bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Samuel 14
1 Samuel 14
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 15 →
1
ಒಂದು ದಿವಸ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.
2
ಸೌಲನಾದರೋ ಗಿಬೆಯ ಪ್ರಾಂತದ ಅಂತ್ಯಭಾಗವಾಗಿರುವ ವಿುಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರೂ
3
ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಈ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿ ಮಗನೂ ಫೀನೆಹಾಸನ ಮೊಮ್ಮಗನೂ ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.
4
ಅವನು ಫಿಲಿಷ್ಟಿಯರ ಕಾವಲು ದಂಡಿಗೆ ವಿರೋಧವಾಗಿ ಹೊರಟ ಕಣಿವೆಯ ಮಾರ್ಗದ ಎರಡು ಕಡೆಗಳಲ್ಲಿ ಬೋಚೇಚ್, ಸೆನೆ ಎಂಬ ಎರಡು ಕೋಡುಗಲ್ಲುಗಳಿದ್ದವು.
5
ಉತ್ತರದಿಕ್ಕಿನದು ಎತ್ತರವಾಗಿ ವಿುಕ್ಮಾಷಿಗೂ ದಕ್ಷಿಣದಿಕ್ಕಿನದು ಗೆಬಕ್ಕೂ ಎದುರಾಗಿದ್ದವು.
6
ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು
7
ಆಯುಧಗಳನ್ನು ಹೊರುವವನು - ನಿನ್ನ ಮನಸ್ಸಿನಂತೆ ಮಾಡು; ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ ಅಂದನು.
8
ಆಗ ಯೋನಾತಾನನು ಅವನಿಗೆ - ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ.
9
ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿರಿ ಎಂದು ಅವರು ನಮಗೆ ಹೇಳಿದರೆ ಮೇಲೆ ಹತ್ತದೆ ಇದ್ದ ಸ್ಥಳದಲ್ಲೇ ಇರೋಣ.
10
ಅದರೆ ಅವರು - ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆಂಬದಕ್ಕೆ ಇದೇ ಗುರುತೆಂದು ತಿಳಿದು ಮೇಲೆ ಹೋಗೋಣ ಎಂದನು.
11
ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು - ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ ಎಂದು ತಮ್ಮೊಳಗೆ ಮಾತಾಡಿಕೊಂಡು
12
ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ - ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯತೋರಿಸಿಕೊಡುತ್ತೇವೆ ಅನ್ನಲು ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ ಎಂದು ಹೇಳಿದನು.
13
ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಕಾಲುಗಳಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು; ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ನಡೆದನು.
14
ಅವರು ಒಂದು ಜೋಡಿ ಎತ್ತು ಒಪ್ಪೊತ್ತಿನಲ್ಲಿ ಉಳುವಷ್ಟು ಭೂವಿುಯಲ್ಲೆ ಸುಮಾರು ಇಪ್ಪತ್ತು ಮಂದಿಯನ್ನು ವಧಿಸಿದರು.
15
ಇದರಿಂದ ಪಾಳೆಯದಲ್ಲಿದ್ದವರೂ ಕಾವಲುಗಾರರಾಗಿ ಠಾಣದಲ್ಲಿದ್ದವರೂ ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ ಉಳಿದ ಎಲ್ಲಾ ಜನರೂ ಭಯದಿಂದ ನಡುಗಹತ್ತಿದರು. ಇದಲ್ಲದೆ ದೇವರು ಭೂಕಂಪವನ್ನುಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.
16
ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿ ಹೋಗುತ್ತಿರುವದನ್ನು ಕಂಡರು.
17
ಸೌಲನು ತನ್ನ ಜೊತೆಯಲ್ಲಿದ್ದವರಿಗೆ - ನಮ್ಮನ್ನು ಬಿಟ್ಟುಹೋದವರು ಯಾರೆಂಬದನ್ನು ಲೆಕ್ಕಮಾಡಿ ನೋಡಿರಿ ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡುವಲ್ಲಿ ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ಇರುವದಿಲ್ಲವೆಂದು ತಿಳಿದುಬಂದಿತು.
18
ಅನಂತರ ಸೌಲನು ಅಹೀಯನಿಗೆ - ಏಫೋದನ್ನು ತೆಗೆದುಕೊಂಡು ಬಾ ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲ್ಯರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.
19
ಸೌಲನು ಯಾಜಕನೊಡನೆ ಮಾತಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆದದರಿಂದ ಅವನು ಕೈ ನಿಲ್ಲಿಸೆಂದು ಯಾಜಕನಿಗೆ ಹೇಳಿ
20
ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು; ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದನು.
21
ಇದಲ್ಲದೆ ಮುಂಚಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು ಸೌಲ ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲ್ಯರನ್ನು ಕೂಡಿಕೊಂಡರು.
22
ಎಫ್ರಾಯೀಮ್ ಪರ್ವತಪ್ರಾಂತದಲ್ಲಿ ಅಡಗಿಕೊಂಡಿದ್ದ ಇಸ್ರಾಯೇಲ್ಯರಿಗೆ ಫಿಲಿಷ್ಟಿಯರು ಓಡಿಹೋದರೆಂಬ ವರ್ತಮಾನವು ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.
23
ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು.
24
ಆ ದಿವಸ ಸೌಲನು ಇಸ್ರಾಯೇಲ್ಯರನ್ನು ಕುರಿತು - ಶತ್ರುಗಳಿಗೆ ಮುಯ್ಯಿ ತೀರಿಸುವದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ ಎಂದು ಆಣೆಯಿಟ್ಟಿದ್ದದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರ ಪದಾರ್ಥವನ್ನು ರುಚಿನೋಡಲಿಲ್ಲ.
25
ಜನರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು.
26
ಅವರು ಅಲ್ಲಿ ಜೇನುತುಪ್ಪ ಹರಿಯುವದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ.
27
ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದದರಿಂದ ಅವನು ತನ್ನ ಕೋಲನ್ನು ಜೇನು ತೊಟ್ಟಿಯಲ್ಲಿ ಚುಚ್ಚಿ ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.
28
ಕೂಡಲೆ ಒಬ್ಬನು ಅವನಿಗೆ - ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ ಎಂದು ತಿಳಿಸಿದನು.
29
ಜನರು ಬಹಳವಾಗಿ ಬಳಲಿಹೋದದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ - ನನ್ನ ತಂದೆಯು ದೇಶಕ್ಕೆ ನಷ್ಟವನ್ನುಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.
30
ಜನರು ತಾವು ಇಂದು ಶತ್ರುಗಳಿಂದ ಸುಲುಕೊಂಡ ಆಹಾರವನ್ನು ಯಥೇಚ್ಫವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತವಾಗದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.
31
ಆ ದಿವಸ ಜನರು ವಿುಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದದರಿಂದ
32
ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸದೊಡನೆ ರಕ್ತವನ್ನೂ ತಿಂದರು.
33
ಆಗ ಕೆಲವರು ಸೌಲನಿಗೆ - ನೋಡು, ಜನರು ರಕ್ತವನ್ನು ಭುಜಿಸಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡುತ್ತಾರೆ ಎಂದು ತಿಳಿಸಲು ಅವನು ಅವರಿಗೆ - ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲನ್ನು ಹೊರಳಿಸಿ ತಂದಿಟ್ಟು
34
ಜನರ ಬಳಿಗೆ ಹೋಗಿ ಅವರಿಗೆ - ರಕ್ತವನ್ನು ಭುಜಿಸಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಬೇಡಿರಿ; ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿ ತಂದು ಕೊಂದು ತಿನ್ನಬೇಕೆಂದು ಹೇಳಿರಿ ಅಂದನು. ಹಾಗೆಯೇ ಜನರೆಲ್ಲರೂ ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು.
35
ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.
36
ಸೌಲನು ತನ್ನ ಸೈನಿಕರನ್ನು ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ ಬೆಳಗಾಗುವವರೆಗೆ ಅವರನ್ನು ಸುಲುಕೊಂಡು ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ ಎಂದು ಕರೆಯಲು ಅವರು - ನಿನ್ನ ಇಷ್ಟದಂತೆ ಆಗಲಿ ಎಂದು ಹೇಳಿದರು. ಆದರೆ ಯಾಜಕನು - ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ ಅನ್ನಲು ಸೌಲನು -
37
ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಿಕೊಂಡರೂ ಆತನು ಅವನಿಗೆ ಆ ದಿವಸ ಉತ್ತರ ಕೊಡಲೇ ಇಲ್ಲ.
38
ಆಗ ಸೌಲನು ಪ್ರಜೆಯ ಮುಖಂಡರಿಗೆ - ನೀವೆಲ್ಲರೂ ಇಲ್ಲಿ ಬಂದು ಈ ಹೊತ್ತು ಪಾಪ ಯಾವದರಿಂದುಂಟಾಯಿತೋ ವಿಚಾರಿಸಿ ಗೊತ್ತುಮಾಡಿರಿ.
39
ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ ಅವನು ಸಾಯಲೇಬೇಕು ಎಂದು ಹೇಳಿದನು; ಜನರು ಏನೂ ಮಾತಾಡದೆ ಮೌನವಾಗಿದ್ದರು.
40
ಆಗ ಸೌಲನು ಅವರಿಗೆ - ನೀವೆಲ್ಲರೂ ಒಂದು ಕಡೆಯಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು ಅನ್ನಲು ಅವರು - ನಿನ್ನ ಇಷ್ಟದಂತೆ ಆಗಲಿ ಅಂದರು.
41
ಅನಂತರ ಸೌಲನು - ಇಸ್ರಾಯೇಲ್ ದೇವರೇ ಸತ್ಯವನ್ನು ತಿಳಿಸು ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಲ್ಲಿ ಅದು ಅವನಿಗೂ ಯೋನಾತಾನನಿಗೂ ಬಂದಿತು; ಜನರು ಪಾರಾದರು.
42
ಸೌಲನು ತಿರಿಗಿ - ನಮ್ಮಿಬ್ಬರೊಳಗೆ ಚೀಟುಹಾಕಿರಿ ಎಂದು ಹೇಳಿದನು. ಹಾಗೆಯೇ ಮಾಡಿದಲ್ಲಿ ಚೀಟು ಯೋನಾತಾನನಿಗೆ ಬಿದ್ದಿತು.
43
ಆಗ ಸೌಲನು ಯೋನಾತಾನನನ್ನು - ನೀನು ಏನು ಮಾಡಿದ್ದೀ, ಹೇಳು ಎಂದು ಕೇಳಲು ಅವನು - ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ಸಾಯುವದಕ್ಕೆ ಸಿದ್ಧನಾಗಿದ್ದೇನೆ ಎಂದು ಉತ್ತರಕೊಟ್ಟನು.
44
ಅದಕ್ಕೆ ಸೌಲನು - ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಅನ್ನಲು ಜನರು ಅವನಿಗೆ -
45
ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.
46
ಸೌಲನು ಆಮೇಲೆ ಫಿಲಿಷ್ಟಿಯರನ್ನು ಹಿಂದಟ್ಟದೆ ತನ್ನ ಮನೆಗೆ ಹೋದನು. ಫಿಲಿಷ್ಟಿಯರೂ ತಮ್ಮ ಪ್ರಾಂತಕ್ಕೆ ಹೋದರು.
47
ಸೌಲನು ಇಸ್ರಾಯೇಲ್ಯರ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.
48
ಇದಲ್ಲದೆ ಅವನು ಸುಲಿಗೆಮಾಡುವವರಾದ ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಅವರನ್ನು ಮುರಿಬಡಿದು ಇಸ್ರಾಯೇಲ್ಯರನ್ನು ಅವರ ಕೈಗೆ ಸಿಕ್ಕದಂತೆ ತಪ್ಪಿಸಿದನು.
49
ಸೌಲನ ಗಂಡು ಮಕ್ಕಳು - ಯೋನಾತಾನ್, ಇಷ್ವಿ, ಮಲ್ಕೀಷೂವ. ಅವನ ಹೆಣ್ಣು ಮಕ್ಕಳು - ಮೇರಬ್, ಮೀಕಲ್.
50
ಅಹೀಮಾಚನ ಮಗಳಾದ ಅಹೀನೋವಮಳು ಅವನ ಹೆಂಡತಿ; ನೇರನ ಮಗನಾದ ಅಬ್ನೇರನು ಅವನ ಸೇನಾಪತಿಯು; ನೇರನು ಸೌಲನ ಚಿಕ್ಕಪ್ಪನು.
51
ಸೌಲನ ತಂದೆಯಾದ ಕೀಷನೂ ಅಬ್ನೇರನ ತಂದೆಯಾದ ನೇರನೂ ಅಬೀಯೇಲನ ಮಕ್ಕಳು.
52
ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲ್ಯರಿಗೂ ಘೋರ ಯುದ್ಧವಿದ್ದದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31