bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Kings 15
1 Kings 15
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 16 →
1
ನೆಬಾಟನ ಮಗನಾದ ಯಾರೊಬ್ಬಾಮನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಅಬೀಯಾಮನು ಯೆಹೂದದ ಅರಸನಾಗಿ
2
ಯೆರೂಸಲೇವಿುನಲ್ಲಿ ಮೂರು ವರುಷ ಆಳಿದನು; ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.
3
ತನ್ನ ತಂದೆಯು ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಇವನು ಸೇವಿಸಲಿಲ್ಲ.
4
ಆದರೂ ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಯನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರನಾಗಿ ನಡೆದ ದಾವೀದನ ನಿವಿುತ್ತವಾಗಿ ಯೆಹೋವನು ಯೆರೂಸಲೇವಿುನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.
5
ಯೆರೂಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದನು.
6
(ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.)
7
ಅಬೀಯಾಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
8
ಅಬೀಯಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು.
9
ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಆಳಿಕೆಯ ಇಪ್ಪತ್ತನೆಯ ವರುಷದಲ್ಲಿ ಆಸನು ಯೆಹೂದದ ಅರಸನಾದನು.
10
ಇವನು ಯೆರೂಸಲೇವಿುನಲ್ಲಿ ನಾಲ್ವತ್ತೊಂದು ವರುಷ ಆಳಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಇವನ ತಾಯಿ.
11
ಇವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
12
ದೇವದಾಸ ದೇವದಾಸಿಯರನ್ನು ದೇಶದಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.
13
ಇವನ ತಾಯಿಯಾದ ಮಾಕಳು ಅಶೇರದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿದು ಕಿದ್ರೋನ್ಹಳ್ಳದ ಹತ್ತಿರ ಸುಡಿಸಿದನು.
14
ಇವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಯೆಹೋವನಿಗೆ ನಡೆದುಕೊಂಡನು.
15
ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು.
16
ಇವನಿಗೂ ಇಸ್ರಾಯೇಲ್ಯರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.
17
ಇಸ್ರಾಯೇಲ್ಯರ ಅರಸನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.
18
ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿ ಅವನಿಗೆ -
19
ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಿರುತ್ತದಲ್ಲಾ; ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲ್ಯರ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು ಎಂದು ಹೇಳಿಸಿದನು.
20
ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲ್ಯರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ ಇವುಗಳನ್ನು ಹಾಳುಮಾಡಿದರು.
21
ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮ ಕೋಟೆಯನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲೇ ವಾಸಿಸಿದನು.
22
ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರಿಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ವಿುಚ್ಬೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
23
ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಪಟ್ಟಣಗಳನ್ನು ಕಟ್ಟಿಸಿದ ಸಂಗತಿ ಇವುಗಳೂ ಅವನ ಇತರ ಕ್ರಿಯೆಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.
24
ಅವನು ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಷಾಫಾಟನು ಅರಸನಾದನು.
25
ಯೆಹೂದ್ಯರ ಅರಸನಾದ ಆಸನ ಆಳಿಕೆಯ ಎರಡನೆಯ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲ್ಯರ ಅರಸನಾಗಿ ಎರಡು ವರುಷ ಆಳಿದನು.
26
ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
27
ಇವನು ಇಸ್ರಾಯೇಲ್ಯರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರೋಧವಾಗಿ ಒಳಸಂಚು ಮಾಡಿ ಇವನನ್ನು ಕೊಂದನು.
28
ಬಾಷನು ಯೆಹೂದದ ಅರಸನಾದ ಆಸನ ಆಳಿಕೆಯ ಮೂರನೆಯ ವರುಷದಲ್ಲಿ ಇವನನ್ನು ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು;
29
ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
30
ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಾಯೇಲ್ದೇವರಾದ ಯೆಹೋವನನ್ನು ರೇಗಿಸಿದ್ದರಿಂದ ಹೀಗಾಯಿತು.
31
ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
32
ಆಸನಿಗೂ ಇಸ್ರಾಯೇಲ್ಯರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.
33
ಯೆಹೂದದ ಅರಸನಾದ ಆಸನ ಆಳಿಕೆಯ ಮೂರನೆಯ ವರುಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲ್ಯರ ಅರಸನಾಗಿ ತಿರ್ಚದಲ್ಲಿದ್ದುಕೊಂಡು ಇಪ್ಪತ್ತನಾಲ್ಕು ವರುಷ ಆಳಿದನು.
34
ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22