bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Kings 9
1 Kings 9
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 10 →
1
ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ತನಗೆ ಇಷ್ಟವಾದ ಬೇರೆ ಎಲ್ಲಾ ಮಂದಿರಗಳನ್ನೂ ಕಟ್ಟಿಸಿದನಂತರ
2
ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.
3
ಆತನು ಅವನಿಗೆ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.
4
ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವದಾದರೆ
5
ಇಸ್ರಾಯೇಲ್ಯರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು; ಇಸ್ರಾಯೇಲ್ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕೂತುಕೊಳ್ಳುವರು ಎಂಬದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
6
ಆದರೆ ನೀವಾಗಲಿ ನಿಮ್ಮ ಮಕ್ಕಳಾಗಲಿ ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ ಅವುಗಳಿಗೆ ಕೈ ಮುಗಿಯುವದಾದರೆ
7
ಇಸ್ರಾಯೇಲ್ಯರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಾಯೇಲ್ಯರು ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ ಆಸ್ಪದರಾಗುವರು.
8
ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ - ಅಬ್ಬಬ್ಬಾ, ಇದೇನು! ಯೆಹೋವನು ಈ ದೇಶವನ್ನೂ ಈ ಆಲಯವನ್ನೂ ಹೀಗೇಕೆ ಮಾಡಿದನು ಎಂದು ಕೇಳುವರು.
9
ಆಗ ಅವರಿಗೆ - ಈ ದೇಶದವರು ತಮ್ಮ ಪಿತೃಗಳನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ ಎಂಬ ಉತ್ತರವು ಸಿಕ್ಕುವದು ಅಂದನು.
10
ಅರಸನಾದ ಸೊಲೊಮೋನನು ಇಪ್ಪತ್ತು ವರುಷಗಳಲ್ಲಿ ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದ ನಂತರ
11
ತನಗೆ ಬೇಕಾದಷ್ಟು ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
12
ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನ ಮನಸ್ಸಿಗೆ ಬರಲಿಲ್ಲ.
13
ಆದದರಿಂದ ಅವನು ಸೊಲೊಮೋನನಿಗೆ - ಸಹೋದರನೇ, ನೀನು ನನಗೆ ಎಂಥ ಪಟ್ಟಣಗಳನ್ನು ಕೊಟ್ಟಿ ಎಂದು ಹೇಳಿ ಅವುಗಳಿಗೆ ಕಾಬೂಲ್ದೇಶವೆಂದು ಹೆಸರಿಟ್ಟನು.
14
ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ. ಹೀರಾಮನು ಸೊಲೊಮೋನನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು.
15
ಸೊಲೊಮೋನನ ಬಿಟ್ಟೀಕೆಲಸದವರು ಕಟ್ಟಿದವುಗಳು ಯಾವವಂದರೆ - ಯೆಹೋವನ ಆಲಯ, ಅರಮನೆ, ವಿುಲ್ಲೋಕೋಟೆ, ಯೆರೂಸಲೇವಿುನ ಪೌಳಿಗೋಡೆ, ಹಾಚೋರ್, ಮೆಗಿದ್ದೋ, ಗೆಜೆರ್ ಇವೇ.
16
ಐಗುಪ್ತದ ಅರಸನಾದ ಫರೋಹನು ಗೆಜೆರ್ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಳುವಳಿಯಾಗಿ ಕೊಟ್ಟಿದ್ದನು.
17
ಸೊಲೊಮೋನನು ಗೆಜೆರ್ಪಟ್ಟಣದ ಹೊರತಾಗಿ ಕೆಳಗಿನ ಬೇತ್ಹೋರೋನ್,
18
ಬಾಲಾತ್, ಅರಣ್ಯಪ್ರದೇಶದಲ್ಲಿರುವ ತಾಮಾರ್, ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು,
19
ಯುದ್ಧರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು, ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇವಿುನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.
20
ಇದಲ್ಲದೆ ಅವನು ಇಸ್ರಾಯೇಲ್ಯರಿಂದ ಸಂಹೃತರಾಗದೆ ಇಸ್ರಾಯೇಲ್ಯರಲ್ಲದವರೂ ಕಾನಾನ್ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ,
21
ಪೆರಿಜ್ಜೀಯ, ಹಿವ್ವೀಯ, ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟಿಹಿಡಿದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿರುತ್ತಾರೆ.
22
ಆದರೆ ಅವನು ಇಸ್ರಾಯೇಲ್ಯರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿಯೂ ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ ಸರದಾರರನ್ನಾಗಿಯೂ ರಥಾಶ್ವಬಲಗಳ ನಾಯಕರನ್ನಾಗಿಯೂ ನೇವಿುಸಿಕೊಂಡನು.
23
ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲ್ಯರನ್ನು ಅಧಿಕಾರಿಗಳನ್ನಾಗಿ ನೇವಿುಸಿದನು.
24
ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು;
25
ಅನಂತರ ಸೊಲೊಮೋನನು ವಿುಲ್ಲೋಕೋಟೆಯನ್ನು ಕಟ್ಟಿಸಿದನು. ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರುಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಸುಡುತ್ತಿದ್ದನು. ದೇವಾಲಯವನ್ನು ಕಟ್ಟಿಸಿ ತೀರಿಸಿದನು.
26
ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.
27
ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.
28
ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 10 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22