bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Kings 18
1 Kings 18
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 19 →
1
ಅನೇಕ ದಿವಸಗಳಾದನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರುಷದಲ್ಲಿ ಆತನು ಅವನಿಗೆ - ನೀನು ಹೋಗಿ ಅಹಾಬನನ್ನು ಕಾಣು; ನಾನು ದೇಶಕ್ಕೆ ಮಳೆ ಕೊಡುತ್ತೇನೆ ಅಂದನು.
2
ಎಲೀಯನು ಅಹಾಬನನ್ನು ನೋಡುವದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹುಘೋರವಾಗಿದ್ದದರಿಂದ
3
ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬವನನ್ನು ಕರೇಕಳುಹಿಸಿದನು.
4
(ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)
5
ಅಹಾಬನು ಅವನಿಗೆ - ನಾವು ದೇಶಸಂಚಾರಮಾಡುತ್ತಾ ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವವು; ಇಲ್ಲವಾದರೆ ಎಲ್ಲಾ ಸತ್ತುಹೋಗುವವು ಎಂದು ಹೇಳಿ
6
ಸಂಚಾರಕ್ಕಾಗಿ ದೇಶವನ್ನು ಎರಡು ಭಾಗಮಾಡಿ ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.
7
ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಫಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗನಮಸ್ಕಾರ ಮಾಡಿ - ನೀನು ನನ್ನ ಸ್ವಾವಿುಯಾದ ಎಲೀಯನೋ ಎಂದು ಕೇಳಲು ಅವನು -
8
ಹೌದು; ನೀನು ಹೋಗಿ ನಿನ್ನ ಒಡೆಯನಿಗೆ ಎಲೀಯನು ಬಂದಿದ್ದಾನೆಂದು ಹೇಳು ಅಂದನು.
9
ಅದಕ್ಕೆ ಓಬದ್ಯನು - ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವದೇಕೆ? ನಾನೇನು ಪಾಪಮಾಡಿದೆನು?
10
ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಅಟ್ಟಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವದಿಲ್ಲ. ಆ ಜನಾಂಗರಾಜ್ಯಗಳವರು ಎಲೀಯನು ನಮ್ಮಲ್ಲಿರುವದಿಲ್ಲವೆಂದು ಹೇಳಿದಾಗ ಅವನು ಅವರಿಂದ ಪ್ರಮಾಣಮಾಡಿಸಿದನು.
11
ಹೀಗಿದ್ದರೂ ನೀನು ನನಗೆ - ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು ಎಂಬದಾಗಿ ಆಜ್ಞಾಪಿಸುವದೇನು?
12
ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವದು. ನಾನು ಹೋಗಿ ಅಹಾಬನಿಗೆ ಹೇಳುವಲ್ಲಿ ನೀನು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ.
13
ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾವಿುಯಾದ ನಿನಗೆ ತಿಳಿಸಲ್ಪಡಲಿಲ್ಲವೋ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
14
ಹೀಗಿದ್ದರೂ ನೀನು ನನಗೆ - ಎಲೀಯನು ಬಂದಿದ್ದಾನೆಂಬದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತೀ; ಅವನು ನನ್ನನ್ನು ಕೊಲ್ಲುವನಲ್ಲವೋ ಎಂದು ಉತ್ತರಕೊಟ್ಟನು.
15
ಆಗ ಎಲೀಯನು ಅವನಿಗೆ - ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಈಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು ಅಂದನು.
16
ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋಗಿ
17
ಅವನನ್ನು ಕಂಡ ಕೂಡಲೆ - ಇಸ್ರಾಯೇಲ್ಯರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ ಅಂದನು.
18
ಅದಕ್ಕೆ ಅವನು - ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.
19
ನೀನು ಈಗ ಎಲ್ಲಾ ಇಸ್ರಾಯೇಲ್ಯರನ್ನೂ ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನೂ ಅಶೇರದೇವತೆಯ ನಾನೂರು ಮಂದಿ ಪ್ರವಾದಿಗಳನ್ನೂ ಕರ್ಮೆಲ್ಬೆಟ್ಟಕ್ಕೆ ಕರಿಸು ಎಂದು ಹೇಳಿದನು.
20
ಅಹಾಬನು ಇಸ್ರಾಯೇಲ್ಯರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರಿಸಿದನು.
21
ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ - ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು
22
ಅವನು ತಿರಿಗಿ ಅವರಿಗೆ - ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಮಂದಿ ಇದ್ದಾರೆ.
23
ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ, ಅವುಗಳಲ್ಲೊಂದನ್ನು ಆರಿಸಿಕೊಂಡು ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು.
24
ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ ಅಂದನು. ಎಲ್ಲಾ ಜನರೂ - ಸರಿ, ನೀನು ಹೇಳಿದಂತೆಯೇ ಆಗಲಿ ಎಂದು ಉತ್ತರಕೊಟ್ಟರು.
25
ಆಗ ಅವನು ಬಾಳನ ಪ್ರವಾದಿಗಳಿಗೆ - ನೀವು ಹೆಚ್ಚು ಮಂದಿ ಇರುವದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು ಅಂದನು.
26
ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ - ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.
27
ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯಮಾಡಿ - ಗಟ್ಟಿಯಾಗಿ ಕೂಗಿರಿ; ಅವನು ದೇವರಾಗಿರುತ್ತಾನಲ್ಲಾ! ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು ಎಂದು ಹೇಳಿದನು.
28
ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯ ಮಾಡಿಕೊಂಡರು.
29
ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ, ಅವರನ್ನು ಲಕ್ಷಿಸಲಿಲ್ಲ.
30
ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿನ ಯೆಹೋವವೇದಿಯನ್ನು ತಿರಿಗಿ ಕಟ್ಟಿಸಿದನು.
31
ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು
32
ಯೆಹೋವನ ಹೆಸರಿಗೋಸ್ಕರ ಒಂದು ವೇದಿಯನ್ನು ಕಟ್ಟಿಸಿ ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ ಕಾಲುವೆಮಾಡಿಸಿದನು.
33
ಇದಲ್ಲದೆ ಕಟ್ಟಿಗೆಯನ್ನು ವೇದಿಯ ಮೇಲೆ ಕ್ರಮಪಡಿಸಿ ಹೋರಿಯನ್ನು ವಧಿಸಿ ತುಂಡುಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ - ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ ಎಂದು ಆಜ್ಞಾಪಿಸಿದನು.
34
ಅವರು ತೆಗೆದುಕೊಂಡು ಬರಲು ಇನ್ನೊಂದು ಸಾರಿ ತನ್ನಿರಿ ಎಂದು ಹೇಳಿದನು. ತಿರಿಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು.
35
ನೀರು ವೇದಿಯ ಸುತ್ತಲೂ ಹರಿಯಿತು; ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.
36
ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು - ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು.
37
ಕಿವಿಗೊಡು; ಯೆಹೋವನೇ, ಕಿವಿಗೊಡು; ಯೆಹೋವನಾದ ನೀನೊಬ್ಬನೇ ದೇವರೂ ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ಆಗಿರುತ್ತೀ ಎಂಬದನ್ನು ಇವರಿಗೆ ತಿಳಿಯಪಡಿಸು ಎಂದು ಪ್ರಾರ್ಥಿಸಿದನು.
38
ಕೂಡಲೆ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ ಕಟ್ಟಿಗೆಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.
39
ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು - ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು.
40
ಆಗ ಎಲೀಯನು ಅವರಿಗೆ - ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.
41
ಅನಂತರ ಅವನು ಅಹಾಬನಿಗೆ - ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ ಅಂದನು.
42
ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.
43
ಅವನು ತನ್ನ ಸೇವಕನಿಗೆ - ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು ಏನೂ ತೋರುವದಿಲ್ಲ ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.
44
ಏಳನೆಯ ಸಾರಿ ಸೇವಕನು - ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ - ನೀನು ಹೋಗಿ ಅಹಾಬನಿಗೆ - ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು ಎಂದು ಹೇಳು ಅಂದನು.
45
ತುಸುಹೊತ್ತಿನಲ್ಲಿಯೇ ಆಕಾಶವು ಮೋಡ ಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕೂತುಕೊಂಡು ಇಜ್ರೇಲಿಗೆ ಹೋದನು.
46
ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 19 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22