bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Samuel 15
1 Samuel 15
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 16 →
1
ಸಮುವೇಲನು ಸೌಲನಿಗೆ - ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ಅಭಿಷೇಕಿಸುವದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವದನ್ನು ಕೇಳು.
2
ಸೇನಾಧೀಶ್ವರನಾದ ಯೆಹೋವನು ನಿನಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.
3
ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಶಿಶುಗಳನ್ನೂ ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ ಅಂದನು.
4
ಸೌಲನು ತೆಲಾಯೀವಿುನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಮಂದಿ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಮಂದಿ ಇದ್ದರು.
5
ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚಿ ನೋಡುತ್ತಿದ್ದನು.
6
ಆದರೆ ಅವನು ಕೇನ್ಯರಿಗೆ - ನೀವು ಅಮಾಲೇಕ್ಯರನ್ನು ಬಿಟ್ಟು ಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.
7
ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಹೊಡೆಯುತ್ತಾ ಹೋದನು.
8
ಅವರ ಅರಸನಾದ ಅಗಾಗನನ್ನು ಸಜೀವಿಯಾಗಿ ಹಿಡಿದು ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.
9
ಸೌಲನೂ ಇಸ್ರಾಯೇಲ್ಯರೂ ಅಗಾಗನನ್ನೂ ಮೇಲ್ತರದ ಕುರಿ ದನಗಳನ್ನೂ ಕುರಿಮರಿಗಳನ್ನೂ ಕೊಬ್ಬಿದ ಪಶುಗಳನ್ನೂ ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡ ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.
10
ಯೆಹೋವನು ಸಮುವೇಲನಿಗೆ - ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ಪಶ್ಚಾತ್ತಾಪಪಡುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸುವದಿಲ್ಲ ಎಂದು ಹೇಳಲು ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಆತನಿಗೆ ಮೊರೆಯಿಟ್ಟನು.
12
ಅವನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವದಕ್ಕೆ ಹೊರಟಾಗ ಅವನಿಗೆ - ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನೆಂಬ ವರ್ತಮಾನವು ಬಂದದರಿಂದ ಸಮುವೇಲನು ಅಲ್ಲಿಗೆ ಹೋದನು.
13
ಸೌಲನು ಅವನನ್ನು ಕಂಡು - ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು ಅಂದನು.
14
ಅದಕ್ಕೆ ಸಮುವೇಲನು - ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ ಎನ್ನಲು
15
ಸೌಲನು - ಜನರು ನಿನ್ನ ದೇವರಾದ ಯೆಹೋವನಿಗೋಸ್ಕರ ಯಜ್ಞಸಲ್ಲಿಸುವದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ವಿುಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು ಎಂದು ಉತ್ತರಕೊಟ್ಟನು.
16
ಆಗ ಸಮುವೇಲನು ಅವನಿಗೆ - ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು ಎನ್ನಲು ಅವನು - ಹೇಳು ಅಂದನು.
17
ಸಮುವೇಲನು - ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದಿ.
18
ಆತನು ನಿನಗೆ - ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು ಎಂದು ಹೇಳಿದನು.
19
ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಎರಗಿ ಆತನಿಗೆ ದ್ರೋಹಮಾಡಿದ್ದೇಕೆ ಅಂದನು.
20
ಆಗ ಸೌಲನು ಸಮುವೇಲನಿಗೆ - ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.
21
ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಾರ್ಪಣೆಮಾಡುವದಕ್ಕಾಗಿ ಉಳಿಸಿ ತಂದರು ಎಂದು ಉತ್ತರಕೊಟ್ಟನು.
22
ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.
23
ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು.
24
ಸೌಲನು ಸಮುವೇಲನಿಗೆ - ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.
25
ನೀನು ದಯವಿಟ್ಟು ನನ್ನ ಪಾಪವನ್ನು ಕ್ಷವಿುಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಅವನನ್ನು ಬೇಡಿಕೊಂಡನು.
26
ಅದಕ್ಕೆ ಸಮುವೇಲನು - ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವದಿಲ್ಲ; ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಇಸ್ರಾಯೇಲ್ಯರ ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ಹೇಳಿ ತಿರುಗಿಕೊಂಡು ಹೊರಡಲು
27
ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.
28
ಆಗ ಸಮುವೇಲನು ಅವನಿಗೆ - ಯೆಹೋವನು ಈ ಹೊತ್ತು ಇಸ್ರಾಯೇಲ್ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.
29
ಇಸ್ರಾಯೇಲ್ಯರ ನಿತ್ಯಾಧಾರನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಯಾಕಂದರೆ ಅವನು ಪಶ್ಚಾತ್ತಾಪಪಡ ಮನುಷ್ಯನಲ್ಲ ಎಂದು ಹೇಳಿದನು.
30
ಅದಕ್ಕೆ ಸೌಲನು - ನಾನು ಪಾಪ ಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲ್ಯರ ಮುಂದೆಯೂ ಜನರ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು; ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವದಕ್ಕಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಬೇಡಿಕೊಳ್ಳಲು ಅವನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು.
31
ಆಗ ಸೌಲನು ದೇವರನ್ನು ಆರಾಧಿಸಿದನು.
32
ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ತರ ಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.
33
ಆದರೆ ಸಮುವೇಲನು ಅವನಿಗೆ - ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರ ಶೋಕವನ್ನುಂಟುಮಾಡಿತು; ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದು ಹಾಕಿದನು.
34
ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು.
35
ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡುವದಕ್ಕೆ ಹೋಗಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪಪಟ್ಟದರಿಂದ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31