bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Kings 3
1 Kings 3
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 4 →
1
ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ ಯೆಹೋವನ ಆಲಯವನ್ನೂ ಯೆರೂಸಲೇವಿುನ ಸುತ್ತಣ ಗೋಡೆಯನ್ನೂ ಕಟ್ಟಿ ತೀರಿಸುವ ತನಕ ಆಕೆಯನ್ನು ದಾವೀದನ ನಗರದಲ್ಲಿ ಇರಿಸಿದನು.
2
ಆವರೆಗೂ ಯೆಹೋವನಾಮಕ್ಕೋಸ್ಕರ ಆಲಯವಿರಲಿಲ್ಲವಾದದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞಮಾಡುತ್ತಿದ್ದರು.
3
ಸೊಲೊಮೋನನು ಯೆಹೋವನನ್ನು ಪ್ರೀತಿಸಿ ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವರ್ಪಿಸುತ್ತಿದ್ದನು; ಅಲ್ಲಿಯೇ ಧೂಪಸುಡುತ್ತಿದ್ದನು.
4
ಅರಸನಾದ ಸೊಲೊಮೋನನು ಯಜ್ಞಮಾಡುವದಕ್ಕೋಸ್ಕರ ಪೂಜಾಸ್ಥಳಗಳಲ್ಲಿ ವಿಶೇಷವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದಾಗ
5
ದೇವರಾದ ಯೆಹೋವನು ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡು - ನಿನಗೆ ಯಾವ ವರ ಬೇಕು ಕೇಳಿಕೋ ಎಂದು ಹೇಳಲು ಸೊಲೊಮೋನನು -
6
ನಿನಗೆ ನಂಬಿಗಸ್ತನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾಕೃಪೆಯನ್ನು ತೋರಿಸಿದಿ; ಅವನ ಮೇಲೆ ಬಹಳವಾಗಿ ಕೃಪೆಮಾಡಿ ಈಗಿರುವಂತೆ ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಪೂರ್ತಿಗೊಳಿಸಿದಿ.
7
ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇವಿುಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು;
8
ವ್ಯವಹಾರಜ್ಞಾನವಿಲ್ಲದವನು, ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ.
9
ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.
10
ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು.
11
ಆತನು ಅವನಿಗೆ - ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲಿ, ಐಶ್ವರ್ಯವನ್ನಾಗಲಿ, ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯ ನಿರ್ಣಯಿಸುವದಕ್ಕೋಸ್ಕರ
12
ವಿವೇಕವನ್ನು ಬೇಡಿಕೊಂಡದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಮುಂಚೆ ಇರಲಿಲ್ಲ; ಮುಂದೆಯೂ ಇರುವದಿಲ್ಲ.
13
ಇದಲ್ಲದೆ ನೀನು ಕೇಳದಂಥದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ ಘನದಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವದಿಲ್ಲ.
14
ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು ಅಂದನು.
15
ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇವಿುಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿ ತನ್ನ ಎಲ್ಲಾ ಸೇವಕರಿಗೋಸ್ಕರ ಔತಣಮಾಡಿಸಿದನು.
16
ಅದೇ ಕಾಲದಲ್ಲಿ ಇಬ್ಬರು ಸೂಳೆಯರು ಅರಸನ ಸನ್ನಿಧಿಗೆ ಬಂದರು.
17
ಅವರಲ್ಲಿ ಒಬ್ಬಳು ಅರಸನಿಗೆ - ನನ್ನ ಒಡೆಯಾ, ಕೇಳು; ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸಿಸುತ್ತೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು.
18
ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು; ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ.
19
ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು.
20
ಮಧ್ಯರಾತ್ರಿಯಲ್ಲಿ ಇವಳೆದ್ದು ನಿನ್ನ ದಾಸಿಯಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಮಗ್ಗುಲಲ್ಲಿಟ್ಟುಕೊಂಡಳು. ಸತ್ತುಹೋದ ತನ್ನ ಮಗುವನ್ನು ನನ್ನ ಮಗ್ಗುಲಲ್ಲಿಟ್ಟಳು.
21
ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆ ಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ ಎಂದು ಹೇಳಿದಳು.
22
ಆಗ ಎರಡನೆಯವಳು - ಹಾಗಲ್ಲ, ಬದುಕಿರುವವನು ನನ್ನ ಮಗನು; ಸತ್ತಿರುವವನು ನಿನ್ನ ಮಗನು ಎಂದು ನುಡಿದಳು. ಮೊದಲನೆಯವಳು ತಿರಿಗಿ - ಅಲ್ಲ, ಸತ್ತಿರುವವನು ನಿನ್ನ ಮಗನು; ಬದುಕಿರುವವನು ನನ್ನ ಮಗನು ಅಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು.
23
ಆಗ ಅರಸನು - ಜೀವದಿಂದಿರುವ ಕೂಸು ನನ್ನದು, ಸತ್ತಿರುವದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ; ಇನ್ನೊಬ್ಬಳು - ಅಲ್ಲ, ಸತ್ತಿರುವದು ನಿನ್ನದು, ಜೀವದಿಂದಿರುವದು ನನ್ನದು ಅನ್ನುತ್ತಾಳೆ.
24
ನನಗೊಂದು ಕತ್ತಿಯನ್ನು ತಂದುಕೊಡಿರಿ ಎಂದು ಸೇವಕರಿಗೆ ಹೇಳಿದನು.
25
ಅವರು ತರಲು ಅರಸನು ಅವರಿಗೆ - ಜೀವದಿಂದಿರುವ ಕೂಸನ್ನು ಕಡಿದು ಎರಡು ಭಾಗಮಾಡಿ ಅರ್ಧವನ್ನು ಇವಳಿಗೂ ಅರ್ಧವನ್ನು ಅವಳಿಗೂ ಕೊಡಿರಿ ಎಂದು ಅಪ್ಪಣೆಮಾಡಿದನು.
26
ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರುಳುಮರುಗಿ - ನನ್ನ ಒಡೆಯಾ, ಬೇಡ; ಬದುಕಿರುವ ಕೂಸನ್ನು ಅವಳಿಗೇ ಕೊಟ್ಟುಬಿಡು; ಅದನ್ನು ಕೊಲ್ಲಿಸಬೇಡ ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು - ಅದು ನನಗೂ ಬೇಡ, ನಿನಗೂ ಬೇಡ, ಕಡಿಯಲಿ ಎಂದು ಕೂಗಿದಳು.
27
ಕೂಡಲೆ ಅರಸನು - ಬದುಕಿರುವ ಕೂಸನ್ನು ಕೊಲ್ಲಬೇಡಿರಿ, ಆ ಸ್ತ್ರೀಗೆ ಕೊಡಿರಿ; ಅವಳೇ ಅದರ ತಾಯಿ ಎಂದು ಆಜ್ಞಾಪಿಸಿದನು.
28
ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 4 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22