bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Samuel 18
1 Samuel 18
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 19 →
1
ದಾವೀದನು ಸೌಲನೊಡನೆ ಮಾತಾಡಿ ತೀರಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ಇವನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.
2
ಅಂದಿನಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೆ ತನ್ನ ಬಳಿಯಲ್ಲೇ ಇಟ್ಟುಕೊಂಡನು.
3
ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಒಡಂಬಡಿಕೆಮಾಡಿಕೊಂಡನು.
4
ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನೂ ತನ್ನ ಯುದ್ಧವಸ್ತ್ರಗಳನ್ನೂ ಕತ್ತಿ ಬಿಲ್ಲು ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.
5
ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡಿಸುತ್ತಿದ್ದನು. ಸೌಲನು ಇವನನ್ನು ಸೇನಾಪತಿಯನ್ನಾಗಿ ನೇವಿುಸಿದನು; ಇದು ಅವನ ಸೇವಕರಿಗೂ ಎಲ್ಲಾ ಜನರಿಗೂ ಸಮ್ಮತವಾಯಿತು.
6
ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಅರಸನಾದ ಸೌಲನನ್ನು ಎದುರುಗೊಂಡರು.
7
ಅವರು ಪರಸ್ಪರವಾಗಿ - ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂದು ಹಾಡಿದರು.
8
ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹುವ್ಯಸನವೂ ಕೋಪವೂ ಉಂಟಾಗಿ ಅವನು - ದಾವೀದನು ಹತ್ತು ಸಾವಿರ ಗಟ್ಟಳೆಯಾಗಿ ಕೊಂದನೆಂದೂ ನಾನು ಸಾವಿರಗಟ್ಟಳೆಯಾಗಿ ಕೊಂದೆನೆಂದೂ ಹಾಡುತ್ತಾರಲ್ಲಾ! ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾದ ಹಾಗಾಯಿತು ಅಂದುಕೊಂಡು
9
ಅಂದಿನಿಂದ ಅವನ ಮೇಲೆ ಕಣ್ಣಿಟ್ಟನು.
10
ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ಕ್ರಮದ ಪ್ರಕಾರ ಕಿನ್ನರಿಯನ್ನು ಬಾರಿಸುತ್ತಾ ಇದ್ದನು.
11
ಆಗ ಸೌಲನು - ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ತಿವಿಯುವೆನೆಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.
12
ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದದರಿಂದ ಸೌಲನು ದಾವೀದನಿಗೆ ಭಯಪಟ್ಟು
13
ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇವಿುಸಿದನು; ಇವನು ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದನು.
14
ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಾ ಕಾರ್ಯಗಳಲ್ಲಿ ಇವನು ವಿವೇಕದಿಂದ ನಡೆಯುತ್ತಿದ್ದನು.
15
ಸೌಲನು ಇದನ್ನು ನೋಡಿ ಅವನಿಗೆ ಬಹಳವಾಗಿ ಹೆದರಿಕೊಂಡನು.
16
ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.
17
ಒಂದು ದಿವಸ ಸೌಲನು - ಇವನು ನನ್ನ ಕೈಯಿಂದಲ್ಲ, ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ - ನೀನು ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು; ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ ಅಂದನು.
18
ಅದಕ್ಕೆ ದಾವೀದನು - ಅರಸನ ಅಳಿಯನಾಗುವದಕ್ಕೆ ನಾನೆಷ್ಟರವನು? ಇಸ್ರಾಯೇಲ್ಯರಲ್ಲಿ ನನ್ನ ಕುಲವೂ ಕುಟುಂಬವೂ ಎಷ್ಟರವು ಎಂದನು.
19
ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ್ ಎಂಬವನಿಗೆ ಮದುವೆಮಾಡಿಕೊಟ್ಟನು.
20
ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು.
21
ಸೌಲನು - ದಾವೀದನಿಗೆ ಉರಲಾಗಿರುವಂತೆಯೂ ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ - ನೀನು ನನ್ನ ಅಳಿಯನಾಗುವದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು ಎಂದು ಹೇಳಿದನು.
22
ಅವನು ತನ್ನ ಸೇವಕರಿಗೆ - ನೀವು ದಾವೀದನಿಗೆ ಗುಪ್ತವಾಗಿ - ಅರಸನು ನಿನಗೆ ಒಲಿಯುತ್ತಾನೆ; ಅವನ ಎಲ್ಲಾ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ; ನೀನು ಅರಸನ ಅಳಿಯನಾಗು ಎಂದು ಪುಸಲಾಯಿಸಿರಿ ಅಂದನು.
23
ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು - ಅರಸನ ಅಳಿಯನಾಗುವದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ ಅಲ್ಪನೂ ಆಗಿರುತ್ತೇನಲ್ಲಾ ಎಂದು ಉತ್ತರಕೊಟ್ಟನು.
24
ದಾವೀದನು ಅಂದದ್ದನ್ನು ಸೇವಕರು ಸೌಲನಿಗೆ ತಿಳಿಸಿದರು.
25
ಆಗ ಅವನು ಅವರಿಗೆ - ನೀವು ಹೋಗಿ ದಾವೀದನಿಗೆ - ಅರಸನು ತೆರವನ್ನು ಅಪೇಕ್ಷಿಸುವದಿಲ್ಲ; ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆಂದು ಹೇಳಿರಿ ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬದೇ ಇದಕ್ಕೆ ಕಾರಣ.
26
ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವದಕ್ಕೆ ಒಪ್ಪಿದನು. ದಾವೀದನು ನೇಮಕವಾದ ದಿನಗಳು ಮುಗಿಯುವ ಮೊದಲೇ
27
ತನ್ನ ಸೈನಿಕರೊಡನೆ ಹೊರಟು ಫಿಲಿಷ್ಟಿಯರ ದೇಶಕ್ಕೆ ಹೋಗಿ ಅಲ್ಲಿನ ಇನ್ನೂರು ಜನರನ್ನು ಕೊಂದು ಮುಂದೊಗಲುಗಳನ್ನು ತಂದು ಅರಸನ ಅಳಿಯನಾಗುವದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು;
28
ಆಕೆಯು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು ಸೌಲನು ತಿಳಿದು
29
ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.
30
ಫಿಲಿಷ್ಟಿಯಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅಧಿಕಜಯಶೀಲನಾಗಿ ಬರುತ್ತಿದ್ದದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 19 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31