bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Samuel 1
1 Samuel 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 2 →
1
ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.
2
ಎಲ್ಕಾನನಿಗೆ ಹನ್ನಳು, ಪೆನಿನ್ನಳು ಎಂಬ ಇಬ್ಬರು ಹೆಂಡತಿಯರಿದ್ದರು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಇರಲಿಲ್ಲ.
3
ಅವನು ಪ್ರತಿವರುಷವೂ ಸೈನ್ಯಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯ ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.
4
ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣು ಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.
5
ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ ಯೆಹೋವನು ಆಕೆಗೆ ಮಕ್ಕಳನ್ನು ಕೊಡಲಿಲ್ಲವಾದದರಿಂದ ಆಕೆಗೆ ಒಂದು ಭಾಗವನ್ನು ಮಾತ್ರ ಕೊಡುತ್ತಿದ್ದನು.
6
ಇದಲ್ಲದೆ ಆಕೆಯ ಸವತಿಯು - ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.
7
ಪ್ರತಿವರ್ಷವೂ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಎಲ್ಕಾನನು ಹಾಗೆಯೇ ಮಾಡುತ್ತಿದ್ದದರಿಂದಲೂ ಪೆನಿನ್ನಳು ಆಕೆಯನ್ನು ರೇಗಿಸುತ್ತಿದ್ದದರಿಂದಲೂ ಹನ್ನಳು ಒಂದಾನೊಂದು ಸಾರಿ ಉಣ್ಣಲೊಲ್ಲದೆ ಅಳುತ್ತಾ ಇದ್ದಳು.
8
ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ - ಹನ್ನಾ, ಏಕೆ ಅಳುತ್ತೀ? ಉಣ್ಣದಿರುವದಕ್ಕೇನು ಕಾರಣ? ನೀನು ವ್ಯಸನಪಡುವದೇಕೆ? ನಾನು ನಿನಗೆ ಹತ್ತು ಮಂದಿ ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ ಅಂದನು.
9
ಆಗ ಅವರು ಶೀಲೋವಿನಲ್ಲಿ ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಹನ್ನಳು ಎದ್ದು ಯಾಜಕನಾದ ಏಲಿಯು ಯೆಹೋವನ ಮಂದಿರದ್ವಾರದ ನಿಲುವುಪಟ್ಟಿಗಳ ಬಳಿಯಲ್ಲಿ ಒಂದು ಪೀಠದ ಮೇಲೆ ಕೂತಿರುವಾಗ ಹೋಗಿ
10
ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು -
11
ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.
12
ಆಕೆಯು ಬಲು ಹೊತ್ತಿನವರೆಗೆ ಯೆಹೋವನ ಮುಂದೆ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು.
13
ಆಕೆಯು ಹೃದಯದಲ್ಲಿ ಪ್ರಾರ್ಥಿಸುತ್ತಿದ್ದದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸಲಿಲ್ಲ. ಆದದರಿಂದ ಈಕೆಯು ಮದ್ಯಪಾನಮಾಡಿದ್ದಾಳೆಂದು ಅವನು ನೆನಸಿ -
14
ನಿನ್ನ ಅಮಲು ಇನ್ನೂ ಇಳಿಯಲಿಲ್ಲವೋ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟುಹೋಗಲಿ ಅಂದನು.
15
ಅದಕ್ಕೆ ಹನ್ನಳು - ಸ್ವಾಮೀ, ಹಾಗಲ್ಲ; ನಾನು ಬಹುದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ಹೊಯ್ದಿದ್ದೇನೆ.
16
ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು ಎಂದು ಹೇಳಿದಳು.
17
ಆಗ ಏಲಿಯು ಆಕೆಗೆ - ಸಮಾಧಾನದಿಂದ ಹೋಗು; ಇಸ್ರಾಯೇಲ್ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ ಎನ್ನಲು ಹನ್ನಳು ಏಲಿಗೆ -
18
ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆಮೇಲೆ ಆಕೆಯ ಮೋರೆಯಲ್ಲಿ ದುಃಖವು ಕಾಣಲಿಲ್ಲ.
19
ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ
20
ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.
21
ಎಲ್ಕಾನನು ಕುಟುಂಬಸಹಿತವಾಗಿ ಎಂದಿನಂತೆ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸುವದಕ್ಕೂ ಹರಕೆಸಲ್ಲಿಸುವದಕ್ಕೂ ಹೋಗುವದಕ್ಕೆ ಸಿದ್ಧನಾಗಲು ಹನ್ನಳು -
22
ಮಗನು ಮೊಲೆಬಿಡುವವರೆಗೂ ನಾನು ಬರುವದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುವೆನು ಎಂದು ಹೇಳಿದಳು.
23
ಆಕೆಯ ಗಂಡನಾದ ಎಲ್ಕಾನನು ಆಕೆಗೆ - ನಿನಗೆ ಸರಿತೋರುವ ಪ್ರಕಾರ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.
24
ಅನಂತರ ಆಕೆಯು ಮೂರು ವರುಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರಸಹಿತವಾಗಿ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು; ಮಗನು ಇನ್ನೂ ಚಿಕ್ಕವನಾಗಿದ್ದನು.
25
ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ತಂದರು.
26
ಹನ್ನಳು ಏಲಿಗೆ - ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.
27
ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;
28
ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31