bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Peter 1
1 Peter 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 2 →
1
ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದರಿರುವಂಥ ಪ್ರವಾಸಿಗಳಾದ ದೇವಜನರಿಗೆ ಅಂದರೆ -
2
ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
3
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ
4
ನಮ್ಮನ್ನು ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಯನ್ನು ಎದುರುನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿರುವದು.
5
ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
6
ನೀವು ಸದ್ಯಕ್ಕೆ ಸ್ವಲ್ಪಕಾಲ ದೇವರ ಚಿತ್ತಾನುಸಾರ ನಾನಾ ಕಷ್ಟಗಳಲ್ಲಿದ್ದು ದುಃಖಿಸುವವರಾಗಿದ್ದರೂ ಆ ಪದವಿಯನ್ನು ಆಲೋಚಿಸಿ ಹರ್ಷಿಸುವವರಾಗಿದ್ದೀರಿ.
7
ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.
8
ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
10
ದೇವರು ನಿಮಗೆ ತೋರಿಸಿರುವ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
11
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು.
12
ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.
13
ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
14
ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆಯುವವರಾಗಿರದೆ
15
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.
16
ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು ಎಂದು ಬರೆದದೆಯಲ್ಲಾ.
17
ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.
18
ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ,
19
ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ.
20
ಆತನು ಜಗದುತ್ಪತ್ತಿಗೆ ಮೊದಲೇ ಗೊತ್ತು ಮಾಡಲ್ಪಟ್ಟು ಅಂತ್ಯಕಾಲದಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
21
ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.
22
ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.
23
ನೀವು ಪುನರ್ಜನ್ಮ ಹೊಂದಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ, ನಾಶವಾಗದ ಬೀಜದಿಂದಲೇ ಉಂಟಾದದ್ದು. ಅದು ದೇವರ ಸದಾಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
24
ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;
25
ಕರ್ತನ ಮಾತೋ ಸದಾಕಾಲವೂ ಇರುವದು ಎಂದು ಹೇಳಿದೆಯಷ್ಟೆ. ಆ ಮಾತು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
Jump to:
Chapter 1
Chapter 2
Chapter 3
Chapter 4
Chapter 5
Chapter 2 →
All chapters:
1
2
3
4
5