾರದವನಾದನು. ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು; ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.
6
ಅರಸನು ಆ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ಪ್ರಸನ್ನನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂದೆಗೆಯುವದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು ಎಂದು ಹೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.
7
ಆಗ ಅರಸನು ಅವನಿಗೆ - ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಬಲಹೊಂದು; ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ ಅನ್ನಲು
8
ದೇವರ ಮನುಷ್ಯನು ಅರಸನಿಗೆ - ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ ನಾನು ನಿನ್ನ ಸಂಗಡ ಬರುವದಿಲ್ಲ; ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲ.
9
ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಹಿಂದಿರುಗಿಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂದೂ ನನಗೆ ಯೆಹೋವನ ಅಪ್ಪಣೆಯಾಗಿದೆ ಎಂದು ಹೇಳಿ
10
ಬಂದ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟನು.
11
ಬೇತೇಲಿನಲ್ಲಿ ಒಬ್ಬ ಮುದುಕನಾದ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿವಸ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಅಂದದ್ದನ್ನೂ ತಂದೆಗೆ ತಿಳಿಸಿದರು.
12
ತಂದೆಯು ಅವರನ್ನು - ಅವನು ಯಾವ ದಾರಿಯಿಂದ ಹೋದನು ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು.
13
ಆಗ ಅವನು ತನ್ನ ಮಕ್ಕಳಿಗೆ - ಕತ್ತೆಗೆ ತಡಿಹಾಕಿರಿ ಎಂದು ಆಜ್ಞಾಪಿಸಲು ಅವರು ಹಾಕಿದರು. ಅವನು ಕತ್ತೆಯ ಮೇಲೆ ಕೂತುಕೊಂಡು ದೇವರ ಮನುಷ್ಯನ ಹಿಂದೆ ಹೋಗಿ
14
ಏಲಾವೃಕ್ಷದ ಕೆಳಗೆ ಕೂತಿರುವ ಅವನನ್ನು ಕಂಡು - ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ ಎಂದು ಕೇಳಿದನು;
15
ಅವನು ಹೌದೆಂದನು. ಆಗ ಆ ಮುದುಕನು ಅವನಿಗೆ - ನೀನು ನನ್ನ ಮನೆಗೆ ಬಂದು ಊಟಮಾಡು ಎಂದು ಹೇಳಿದನು.
16
ಅದಕ್ಕೆ ಅವನು - ನಾನು ನಿನ್ನ ಸಂಗಡ ಬರಕೂಡದು; ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಕೂಡದು.
17
ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದೂ ನನಗೆ ಯೆಹೋವನ ಅಪ್ಪಣೆಯಾಗಿದೆ ಎಂದು ಉತ್ತರಕೊಟ್ಟನು.
18
ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು.
19
ದೇವರ ಮನುಷ್ಯನು ಹಿಂದಿರುಗಿಕೊಂಡು ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.
20
ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.
21
ಅವನು ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ
22
ಅನ್ನಪಾನಗಳನ್ನು ತೆಗೆದುಕೊಳ್ಳುವದಕ್ಕೋಸ್ಕರ ಹಿಂದಿರುಗಿ ಬಂದದರಿಂದ ನಿನ್ನ ಶವವು ನಿನ್ನ ಕುಟುಂಬ ಶ್ಮಶಾನಭೂವಿುಯನ್ನು ಸೇರುವದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ ಅಂದನು.
23
ಅನ್ನಪಾನಗಳನ್ನು ತೆಗೆದುಕೊಂಡನಂತರ ಅವನು ತಾನು ಕರತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.
24
ದೇವರ ಮನುಷ್ಯನು ಸ್ವಲ್ಪ ದೂರ ಹೋದನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.
25
ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವದನ್ನೂ ಸಿಂಹವು ಅದರ ಬಳಿಯಲ್ಲಿ ನಿಂತಿರುವದನ್ನೂ ಕಂಡು ಮುದುಕನಾದ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.
26
ಅವನನ್ನು ಹಿಂದಕ್ಕೆ ಕರಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ - ಆ ಶವವು ದೇವರ ಮನುಷ್ಯನದೇ ಆಗಿರಬೇಕು; ಅವನು ಯೆಹೋವನ ಆಜ್ಞೆಗೆ ಅವಿಧೇಯನಾದದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು ಎಂದು ಹೇಳಿ
27
ಕತ್ತೆಗೆ ತಡಿಹಾಕಬೇಕೆಂದು ಮಕ್ಕಳಿಗೆ ಆಜ್ಞಾಪಿಸಿದನು; ಅವರು ಹಾಕಿದರು.
28
ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.
29
ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಳಿ ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ
30
ತನ್ನ ಊರಿಗೆ ತೆಗೆದುಕೊಂಡು ಬಂದು ತನ್ನ ಶ್ಮಶಾನಭೂವಿುಯಲ್ಲಿ ಅದನ್ನು ಸಮಾಧಿ ಮಾಡಿದನು. ಅವರು - ಅಯ್ಯೋ, ನನ್ನ ಸಹೋದರನೇ, ಎಂದು ಗೋಳಾಡಿದರು.
31
ಅನಂತರ ಅವನು ತನ್ನ ಮಕ್ಕಳಿಗೆ - ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳಿರುವಲ್ಲೇ ಇಡಿರಿ.
32
ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರೋಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರೋಧವಾಗಿಯೂ ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು ಅಂದನು.
33
ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ತಿರಿಗಿ ತಿರಿಗಿ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.
34
ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 14 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22