bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Kings 7
1 Kings 7
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 8 →
1
ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು
2
ವರುಷಗಳಲ್ಲಿ ಕಟ್ಟಿಸಿ ತೀರಿಸಿದನು. ಅವನು ಕಟ್ಟಿಸಿದ ಲೇಬನೋನಿನ ತೋಪು ಎನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ, ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಆಧಾರವಾಗಿದ್ದವು.
3
ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಾಲ್ವತ್ತೈದು ಇದ್ದವು.
4
ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕು ಕಂಡಿಗಳಿದ್ದವು.
5
ಎಲ್ಲಾ ದ್ವಾರಗಳೂ ಬೆಳಕು ಕಂಡಿಗಳೂ ಚತುಷ್ಕೋಣಾಕಾರವುಳ್ಳವುಗಳು. ಮೂರು ಮೂರು ಸಾಲು ಬೆಳಕುಕಂಡಿಗಳು ಎದುರೆದುರಾಗಿದ್ದವು.
6
ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ; ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು; ಆ ಪಡಸಾಲೆಗೆ ಕಂಬಗಳೂ ಮೆಟ್ಲುಗಳೂ ಇದ್ದವು.
7
ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರಿಸುತ್ತಿದ್ದದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳು ನೆಲದಿಂದ ಮಾಳಿಗೆಯವರೆಗೆ ದೇವದಾರುವಿನ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು.
8
ನ್ಯಾಯಮಂದಿರದ ಹಿಂದಿನ ಪ್ರಾಕಾರಗಳಲ್ಲಿ ತನಗೋಸ್ಕರ ಅರಮನೆಯನ್ನೂ ತನ್ನ ಹೆಂಡತಿಯಾದ ಫರೋಹನ ಮಗಳಿಗೋಸ್ಕರ ಇನ್ನೊಂದು ಮನೆಯನ್ನೂ ಕಟ್ಟಿಸಿದನು. ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.
9
ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತುಗೋಡೆಯನ್ನೂ ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟಂಥ ಎರಡು ಮಗ್ಗಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿದರು.
10
ಅಸ್ತಿವಾರಕ್ಕೆ ಪ್ರಯೋಗಿಸಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಹತ್ತು ಮೊಳ ಉದ್ದವಾಗಿದ್ದವು.
11
ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ ದೇವದಾರಿನ ಮರವನ್ನೂ ಉಪಯೋಗಿಸಿದರು.
12
ಒಳಗಣ ಪ್ರಾಕಾರವೆನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರುವಿನ ಮರದ ಕಂಬಗಳೂ ಇದ್ದವು.
13
ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬವನನ್ನು ಕರಿಸಿದನು.
14
ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ತೂರ್ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು ಅವನ ಎಲ್ಲಾ ಕೆಲಸವನ್ನು ಮಾಡಿದನು.
15
ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು.
16
ಅವುಗಳ ಸುತ್ತಳತೆಯು ಹನ್ನೆರಡು ಮೊಳ. ಇದಲ್ಲದೆ ಅವನು ತಾಮ್ರವನ್ನು ಎರಕಹೊಯ್ದು ಕಂಬಗಳ ಮೇಲೆ ಇಡುವದಕ್ಕೋಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ
17
ಒಂದೊಂದಕ್ಕೆ ಏಳೇಳರಂತೆ ಕುಂಭದ ಮೇಲೆ ಹಾಕುವದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು;
18
ಇದಲ್ಲದೆ ಅವನು ತಾಮ್ರದ ದಾಳಿಂಬಹಣ್ಣುಗಳನ್ನು ಮಾಡಿ ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.
19
ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲಾಕಾರವುಳ್ಳದ್ದಾಗಿತ್ತು.
20
ಆ ಕುಂಭಗಳ ಮೇಲಿನ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು.
21
ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ ಎಡಗಡೆಯ ಕಂಬಕ್ಕೆ ಬೋವಜ್ ಎಂದೂ ಹೆಸರಿಟ್ಟನು.
22
ಅವನು ಕಂಬಗಳ ಮೇಲೆ ಕಮಲಾಲಂಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು.
23
ಅನಂತರ ಅವನು ಸಮುದ್ರವೆನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ.
24
ಅದನ್ನು ಎರಕಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕಹೊಯ್ದಿದ್ದನು.
25
ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರದಿಕ್ಕಿಗೂ ಮೂರು ಪಶ್ಚಿಮದಿಕ್ಕಿಗೂ ಮೂರು ದಕ್ಷಿಣದಿಕ್ಕಿಗೂ ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು; ಅವುಗಳ ಹಿಂಭಾಗವು ಒಳಗಡೆ ಇತ್ತು.
26
ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬತ್ ನೀರನ್ನು ಹಿಡಿಯುವದು.
27
ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.
28
ಅವುಗಳನ್ನು ಮಾಡಿದ ವಿಧಾನವು ಹೇಗಂದರೆ - ಅವುಗಳಲ್ಲಿ ನಿಲುವುಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.
29
ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ, ಕೆರೂಬಿ ಇವುಗಳ ಚಿತ್ರಗಳಿದ್ದವು; ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು; ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣಚಿತ್ರಗಳಿದ್ದವು.
30
ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕಹೊಯ್ದ ತಾಮ್ರದ ಹಿಡಿಗಳಿದ್ದವು; ಅವು ಪೀಠದ ಮೇಲಣ ಗಂಗಾಳವನ್ನು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣಚಿತ್ರಗಳಿದ್ದವು.
31
ಗಂಗಾಳವನ್ನು ಇಡುವದಕ್ಕೋಸ್ಕರ ಪೀಠದ ಮೇಲಿನ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚತುಷ್ಕೋಣದವುಗಳಾಗಿದ್ದವು.
32
ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ಇರಸೂ ಪೀಠವೂ ಅಖಂಡವಾಗಿದ್ದವು; ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು.
33
ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳೂ ಅವುಗಳಿಗೆ ಸಂಬಂಧಪಟ್ಟ ಇರಸೂ ತಾಮ್ರದವುಗಳು.
34
ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು.
35
ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು;
36
ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರ ಮೈಗೂ ಸ್ಥಳವಿದ್ದ ಪ್ರಕಾರ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣಚಿತ್ರಗಳನ್ನೂ ಮಾಡಿದನು.
37
ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವೂ ಅಳತೆಯೂ ಒಂದೇ.
38
ಇದಲ್ಲದೆ ಅವನು ನಾಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.
39
ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.
40
ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಮಾಡಿದ ಒಟ್ಟು ಸಾಮಾನುಗಳು ಯಾವವಂದರೆ -
41
ಎರಡು ಕಂಬಗಳು, ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವದಕ್ಕೋಸ್ಕರ ಎರಡು ಜಾಲರಿಗಳು,
42
ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,
43
ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು,
44
ಸಮುದ್ರವೆನಿಸಿಕೊಳ್ಳುವ ಪಾತ್ರೆಯು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಹಂಡೆ ಸಲಿಕೆ ಬೋಗುಣಿಗಳು ಇವೇ.
45
ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿದನು.
46
ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣುನೆಲದಲ್ಲಿ ಎರಕಹೊಯ್ಸಿದನು.
47
ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬದನ್ನು ಗೊತ್ತು ಮಾಡಲಾರದವನಾದನು.
48
ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ -
49
ಬಂಗಾರದ ಧೂಪವೇದಿಯು, ನೈವೇದ್ಯವಾದ ರೊಟ್ಟಿಗಳನ್ನಿಡುವದಕ್ಕಾಗಿ ಬಂಗಾರದ ಮೇಜು, ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ ಬಲಗಡೆಯಲ್ಲಿಯೂ ಐದೈದರಂತೆ ಇಡುವದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆತಂಡಸುಗಳು,
50
ಚೊಕ್ಕ ಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಗೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು ಇವೇ.
51
ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಮಾಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 8 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22